ಭಾಗಮಂಡಲ, ಸೆ. ೨೪: ಅಕ್ಟೋಬರ್ ೧೭ ರಂದು ರಾತ್ರಿ ೭.೨೧ಕ್ಕೆ ಮೇಷ ಲಗ್ನದಲ್ಲಿ ಕಾವೇರಿ ತೀರ್ಥೋದ್ಭವ ಆಗಲಿರುವ ಹಿನ್ನೆಲೆಯಲ್ಲಿ ತಲಕಾವೇರಿ ಮತ್ತು ಭಾಗಮಂಡಲ ದೇವಾಲಯಗಳಲ್ಲಿ ಸ್ವಚ್ಛತಾ ಕಾರ್ಯ ಆರಂಭವಾಗಿದೆ.

ದೇವಾಲಯದ ಗುಡಿ ಗೋಪುರಗಳನ್ನು ಸ್ವಚ್ಛಗೊಳಿಸಿದ್ದು ತಲಕಾವೇರಿಯ ದೇವಾಲಯದ ಪರಿಸರದ ಸ್ವಚ್ಛತಾ ಕಾರ್ಯ ನಡೆಯುತ್ತಿದೆ. ರಸ್ತೆಯ ಎರಡು ಬದಿಗಳ ಗಿಡಗಂಟಿಗಳನ್ನು ತೆರವುಗೊಳಿಸಿ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ತಾ. ೨೭ರಂದು ಪತ್ತಾಯಕ್ಕೆ ಅಕ್ಕಿ ಹಾಕುವ ಮೂಲಕ ಜಾತ್ರೆ ಕಾರ್ಯಕ್ಕೆ ಚಾಲನೆ ದೊರೆಯಲಿದೆ.