ಪೊನ್ನAಪೇಟೆ, ಸೆ. ೨೪: ಗೋವುಗಳನ್ನು ಅಕ್ರಮವಾಗಿ ಸಾಗಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊನ್ನಂಪೇಟೆ ಪೊಲೀಸರು ಕಾರ್ಯಾಚರಣೆ ನಡೆಸಿ, ಅಕ್ರಮವಾಗಿ ಸಾಗಿಸುತಿದ್ದ ೪ ಗೋವುಗಳನ್ನು ರಕ್ಷಣೆ ಮಾಡಿ, ವಾಹನ ಸಮೇತ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮೈಸೂರು ಜಿಲ್ಲೆ ಹೆಚ್.ಡಿ. ಕೋಟೆಯ ನಾಗರಾಜು ಮತ್ತು ಮಂಜುನಾಥ್ ಎಂಬವರು ಬಂಧಿತ ಆರೋಪಿಗಳು.

೨ ಹೋರಿಗಳು ಮತ್ತು ೨ ಹಸುಗಳನ್ನು ಗೂಡ್ಸ್ ಆಟೋ (ಕೆ.ಎ.೧೯- ಎಎ.೦೦೪೨) ದಲ್ಲಿ ಸಾಗಿಸುತ್ತಿದ್ದಾಗ ಇಂದು ಬೆಳಿಗ್ಗೆ ೭.೩೦ ಸಮಯದಲ್ಲಿ ಬೆಕ್ಕೆಸೊಡ್ಲೂರು ಗ್ರಾಮದ ಸಮೀಪ ಬೆಸಗೂರು ರಸ್ತೆಯಲ್ಲಿ ದಾಳಿ ನಡೆಸಿದ ಪೊಲೀಸರು ವಾಹನ ಸಮೇತ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಪೊನ್ನಂಪೇಟೆ ಠಾಣಾಧಿಕಾರಿ ಡಿ. ಕುಮಾರ್, ಅಪರಾಧ ವಿಭಾಗದ ಠಾಣಾಧಿಕಾರಿ ಸುಬ್ರಮಣಿ, ಸಿಬ್ಬಂದಿಗಳಾದ ಪ್ರಮೋದ್ ಕುಮಾರ್, ಮಹದೇಶ್ವರಸ್ವಾಮಿ, ಜೀವನ್, ಚಾಲಕ ಸಂತೋಷ್ ಪಾಲ್ಗೊಂಡಿದ್ದರು.