ಗೋಣಿಕೊಪ್ಪಲು, ಸೆ. ೨೩: ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಹಮ್ಮಿಕೊಂಡಿರುವ ಭಾರತ್ ಜೋಡೊ ಪಾದಯಾತ್ರೆಯು ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದೆ. ರಾಹುಲ್ ಗಾಂಧಿ ನಡೆಸುತ್ತಿರುವ ಈ ಕಾರ್ಯಕ್ರಮಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಈ ನಿಟ್ಟಿನಲ್ಲಿ ಮೈಸೂರಿನಲ್ಲಿ ಅ.೧ರಂದು ಪಾದಯಾತ್ರೆ ಜರುಗಲಿದೆ ಎಂದು ಕಾಂಗ್ರೆಸ್ ಪಕ್ಷದ ಕೆಪಿಸಿಸಿ ವಕ್ತಾರ ಹಾಗೂ ಕೊಡಗು ಕಾಂಗ್ರೆಸ್‌ನ ಉಸ್ತುವಾರಿ ವಹಿಸಿರುವ ಲಕ್ಷö್ಮಣ್ ತಿಳಿಸಿದರು.

ಗೋಣಿಕೊಪ್ಪಲು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸಭಾಂಗಣದಲ್ಲಿ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್‌ನ ಅಧ್ಯಕ್ಷ ಮೀದೇರಿರ ನವೀನ್ ಅಧ್ಯಕ್ಷತೆಯಲ್ಲಿ ಪಕ್ಷದ ಮುಖಂಡರ ಹಾಗೂ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಭಾರತ್ ಜೋಡೋ ಕಾರ್ಯಕ್ರಮಕ್ಕೆ ಕಾರ್ಯಕರ್ತರು ಸ್ವಯಂ ಪ್ರೇರಿತರಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಬೆಂಬಲ ನೀಡಬೇಕು. ಪಕ್ಷದ ಆಂತರಿಕ ಸಮಸ್ಯೆಗಳನ್ನು ನಾಯಕರುಗಳು ಬಗೆ ಹರಿಸಲಿದ್ದಾರೆ. ಇವುಗಳ ಬಗ್ಗೆ ಕಾರ್ಯಕರ್ತರಲ್ಲಿ ಗೊಂದಲ ಬೇಡ ಎಂದರು. ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಮಾತನಾಡಿ, ಪಕ್ಷ ಸಂಘಟನೆಗೆ ಒತ್ತು ನೀಡಲು ಕರೆ ನೀಡಿದರು.

ವಿಧಾನ ಪರಿಷತ್ ಮಾಜಿ ಸದಸ್ಯೆ ಶಾಂತೆಯAಡ ವೀಣಾ ಅಚ್ಚಯ್ಯ ಮಾತನಾಡಿ, ಮೈಸೂರಿನಲ್ಲಿ ನಡೆಯುವ ಕಾಂಗ್ರಸ್ ಪಕ್ಷದ ಭಾರತ್ ಜೋಡೊ ಕಾರ್ಯಕ್ರಮದಲ್ಲಿ ಕೊಡಗಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು. ಇಲ್ಲಿನ ಸಾಂಪ್ರದಾಯಿಕ ಉಡುಗೆಯಲ್ಲಿ ಭಾಗವಹಿಸುವ ಮೂಲಕ ಗಮನ ಸೆಳೆಯುವಂತಾಗಬೇಕು ಎಂದು ಕಾರ್ಯಕರ್ತರಿಗೆ ತಿಳಿಸಿದರು. ವಿಧಾನ ಪರಿಷತ್ ಮಾಜಿ ಸದಸ್ಯ ಸಿ.ಎಸ್.ಅರುಣ್ ಮಾಚಯ್ಯ ಮಾತನಾಡಿ, ಬಿಜೆಪಿ ಪಕ್ಷ ಜನವಿರೋಧಿ ನಡೆ ಅನುಸರಿಸುತ್ತಿದ್ದು, ಮುಂದಿನ ಚುನಾವಣೆಯಲ್ಲಿ ಜನರು ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಮಾತನಾಡಿ, ಭಾರತ್ ಜೋಡೊ ಕಾರ್ಯಕ್ರಮವು ಈಗಾಗಲೇ ಜನಪರ ಪ್ರಶಂಸೆಗೆ ಕಾರಣವಾಗಿದೆ. ಹೀಗಾಗಿ ಪ್ರತಿ ಪ್ರದೇಶದಲ್ಲೂ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸುತ್ತಿದ್ದಾರೆ. ಕೊಡಗಿನಿಂದಲೂ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಶಿಸ್ತು ಬದ್ದವಾಗಿ ಪಾಲ್ಗೊಳ್ಳುವಂತೆ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಪಕ್ಷದ ಹಲವು ನಾಯಕರು ಮಾತನಾಡಿದರು. ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಪಿ.ಕೆ.ಪೊನ್ನಪ್ಪ, ಎರ್ಮುಹಾಜಿ, ಮೂಕಳೇರ ಕುಶಾಲಪ್ಪ, ಕೋಳೇರ ಭಾರತಿ, ಮಾಜಿ ಜಿಲ್ಲಾಧ್ಯಕ್ಷರಾದ ಮಂಜುನಾಥ್, ಯಾಕುಬ್, ರಮಾನಾಥ್, ಮಣಿಕುಂಞ, ಅಂಕಿತ್ ಪೊನ್ನಪ್ಪ, ಆಲೀರ ರಶೀದ್, ಶರತ್ ಕಾಂತ್, ಪ್ರಮೋದ್ ಗಣಪತಿ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

ಕರಾಟೆಯಲ್ಲಿ ಸಾಧನೆ ಮಾಡಿದ ಅರುಣ್ ಮಾಚಯ್ಯ ಹಾಗೂ ಪೌರ ಕಾರ್ಮಿಕರ ಸೇವೆ ಪರಿಗಣಿಸಿ ಪಕ್ಷದ ವತಿಯಿಂದ ಸನ್ಮಾನಿಸಲಾಯಿತು. ಗೋಣಿಕೊಪ್ಪ ನಗರ ಕಾಂಗ್ರೆಸ್ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ ವಂದಿಸಿದರು. ಈ ವೇಳೆ ಕಾಂಗ್ರೆಸ್ ಪಕ್ಷಕ್ಕೆ ಕೆಲವು ಮಂದಿ ಸೇರ್ಪಡೆಗೊಂಡರು.