ಕುಶಾಲನಗರ, ಸೆ.೨೩: ಕುಶಾಲನಗರ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಎದುರುಗಡೆ ಇರುವ ಮರ ಗಿಡಗಳನ್ನು ಹಾನಿ ಮಾಡದೆ ಅವುಗಳಲ್ಲಿ ನೆಲೆ ಕಂಡಿರುವ ಪಕ್ಷಿಗಳನ್ನು ಸಂರಕ್ಷಣೆ ಮಾಡುವಂತೆ ಅರಣ್ಯ ಇಲಾಖೆ ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ಕುಶಾಲನಗರ ಪಟ್ಟಣದ ಹೃದಯ ಭಾಗದಲ್ಲಿ ಸರ್ಕಾರಿ ಬಸ್ ನಿಲ್ದಾಣ ಮತ್ತು ಹೆದ್ದಾರಿ ರಸ್ತೆಯ ಒತ್ತಿನಲ್ಲಿ ಕಾವೇರಿ ಪರಿಸರ ಸಂರಕ್ಷಣಾ ಬಳಗÀ, ಅರಣ್ಯ ಇಲಾಖೆ ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಹಲವು ಗಿಡ, ಮರಗಳನ್ನು ನೆಟ್ಟು ಬೆಳೆಸಲಾಗಿದ್ದು, ಆ ಮರಗಳಲ್ಲಿ ವಿಶೇಷ ತಳಿಯ ನೂರಾರು ಪಕ್ಷಿಗಳು ಸಂತಾನೋತ್ಪತ್ತಿಗಾಗಿ ವಲಸೆ ಬಂದು ನೆಲೆಸಿವೆ. ಕ್ಷÄಲ್ಲಕ ನೆಪವೊಡ್ಡಿ ಈ ಮರಗಳನ್ನು ತೆರವುಗೊಳಿಸಲು ಕೆಲವರು ಪ್ರಯತ್ನಿಸುತ್ತಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ರಾಜ್ಯ ಉಚ್ಚ ನ್ಯಾಯಾಲಯದ ಹಿರಿಯ ವಕೀಲ ಎನ್.ಪಿ. ಅಮೃತೇಶ್ ಸಂಬAಧಿಸಿದ ಅರಣ್ಯ ಇಲಾಖೆ, ಕೆಎಸ್‌ಆರ್‌ಟಿಸಿ ಹಿರಿಯ ಅಧಿಕಾರಿಗಳಿಗೆ ಮತ್ತು ಪಟ್ಟಣ ಪಂಚಾಯಿತಿ ಕಚೇರಿಗೆ ಇತ್ತೀಚೆಗೆ ಪತ್ರ ಬರೆದಿದ್ದರು.

ಈ ಕಾರಣದಿಂದ ಅರಣ್ಯ ಇಲಾಖೆ ಮತ್ತು ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧಿಕಾರಿಗಳು ಹಾಗೂ ಸ್ಥಳೀಯ ಸಂಸ್ಥೆಗಳು ಈ ಮರಗಳಿಗೆ ಯಾವುದೇ ರೀತಿಯ ಹಾನಿ ಮಾಡದಂತೆ ವಕೀಲ ಎನ್.ಪಿ. ಅಮೃತೇಶ್ ಅವರ ಪತ್ರದ ಮೇರೆಗೆ ಇಲಾಖೆಯ ಹಿರಿಯ ಅಧಿಕಾರಿಗಳು ಈ ಬಗ್ಗೆ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಂಡು ವರದಿಯನ್ನು ಸಲ್ಲಿಸುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಅರಣ್ಯ ಇಲಾಖೆ ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸೂಚಿಸಿದ್ದಾರೆ.

-ಸಿಂಚು