ಪೊನ್ನಂಪೇಟೆ, ಸೆ.೨೩: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ನೀಡಲಾಗುವ ೨೦೨೦-೨೧ ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಗ್ರಾಮ ಪಂಚಾಯಿತಿಗಳನ್ನು ಆಯ್ಕೆ ಮಾಡಲಾಗಿದ್ದು, ಕೊಡಗು ಜಿಲ್ಲೆಯ ಮೂರು ಗ್ರಾಮ ಪಂಚಾಯಿತಿಗಳು ಗಾಂಧಿ ಗ್ರಾಮ ಪುರಸ್ಕಾರಕ್ಕೆ ಭಾಜನವಾಗಿವೆ. ಮಡಿಕೇರಿ ತಾಲೂಕಿನ ಹೊದ್ದೂರು ಗ್ರಾಮ ಪಂಚಾಯಿತಿ, ಸೋಮವಾರಪೇಟೆ ತಾಲೂಕಿನ ಮುಳ್ಳುಸೋಗೆ ಗ್ರಾಮ ಪಂಚಾಯಿತಿ, ವೀರಾಜಪೇಟೆ ತಾಲೂಕಿನ ಪೊನ್ನಂಪೇಟೆ ಗ್ರಾಮ ಪಂಚಾಯಿತಿ ಪುರಸ್ಕಾರಕ್ಕೆ ಪಾತ್ರವಾಗಿವೆೆ. ಗಾಂಧಿ ಗ್ರಾಮ ಪುರಸ್ಕಾರ ಪಡೆದ ಪಂಚಾಯಿತಿಗಳಿಗೆ ೫ ಲಕ್ಷ ರೂಪಾಯಿ ನಗದು ಬಹುಮಾನ ನೀಡಲಾಗುತ್ತದೆ.