ಮಡಿಕೇರಿ, ಸೆ. ೨೨: ಉಡುಪಿಯ ಅಜ್ಜರಕಾಡು ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ವಿಭಾಗ ಮಟ್ಟದ ದಸರಾ ವುಶು ಕ್ರೀಡಾಕೂಟದಲ್ಲಿ ಪಾಲೂರಿನ ಆರ್. ಕೃಷಿಕ್ ರಾಜ್ ಹಾಗೂ ಆರ್. ಸಮರ್ಥ ಕಂಚಿನ ಪದಕ ಗೆದ್ದುಕೊಂಡಿದ್ದಾರೆ.

ಇವರು ಪಾಲೂರು ಗ್ರಾಮದ ರಾಜೇಶ್ ಡಿ.ಬಂಗೇರ ಅವರ ಪುತ್ರರಾಗಿದ್ದಾರೆ. ಕೃಷಿಕ್ ರಾಜ್ ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಹಾಗೂ ಸಮರ್ಥ ಮೂರ್ನಾಡು ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾರೆ.

ಕೊಡಗು ವುಶು ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಎನ್.ಸಿ.ಸುದರ್ಶನ್ ಹಾಗೂ ತರಬೇತುದಾರ ಬಿ.ಎ.ಆನಂದ ಪೂಜಾರಿ ಬೆಟ್ಟಗೇರಿ ಅವರ ಮಾರ್ಗದರ್ಶನದಲ್ಲಿ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡರು.