ಪೊನ್ನಂಪೇಟೆ. ಸೆ. ೨೨: ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಹಯೋಗದಲ್ಲಿ ನಡೆದ ವೀರಾಜಪೇಟೆ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ವಾರ್ಷಿಕ ಕ್ರೀಡಾಕೂಟದಲ್ಲಿ ಗೋಣಿಕೊಪ್ಪಲು ಸಮೀಪದ ಅರ್ವತೊಕ್ಕಲು ಸರ್ವದೈವತಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಉತ್ತಮ ಪ್ರದರ್ಶನ ತೋರುವ ಮೂಲಕ ವಿವಿಧ ಕ್ರೀಡೆಗಳಲ್ಲಿ ಜಯಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಪ್ರಾಥಮಿಕ ಶಾಲಾ ಬಾಲಕರ ವಿಭಾಗದ ಥ್ರೋಬಾಲ್, ವಾಲಿಬಾಲ್, ಟೇಬಲ್ ಟೆನ್ನಿಸ್, ಬಾಲಕಿಯರ ವಿಭಾಗದಲ್ಲಿ ಥ್ರೋಬಾಲ್, ವಾಲಿಬಾಲ್, ಪ್ರೌಢಶಾಲಾ ಬಾಲಕರ ವಿಭಾಗದಲ್ಲಿ ಥ್ರೋಬಾಲ್, ವಾಲಿಬಾಲ್, ಟೇಬಲ್ ಟೆನ್ನಿಸ್, ಬಾಲಕಿಯರ ಥ್ರೋಬಾಲ್ ಹಾಗೂ ಟೇಬಲ್ ಟೆನ್ನಿಸ್‌ನಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವೈಯಕ್ತಿಕ ವಿಭಾಗದಲ್ಲಿ ಚೆಸ್‌ನಲ್ಲಿ ಪ್ರಾಥಮಿಕ ವಿಭಾಗದಿಂದ ಅಮಿತ್, ಪ್ರೌಢಶಾಲಾ ವಿಭಾಗದಿಂದ ಸಿ.ಸಿ. ಭೀಮಯ್ಯ, ದಿಗಂತ್ ದೇವಯ್ಯ, ಅಮೃತ್ ನಾಣಯ್ಯ, ಆರೋಮಲ್, ಆಬಿಕ್ಷ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ತರಬೇತುದಾರರಾದ ವಿ.ಎನ್. ಪ್ರಮೋದ್ ಹಾಗೂ ಹೆಚ್.ಹೆಚ್. ರವಿಚಂದ್ರ ಅವರ ಮಾರ್ಗದರ್ಶದಲ್ಲಿ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ.