ಕೂಡಿಗೆ, ಸೆ. ೨೩: ನಂಜರಾಯ ಪಟ್ಟಣ ಗ್ರಾಮ ಪಂಚಾಯಿತಿಯ ಗ್ರಾಮ ಸಭೆ ಹೊಸಪಟ್ಟಣದ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಗ್ರಾ.ಪಂ. ಅಧ್ಯಕ್ಷ ಸಿ.ಎಲ್. ವಿಶ್ವ ಅಧ್ಯಕ್ಷತೆಯಲ್ಲಿ ನಡೆಯಿತು.
ಗ್ರಾಮದಲ್ಲಿ ಕಾಡಾನೆ ಹಾವಳಿ ತಡೆಗಟ್ಟಲು ಅರಣ್ಯ ಇಲಾಖೆ ವತಿಯಿಂದ ಅಳವಡಿಸಿರುವ ರೈಲ್ವೇ ಬ್ಯಾರಿಕೆಡ್, ಹ್ಯಾಂಗಿAಗ್ ಸೋಲಾರ್ ಫೆನ್ಸ್ ಯೋಜನೆ ಕಳಪೆ ಗುಣಮಟ್ಟ ವಾದ ಕಾರಣ ವಿಫಲವಾಗಿದ್ದು ಕಾಡಾನೆ ಹಾವಳಿ ನಿರಂತರವಾಗಿ ಮುಂದುವರೆದಿರುವ ಬಗ್ಗೆ ಚರ್ಚೆ ನಡೆಯಿತು.
ಈ ಯೋಜನೆ ವಿಫಲವಾಗಿರುವ ಬಗ್ಗೆ ಅರಣ್ಯ ಇಲಾಖೆ ಮೇಲಧಿ ಕಾರಿಗಳ ಗಮನಕ್ಕೆ ತರಲಾಗಿದೆ. ಕಳಪೆ ಕಾಮಗಾರಿ ನಡೆಸಿದ ಗುತ್ತಿಗೆದಾರರ ವಿರುದ್ಧ ತನಿಖೆಗೆ ಆಗ್ರಹಿಸಲಾಗಿದೆ. ವನ್ಯ ಜೀವಿಗಳ ಹಾವಳಿ ತಡೆಗಟ್ಟಲು ಡಿಎಫ್‌ಓ ಅವರ ನೇತೃತ್ವದಲ್ಲಿ ವಿಶೇಷ ಗ್ರಾಮಸಭೆ ಹಮ್ಮಿಕೊಳ್ಳುವ ಬಗ್ಗೆ ಹಾಗೂ ಕಾಡಾನೆ ಹಾವಳಿ ನಿಯಂತ್ರಣಕ್ಕೆ ಬರದಿದ್ದಲ್ಲಿ ಪಂಚಾಯಿತಿ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಅಧ್ಯಕ್ಷ ಸಿ.ಎಲ್. ವಿಶ್ವ ತಿಳಿಸಿದರು. ಇದಕ್ಕೆ ಸದಸ್ಯ ಆರ್.ಕೆ. ಚಂದ್ರ ದನಿಗೂಡಿಸಿ, ಕಳಪೆ ಕಾಮಗಾರಿ ನಡೆಸಿದ ಗುತ್ತಿಗೆದಾರನ ವಿರುದ್ಧ ಸೂಕ್ತ ತನಿಖೆಗೆ ಆಗ್ರಹಿಸಿದರು.
ಗ್ರಾಮದಲ್ಲಿ ಸ್ಮಶಾನ ಸಮಸ್ಯೆ ಬಗ್ಗೆ ಗ್ರಾಮಸ್ಥರು ಸಭೆಯ ಗಮನಕ್ಕೆ ತಂದರು. ಅಲ್ಪಸಂಖ್ಯಾತರ ಸ್ಮಶಾನದ ಪಕ್ಕ ಅರಣ್ಯ ಪೈಸಾರಿ ಜಾಗದಲ್ಲಿ ಶವಸಂಸ್ಕಾರಕ್ಕೆ ಅರಣ್ಯ ಇಲಾಖೆ ಯಿಂದ ತೊಂದರೆ ಉಂಟಾಗುತ್ತಿದೆ ಎಂದು ಗ್ರಾಮಸ್ಥರಾದ ಅಪ್ಪು ಮತ್ತಿತರರು ಆರೋಪಿಸಿದರು. ಹೊಸದಾಗಿ ನಂಜರಾಯಪಟ್ಟಣ ಮತ್ತು ವಿರುಪಾಕ್ಷಪುರದಲ್ಲಿ ಗುರುತಿಸಿ ರುವ ಸ್ಮಶಾನದಿಂದ ಸಾರ್ವಜನಿಕರಿಗೆ ಸಮಸ್ಯೆ, ರಸ್ತೆ ಸಂಪರ್ಕ ಕೊರತೆ ಎದುರಾಗಿದೆ. ಸಮಸ್ಯೆ ಒಳಗೊಂಡ ಸ್ಮಶಾನದ ಬದಲಾಗಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಒಂದೆಡೆ ಸ್ಮಶಾನಕ್ಕೆ ಸೂಕ್ತ ಸ್ಥಳ ಗುರುತಿಸಲು ಗ್ರಾಮಸ್ಥರು ಆಗ್ರಹಿಸಿದರು. ಈ ಬಗ್ಗೆ ಸಭೆಯಲ್ಲಿ ತೀವ್ರ ಚರ್ಚೆ ನಡೆದು ಸಾರ್ವಜನಿಕರಿಗೆ ಅನುಕೂಲವಾಗುವ ಪ್ರದೇಶದಲ್ಲಿ ಸ್ಮಶಾನಕ್ಕೆ ಜಾಗ ಗುರುತಿಸಲು ಪತ್ರ ವ್ಯವಹಾರ ನಡೆಸಲು ನಿರ್ಣಯ ಕೈಗೊಳ್ಳ ಲಾಯಿತು. ಕುಶಾಲನಗರ ತಾಲೂಕಾಗಿ ಮೇಲ್ದರ್ಜೆಗೇರಿದ್ದು ನಂಜರಾಯ ಪಟ್ಟಣ ಗ್ರಾಮವನ್ನು ಹೋಬಳಿ ಕೇಂದ್ರವಾಗಿಸುವ ಬಗ್ಗೆ ಸಭೆಯಲ್ಲಿ ಪ್ರಸ್ತಾಪದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅಧ್ಯಕ್ಷರು, ಹೋಬಳಿ ಕೇಂದ್ರವಾಗುವ ಸಾಧ್ಯತೆ ಕಡಿಮೆಯಿದೆ. ಅಂತಹ ಅವಕಾಶಗಳಿದ್ದಲ್ಲಿ ಹೋಬಳಿ ಕೇಂದ್ರ ರಚನೆಗೆ ಒತ್ತಾಯಿಸಿ ಗ್ರಾಮಸ್ಥ ರೊಂದಿಗೆ ಹೋರಾಟ ರೂಪಿಸಲು ಸಿದ್ಧವಿರುವುದಾಗಿ ತಿಳಿಸಿದರು.
ದುಬಾರೆಯಲ್ಲಿ ಕಾವೇರಿ ನದಿ ದಾಟಲು ಹೆಚ್ಚುವರಿ ಮೋಟಾರ್ ಬೋಟ್ ಅಗತ್ಯತೆ, ತೂಗು ಸೇತುವೆ ನಿರ್ಮಾಣದ ಬೇಡಿಕೆ ಇದುವರೆಗೆ ಈಡೇರದ ಬಗ್ಗೆ ಅಸಮಾಧಾನ ವ್ಯಕ್ತಗೊಂಡಿತು. ಪ್ರವಾಸಿಗರು, ಗ್ರಾಮಸ್ಥರ ಅನುಕೂಲಕ್ಕಾಗಿ ತೂಗು ಸೇತುವೆ ನಿರ್ಮಾಣಕ್ಕೆ ಪ್ರವಾ ಸೋದ್ಯಮ ಇಲಾಖೆಯಿಂದ ಅರಣ್ಯ ಇಲಾಖೆಗೆ ಅನುದಾನ ಬಿಡುಗಡೆ ಗೊಂಡಿತ್ತು. ಆದರೆ ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷö್ಯ ದಿಂದ ಈ ಯೋಜನೆ ಸಾಕಾರ ಗೊಳ್ಳಲಿಲ್ಲ ಎಂದು ಉದ್ಯಮಿ ರತೀಶ್ ಸಭೆಯಲ್ಲಿ ಆಕ್ರೋಷ ವ್ಯಕ್ತಪಡಿಸಿದರು.
ಸಭೆಯಲ್ಲಿ ಪಾಲ್ಗೊಂಡಿದ್ದ ವಿವಿಧ ಇಲಾಖೆಯ ಅಧಿಕಾರಿಗಳು ಇಲಾಖಾವಾರು ಯೋಜನೆಗಳ ಬಗ್ಗೆ ಸಭೆಗೆ ಮಾಹಿತಿ ನೀಡಿದರು. ಕೃಷಿ ಇಲಾಖೆಯ ತಾಲೂಕು ಸಹಾಯಕ ಅಧಿಕಾರಿ ಕಾವ್ಯ ನೋಡಲ್ ಅಧಿಕಾರಿ ಯಾಗಿ ಕಾರ್ಯನಿರ್ವಹಿಸಿದರು. ಸಭೆಯಲ್ಲಿ ಗ್ರಾ.ಪಂ. ಉಪಾಧ್ಯಕ್ಷೆ ಸಮೀರ, ಸದಸ್ಯರಾದ ಅಯ್ಯಂಡ್ರ ಲೋಕನಾಥ್, ಜಾಜಿ ತಮ್ಮಯ್ಯ, ಮಾವಾಜಿ ರಕ್ಷಿತ್, ಕುಸುಮ, ಗಿರಿಜಮ್ಮ, ಪಿಡಿಒ ಬಿ.ಎಂ. ಕಲ್ಪ, ಕಾರ್ಯದರ್ಶಿ ಶೇಷಗಿರಿ ಸೇರಿದಂತೆ ಗ್ರಾಮಸ್ಥರು ಇದ್ದರು.