ಸೋಮವಾರಪೇಟೆ, ಸೆ. ೨೨: ಬಿ.ಜೆ.ಪಿ. ಮಹಿಳಾ ಮೋರ್ಚಾದ ಮಾಜಿ ಅಧ್ಯಕ್ಷೆ ಹಾಗೂ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ, ಮಾಜಿ ಎಂ.ಎಲ್.ಸಿ. ಬಿ.ಬಿ. ಶಿವಪ್ಪ ಅವರ ಪತ್ನಿ ಸುಶೀಲಮ್ಮ ಶಿವಪ್ಪ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಶಾಸಕ ರಂಜನ್ ಯೋಗಕ್ಷೇಮ ವಿಚಾರಿಸಿದರು.

ಬಿ.ಜೆ.ಪಿ. ರಾಜ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯರಾಗಿದ್ದ ದಿ. ಬಿ.ಬಿ. ಶಿವಪ್ಪ ಅವರ ಪತ್ನಿ ಸುಶೀಲ ಶಿವಪ್ಪ ವಯೋಸಹಜ ಕಾಯಿಲೆಯಿಂದ ಹಾಸಿಗೆ ಹಿಡಿದಿದ್ದಾರೆ. ಕುಂಬ್ರಳ್ಳಿಯಲ್ಲಿರುವ ಅವರ ಮನೆಯಲ್ಲಿಯೇ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.

ಶಾಸಕ ರಂಜನ್ ಅವರೊಂದಿಗೆ ಕೊಡಗು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಾಜಿ ಅಧ್ಯಕ್ಷ ಬಿ.ಡಿ. ಮಂಜುನಾಥ್, ಪಟ್ಟಣ ಪಂಚಾಯಿತಿ ಸದಸ್ಯರುಗಳಾದ ಜಯಣ್ಣ, ಎಸ್. ಮಹೇಶ್, ಸೋಮೇಶ್, ಕೊಡ್ಲಿಪೇಟೆ ವೀರಶೈವ ಸಮಾಜದ ಉಪಾಧ್ಯಕ್ಷ ಯತೀಶ್ ಅವರುಗಳು ಇದ್ದರು.