ವೀರಾಜಪೇಟೆ, ಸೆ. ೨೨: ತಾ. ೨೫ ರಂದು ವೀರಾಜಪೇಟೆ ಸಮೀಪದ ಬೇಟೋಳಿ ಪುದುಪಾಡಿ ಶ್ರೀ ಅಯ್ಯಪ್ಪ ಸಭಾ ಭವನದಲ್ಲಿ ಕೊಡಗು ಭಾಲಾವಲೀಕಾರ್ ಉತ್ತಮ ಜೀವನ ಸಹಕಾರ ಸಂಘ ಮತ್ತು ಪುತ್ತೂರು ಭಾಲಾವಲೀಕಾರ್ ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಸೇವಾ ಸಂಘ ವತಿಯಿಂದ ಪುತ್ತೂರು ಸಂಘದ ಶತಮಾನೋತ್ಸವದ ಪ್ರಯುಕ್ತ ಸಮ್ಮಿಲನ ಹಾಗೂ ಸನ್ಮಾನ ಕಾರ್ಯಕ್ರಮವು ಜರುಗಲಿದೆ.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಡಗು ಭಾಲಾವಲೀಕಾರ್ ಉತ್ತಮ ಜೀವನ ಸಹಕಾರ ಸಂಘದ ಉಪಾಧ್ಯಕ್ಷ ಬಿ. ಆರ್. ವಾಸುದೇವ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪುತ್ತೂರು ಶತಮಾನೋತ್ಸವ ಸಮಿತಿಯ ಗೌರವ ಅಧ್ಯಕ್ಷ ಎಸ್. ಆರ್. ಸತೀಶ್ಚಂದ್ರ, ಪುತ್ತೂರು ಗೌಡ ಸಾರಸ್ವತ ಬ್ರಾಹ್ಮಣ ಸಂಘದ ಅಧ್ಯಕ್ಷ ಬಾಲಕೃಷ್ಣ ನಾಯಕ್, ಮಾಜಿ ಅಧ್ಯಕ್ಷರಾದ ಬಿ. ಆರ್. ಶುಭಾಕರ್ ರಾವ್ ಹಾಗೂ ಕೊಡಗು ಭಾಲಾವಲೀಕಾರ್ ಸಂಘದ ಕಾರ್ಯದರ್ಶಿಗಳಾದ ಬಿ. ಆರ್. ಉದಯಶಂಕರ್, ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಅಧ್ಯಕ್ಷ ಡಾ. ರಾಮಕೃಷ್ಣ ಬೋರ್ಕರ್ ಉಪಸ್ಥಿತರಿರಲಿದ್ದಾರೆ.

ಈ ಸಂದರ್ಭದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸಮಾಜದ ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ನಡೆಯಲಿದೆ ಎಂದು ಕಾರ್ಯಕ್ರಮದ ಆಯೋಜಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.