ಮಡಿಕೇರಿ, ಸೆ. ೨೩: ಮಡಿಕೇರಿ ಸುಂಟಿಕೊಪ್ಪ ರಸ್ತೆಯ ಇಬ್ನಿ ರೆಸಾರ್ಟ್ ಬಳಿ ಮೀಸಲು ಅರಣ್ಯಕ್ಕೆ ಹೋಗುವ ಮುಖ್ಯ ರಸ್ತೆ ಬದಿಯಲ್ಲಿ ಜೆ.ಎಂ. ಕಾರ್ತಿಕ್ ಮತ್ತು ಹರೀಶ್ ಎಸ್.ಹೆಚ್. ಎಂಬವರು ಸರ್ಕಾರದ ಪರವಾನಗಿ ಇಲ್ಲದೆ ಅಕ್ರಮವಾಗಿ ಒಂದು ಜೀವಂತ ನವಿಲನ್ನು ವಶದಲ್ಲಿಟ್ಟುಕೊಂಡು ಮಾರಾಟ ಮಾಡಲು ಪ್ರಯತ್ನಿಸುತ್ತಿರುವಾಗ ಪತ್ತೆ ಮಾಡಿ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ಬಂಧಿಸಲಾಗಿದೆ.

ಸಿಐಡಿ ಪೊಲೀಸ್ ಅರಣ್ಯ ಘಟಕದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಕೆ.ವಿ. ಶರತ್‌ಚಂದ್ರ ನಿರ್ದೇಶನದ ಮೇರೆಗೆ ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯ ಘಟಕದ ಪೊಲೀಸ್ ಅಧೀಕ್ಷಕ ಕೆ.ಬಿ. ವಿಶ್ವನಾಥ್ ಅವರ ಮಾರ್ಗದರ್ಶನದಲ್ಲಿ ಮಡಿಕೇರಿ ಅರಣ್ಯ ಸಂಚಾರಿ ದಳದ ಪಿಎಸ್‌ಐ ಸಿ.ಯು. ಸವಿ, ಹೆಡ್‌ಕಾನ್ಸ್ ಟೇಬಲ್‌ಗಳಾದ ಶೇಖರ್, ರಾಜೇಶ್, ರಾಘವೇಂದ್ರ, ಯೋಗೇಶ್, ಮೋಹನ ಮತ್ತು ಕಾನ್ಸ್ಟೇಬಲ್ ಗಳಾದ ಸ್ವಾಮಿ, ಮಂಜುನಾಥ ಪಾಲ್ಗೊಂಡಿದ್ದರು.