ಸಿದ್ದಾಪುರ, ಸೆ. ೨೪: ಅಭ್ಯತ್‌ಮಂಗಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಪ್ರಗತಿಯ ಪಥದತ್ತ ದಾಪುಗಾಲು ಇಡುತ್ತಿದೆ ಎಂದು ಸಂಘದ ಅಧ್ಯಕ್ಷ ಕೆದಂಬಾಡಿ ಪ್ರಸನ್ನ ತಿಳಿಸಿದರು. ಸಂಘದ ಸಭಾಂಗಣದಲ್ಲಿ ನಡೆದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಂಘವು ೨೦೨೧-೨೨ನೇ ಸಾಲಿನಲ್ಲಿ ರೂ. ೧೪.೫೦ ಲಕ್ಷ ನಿವ್ವಳ ಲಾಭಗಳಿಸಿದೆ ಎಂದರು. ಸದಸ್ಯರಿಗೆ ಉತ್ತಮ ರೀತಿಯ ಡಿವಿಡೆಂಡ್‌ಅನ್ನು ನೀಡಲಾಗುವು ದೆಂದರು. ಸಂಘದ ವತಿಯಿಂದ ಪೆಟ್ರೋಲ್ ಬಂಕ್ ಪ್ರಾರಂಭಿಸುವ ಉದ್ದೇಶದಿಂದ ಈಗಾಗಲೇ ಜಾಗವನ್ನು ಖರೀದಿಸ ಲಾಗಿದ್ದು, ಅದರ ಕಾರ್ಯ ಚಟುವಟಿಕೆಗಳು ನಡೆಯುತ್ತಿದೆ ಎಂದು ಮಾಹಿತಿ ನೀಡಿದರು. ಸಂಘದ ಎಲ್ಲಾ ಸದಸ್ಯರು ಸಂಘದ ಬ್ಯಾಂಕಿನಲ್ಲಿ ತಮ್ಮ ವ್ಯವಹಾರಗಳನ್ನು ಮಾಡುವಂತೆ ಸಲಹೆ ನೀಡಿದರು.
ಮುಂದಿನ ವರ್ಷದಿಂದ ೧೦ನೇ ಹಾಗೂ ೧೨ನೇ ತರಗತಿಯಲ್ಲಿ ಹೆಚ್ಚು ಅಂಕಗಳಿಸಿದ ಸದಸ್ಯರ ಮಕ್ಕಳಿಗೆ ಪ್ರೋತ್ಸಾಹಧನ ನೀಡಲಾಗುವು ದೆಂದರು. ಸಂಘದ ಎಲ್ಲಾ ವ್ಯವಹಾರಗಳು ಉತ್ತಮ ರೀತಿಯಲ್ಲಿ ಮುಂದುವರಿಯುತ್ತಿದ್ದು ಸಂಘದ ಅಭಿವೃದ್ಧಿಗೆ ಸದಸ್ಯರು ಸಹಕಾರ ನೀಡಬೇಕೆಂದು ಮನವಿ ಮಾಡಿಕೊಂಡರು. ಸಭೆಯಲ್ಲಿ ಸಂಘದ ಸದಸ್ಯರುಗಳಾದ ನಾಟೋಳನ ಮೇದಪ್ಪ, ಕೊಳಂಬೆ ಶಿವಪ್ಪ ಇನ್ನಿತರರು ಚರ್ಚೆಯಲ್ಲಿ ಪಾಲ್ಗೊಂಡು ಸಲಗೆ-ಸೂಚನೆಗಳನ್ನು ನೀಡಿದರು.
ಈ ಸಂದರ್ಭ ನೆಲ್ಲಿಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ೧೦ನೇ ಹಾಗೂ ೧೨ನೇ ತರಗತಿಯಲ್ಲಿ ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಿ ಗೌರವಿಸಲಾಯಿತು. ಸಭೆಯಲ್ಲಿ ಸಂಘದ ಉಪಾಧ್ಯಕ್ಷ ಟಿ.ಸಿ. ಅಶೋಕ್, ನಿರ್ದೇಶಕರುಗಳಾದ ಪಿ.ಸಿ. ಅಚ್ಚಯ್ಯ, ವಸಂತ್‌ಕುಮಾರ್, ಕೆ.ಎ. ಪ್ರಸನ್ನ, ಧರ್ಮಲಿಂಗ, ಟಿ.ಬಿ. ಗಣೇಶ್, ಸುನಿಲ್‌ಕುಮಾರ್, ಅಜಿತ್‌ಕುಮಾರ್, ಸುಧರ್ಮ, ಹರಿಣಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವಿ ಮುತ್ತಪ್ಪ ಹಾಜರಿದ್ದರು.