ಸೋಮವಾರಪೇಟೆ, ಸೆ. ೨೩: ಸಮೀಪದ ಗೌಡಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಪ್ರಸಕ್ತ ಸಾಲಿನಲ್ಲಿ ರೂ. ೯೦ ಲಕ್ಷ ಲಾಭಗಳಿಸಿದೆ. ಸಂಘದ ವಾರ್ಷಿಕ ಮಹಾಸಭೆ ತಾ. ೨೫ ರಂದು ಬೆಳಿಗ್ಗೆ ೧೦.೩೦ಕ್ಕೆ ಬಿ.ಜಿ.ಎಸ್ ವಿದ್ಯಾಸಂಸ್ಥೆಯ ಆವರಣದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷರಾದ ಹೆಚ್.ಆರ್. ಸುರೇಶ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಘವು ೨೦೨೧-೨೨ನೇ ಸಾಲಿನಲ್ಲಿ ರೂ. ೯೦,೬೯,೬೧೭.೨೩ ನಿವ್ವಳ ಲಾಭಗಳಿಸಿದೆ. ಸಂಘದಲ್ಲಿ ಒಟ್ಟು ೨೩೮೭ ಸದಸ್ಯರಿದ್ದು, ಪಾಲು ಬಂಡವಾಳ ರೂ. ೨,೨೨.೬೭,೯೯೦ ಇದೆ ಎಂದು ಮಾಹಿತಿ ನೀಡಿದರು.

ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನಿAದ ೨೦೧೯-೨೦ನೇ ಸಾಲಿನಲ್ಲಿ ಉತ್ತಮ ಕಾರ್ಯನಿರ್ವಹಣೆಗಾಗಿ ಬಹುಮಾನ ಹಾಗೂ ಪ್ರಶಸ್ತಿ ಪತ್ರ ಗಳಿಸಲಾಗಿದೆ. ಅಫೆಕ್ಸ್ ಬ್ಯಾಂಕ್‌ನಿAದ ಪ್ರೋತ್ಸಾಹ ಹಣಕ್ಕೆ ಭಾಜನವಾಗಿದೆ. ಸರ್ವ ನಿರ್ದೇಶಕರು ಹಾಗೂ ಸಿಬ್ಬಂದಿಗಳ ಸಹಕಾರದಿಂದ ಎಲ್ಲಾ ಸದಸ್ಯರಿಗೆ ಸಕಾಲದದಲ್ಲಿ ಯೋಜನೆಗಳನ್ನು ಒದಗಿಸಲಾಗುತ್ತಿದೆ ಎಂದರು.

ವಾರ್ಷಿಕ ಮಹಾಸಭೆಯಂದು ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ನಿರ್ದೇಶಕರುಗಳಾದ ಎಸ್.ಬಿ. ಭರತ್‌ಕುಮಾರ್, ಬಿ.ಕೆ. ಚಿಣ್ಣಪ್ಪ ಹಾಗೂ ಬಿ.ಡಿ. ಮಂಜುನಾಥ್ ಅವರನ್ನು ಸನ್ಮಾನಿಸಲಾಗುವುದು ಎಂದು ಸುರೇಶ್ ಅವರು ಮಾಹಿತಿ ನೀಡಿದರು. ೧೦ನೇ ತರಗತಿಯಲ್ಲಿ ರಾಜ್ಯ, ಸಿ.ಬಿ.ಎಸ್.ಇ ಹಾಗೂ ಐ.ಸಿ.ಎಸ್.ಇ ಮೂರು ವಿಭಾಗಗಳಲ್ಲಿಯೂ ಅತ್ಯಧಿಕ ಅಂಕ ಗಳಿಸಿದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು ಎಂದರು. ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಗೊಬ್ಬರ ಪರೀಕ್ಷಾ ಘಟಕ ಸ್ಥಾಪನೆಗೆ ಕ್ರಮ ಕೈಗೊಳ್ಳಲು ಡಿಸಿಸಿ ಮುಂದಾಗಬೇಕೆAದು ಮನವಿ ಮಾಡಿದರು. ಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷರಾದ ಎನ್.ಎಸ್. ಪರಮೇಶ್, ಕೆ.ಜಿ. ದಿನೇಶ್, ಸಿ.ಈ. ವೆಂಕಟೇಶ್ ಉಪಸ್ಥಿತರಿದ್ದರು.