ಸೋಮವಾರಪೇಟೆ, ಸೆ. ೨೨: ತಾಲೂಕು ವಿಶ್ವಕರ್ಮ ಸಮಾಜದ ವತಿಯಿಂದ ಇಲ್ಲಿನ ಮಹಿಳಾ ಸಮಾಜದ ಸಭಾಂಗಣದಲ್ಲಿ ವಿಶ್ವಕರ್ಮ ವಾರ್ಷಿಕ ಪೂಜಾ ಮಹೋತ್ಸವ ಸಮಾರಂಭ ಅಧ್ಯಕ್ಷ ಎಸ್.ಬಿ. ಯಶ್ವಂತ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಪೂಜಾ ವಿಧಿ ವಿಧಾನಗಳನ್ನು ಪುರೋಹಿತ ದಯಾನಂದ ಶರ್ಮ ನೆರವೇರಿಸಿದರು. ಈ ಸಂದರ್ಭ ಕೊಡಗು ಜಿಲ್ಲಾ ವಿಶ್ವಕರ್ಮ ಒಕ್ಕೂಟದ ಅಧ್ಯಕ್ಷ ಎಸ್.ಜೆ. ದೇವದಾಸ್, ಗೌರವ ಅಧ್ಯಕ್ಷರಾದ ಎಸ್.ಬಿ. ಲೀಲಾರಾಂ, ಮಹಿಳಾ ಸಮಿತಿ ಅಧ್ಯಕ್ಷೆ ಶಾಂತಿ ದೇವದಾಸ್, ಪ್ರಧಾನ ಕಾರ್ಯದರ್ಶಿ ಎನ್.ಪಿ. ರಾಜು ಸೇರಿದಂತೆ ಸಮಾಜ ಬಾಂಧವರು ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಶೇ. ೮೦ಕ್ಕಿಂತ ಹೆಚ್ಚಿನÀ ಅಂಕಗಳಿಸಿದ ಸಮುದಾಯದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.