ಶನಿವಾರಸಂತೆ, ಸೆ. ೨೪: ಸಮೀಪದ ಗುಡುಗಳಲೆ ಜಾತ್ರಾ ಮೈದಾನದಲ್ಲಿರುವ ಶ್ರೀ ಕಾಳಿಕಾಂಬ ದೇವಸ್ಥಾನದಲ್ಲಿ ಆಡಳಿತ ಮಂಡಳಿ ಹಾಗೂ ವಿಶ್ವಕರ್ಮ ಸಮಾಜದ ವತಿಯಿಂದ ನವರಾತ್ರಿ ಪ್ರಯುಕ್ತ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ತಾ. ೨೬ ರಿಂದ ಅ. ೫ ರವರೆಗೆ ೯ ದಿನವೂ ಸಂಜೆ ೬ ಗಂಟೆಯಿAದ ೯ ಗಂಟೆಯವರೆಗೆ ವಿಶೇಷ ಪೂಜೆ ಹಾಗೂ ಭಜನೆ ಕಾರ್ಯಕ್ರಮ ನಡೆಯಲಿದೆ ಎಂದು ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಬಿ.ಬಿ. ನಾಗರಾಜ್ ಹಾಗೂ ಕಾರ್ಯಕಾರಿ ಮಂಡಳಿ ಸದಸ್ಯರು ತಿಳಿಸಿದ್ದಾರೆ.