ಸೋಮವಾರಪೇಟೆ, ಸೆ. ೨೨: ಮೊಗೇರಾ ಜನಾಂಗದ ನಿವೇಶನ ರಹಿತರಿಗೆ ಒಂದು ತಿಂಗಳೊಳಗಾಗಿ ಸೂಕ್ತ ನಿವೇಶನ ಕಲ್ಪಿಸದಿದ್ದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಆಹೋರಾತ್ರಿ ಧರಣಿ ನಡೆಸಲಾಗುವುದು ಎಂದು ಕೊಡಗು ಜಿಲ್ಲಾ ಮೊಗೇರ ಸೇವಾ ಸಮಾಜ ಎಚ್ಚರಿಕೆ ನೀಡಿದೆ.

ಇಲ್ಲಿನ ಪತ್ರಿಕಾಭವನದಲ್ಲಿ ಆಯೋಜಿಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಸಮಾಜದ ಜಿಲ್ಲಾಧ್ಯಕ್ಷ ಗೌತಮ್ ಶಿವಪ್ಪ ಮಾತನಾಡಿ, ಮೊಗೇರ ಜನಾಂಗವು ಪರಿಶಿಷ್ಟ ಜಾತಿಗೆ ಸೇರಿದ್ದು, ಜಿಲ್ಲೆಯಲ್ಲಿ ಅಂದಾಜು ೩೦ ರಿಂದ ೪೦ ಸಾವಿರ ಜನಸಂಖ್ಯೆಯನ್ನು ಹೊಂದಿದೆ. ಇಂದಿಗೂ ಸಮಾಜದ ಶೇಖಡ ೮೦ ರಷ್ಟು ಜನರು ಕಾಫಿ ತೋಟದ ಲೈನ್‌ಮನೆಯಲ್ಲಿ ಮತ್ತು ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ. ಸುಮಾರು ೬೦ ವರ್ಷದಿಂದ ನಿವೇಶನ ವಂಚಿತರಾಗಿದ್ದಾರೆ ಎಂದರು.

ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲೂ ಪೈಸಾರಿ ಜಾಗವಿದ್ದು ಅದನ್ನು ಸರಿಯಾದ ಅರ್ಹ ಫಲಾನುಭವಿಗಳಿಗೆ ಮಂಜೂರು ಮಾಡಬೇಕೆಂದು ಒತ್ತಾಯಿಸಿದ ಅವರು, ಸೋಮವಾರಪೇಟೆ ತಾಲೂಕಿಗೆ ಸಂಬAಧಿಸಿದAತೆ ಈಗಾಗಲೇ ತಹಶೀಲ್ದಾರ್‌ರವರಿಗೆ ಮನವಿ ಪತ್ರವನ್ನು ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಮುಂದಿನ ೧೫ ದಿನಗಳ ಒಳಗಾಗಿ ಜಿಲ್ಲೆಯ ನಿವೇಶನ ರಹಿತ ಮೊಗೇರ ಸಮುದಾಯದ ಕುಟುಂಬಗಳಿಗೆ ನಿವೇಶನ ವಿತರಿಸಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು. ತಪ್ಪಿದ್ದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಸಮಾಜದ ವತಿಯಿಂದ ಆಹೋರಾತ್ರಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದರು.

ಗೋಷ್ಠಿಯಲ್ಲಿ ಸೋಮವಾರಪೇಟೆ ತಾಲೂಕು ಅಧ್ಯಕ್ಷ ಕೆ.ಎ. ದಿನೇಶ್, ಉಪಾಧ್ಯಕ್ಷ ಕೆ.ಬಿ. ನಂದ, ಪ್ರಧಾನ ಕಾರ್ಯದರ್ಶಿ ಬಿ. ಶಿವಪ್ಪ, ಖಜಾಂಚಿ ಜಯಪ್ರಕಾಶ್ ಇದ್ದರು.