ಕಣಿವೆ, ಸೆ. ೨೨: ಶುದ್ಧ ಭಾವನೆಗಳ ರಸಗಂಗೆ. ಪವಿತ್ರ ಭಾವನೆಗಳ ಜಲಧಾರೆ ಎಂದು ಕರ್ನಾಟಕ ಪ್ರದೇಶ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಸಿ. ಸೋಮಶೇಖರ ಹೇಳಿದರು.

ಕುಶಾಲನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಬಸವನಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ ವಚನ ಸಾಹಿತ್ಯ ಹಾಗೂ ಸಾಮಾಜಿಕ ಬದ್ಧತೆ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದ ಅವರು, ವರ್ಣಭೇದ, ವರ್ಗಭೇದ ಹಾಗೂ ಲಿಂಗಭೇದವಿಲ್ಲದ ಸಮಾನತೆಯ ಸುಂದರ ಸಮಾಜದ ಪ್ರತಿಪಾದನೆಗೆ ವಚನ ಸಾಹಿತ್ಯ ಒಂದು ಅತ್ಯಂತ ಪ್ರಭಾವಿ ಅಭಿವ್ಯಕ್ತಿ ಸಾಧನ ಎಂದರು.

ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಮಾತನಾಡಿ, ವ್ಯಕ್ತಿ ಶುದ್ದಿಯೊಂದಿಗೆ ಸಮಾಜದ ಶುದ್ಧಿಯನ್ನು ಸಾಧಿಸಬೇಕೆಂದು ಶರಣರು ಅಂದು ಜಗತ್ತಿಗೆ ನೀಡಿದ ಕೊಡುಗೆಯೆ ವಚನ ಸಾಹಿತ್ಯ ಎಂದರು. ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಎಂ.ಪಿ. ಕೇಶವ ಕಾಮತ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ರಾಜ್ಯ ಉಚ್ಛ ನ್ಯಾಯಾಲಯದ ಹಿರಿಯ ವಕೀಲ ಹೆಚ್.ಎಸ್. ಚಂದ್ರಮೌಳಿ ಮಾತನಾಡಿದರು.

ಜಿಲ್ಲಾ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್, ಸೋಮವಾರಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ. ಸುರೇಶ್, ವೀರಾಜಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲ ಬೀಳಗಿ, ಕುಶಾಲನಗರ ತಾಲೂಕು ಕಸಾಪ ಅಧ್ಯಕ್ಷ ಕೆ.ಎಸ್. ಮೂರ್ತಿ, ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಮುನೀರ್ ಅಹಮದ್, ಕೋಶಾಧಿಕಾರಿ ಜೋಯಪ್ಪ, ನಿರ್ದೇಶಕರಾದ ಫ್ಯಾನ್ಸಿ ಮುತ್ತಣ್ಣ, ಮಂಜುನಾಥ್, ತಾಲೂಕು ಕಸಾಪ ಗೌರವ ಕಾರ್ಯದರ್ಶಿ ಎಸ್. ನಾಗರಾಜು, ಕೋಶಾಧಿಕಾರಿ ಕೆ.ವಿ. ಉಮೇಶ್, ನಿರ್ದೇಶಕರಾದ ಟಿ.ವಿ. ಶೈಲ, ಹೇಮಲತ, ಲೀಲಾಕುಮಾರಿ, ಕಾಳಪ್ಪ, ಕಾಮಾಕ್ಷಿ ಮತ್ತಿತರರಿದ್ದರು. ಬಸವನಹಳ್ಳಿ ಶಾಲೆಯ ಪ್ರಾಂಶುಪಾಲೆ ಶ್ರೀದೇವಿ ಸ್ವಾಗತಿಸಿದರು. ಶಿಕ್ಷಕ ರಮೇಶ್ ನಿರೂಪಿಸಿದರು. ಇದೇ ಸಂದರ್ಭ ತಾಲೂಕು ಕಸಾಪ ವತಿಯಿಂದ ಡಾ. ಸೋಮಶೇಖರ ಅವರನ್ನು ಸನ್ಮಾನಿಸಲಾಯಿತು.