ಮಡಿಕೇರಿ, ಸೆ. ೨೩: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ೨೦೨೨-೨೩ ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಹಾಗೂ ಆಂಗ್ಲೋ ಇಂಡಿಯನ್ ಜನಾಂಗದವರಿಗೆ ನೇರ ಸಾಲ ಯೋಜನೆ, ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ನಿಗಮದಿಂದ ಸಾಲ ಹಾಗೂ ಸಹಾಯಧನ ಸೌಲಭ್ಯಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವೆಬ್‌ಸೈಟ್ hಣಣಠಿs://ಞmಜಛಿoಟಿಟiಟಿe.ಞಚಿಡಿಟಿಚಿಣಚಿಞಚಿ.gov.iಟಿ, ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಮೌಲಾನ ಆಜಾದ್ ಭವನ, ಎಫ್‌ಎಂಸಿ ಕಾಲೇಜು ಹತ್ತಿರ, ಮಡಿಕೇರಿ ಇವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು. ಈ ಎಲ್ಲಾ ಯೋಜನೆಗಳನ್ನು ಆನ್‌ಲೈನ್‌ನಲ್ಲಿ ನೋಂದಣಿ ಮಾಡಲು ನವೆಂಬರ್ ೧೫ ಕೊನೆಯ ದಿನವಾಗಿದೆ. ಆನ್‌ಲೈನ್‌ನಲ್ಲಿ ಭರ್ತಿಯಾದ ಅರ್ಜಿಯ ಪ್ರತಿಯನ್ನು ಸಂಬAಧಿಸಿದ ಎಲ್ಲಾ ದಾಖಲಾತಿಗಳೊಂದಿಗೆ ಜಿಲ್ಲಾ ಕಚೇರಿಗೆ ಸಲ್ಲಿಸಬೇಕು. ದೂ. ೦೮೨೭೨-೨೨೦೪೪೯ ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಬಿ.ಎನ್. ನಾಗೇಂದ್ರ ತಿಳಿಸಿದ್ದಾರೆ.