ಕೂಡಿಗೆ, ಸೆ. ೨೫: ೨೦೨೦-೨೧ನೇ ಸಾಲಿನಲ್ಲಿ ಉತ್ತಮ ಕಾರ್ಯನಿರ್ವಹಣೆ ಹಿನ್ನೆಲೆಯಲ್ಲಿ ರಾಮೇಶ್ವರ ಕೂಡುಮಂಗಳೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅಪೆಕ್ಸ್ ಬ್ಯಾಂಕ್ ಬಹುಮಾನ ಘೋಷಿಸಿದೆ.
ಬಹುಮಾನ ಮೊತ್ತ ರೂ. ೧೦ ಸಾವಿರ ಮತ್ತು ಪ್ರಶಸ್ತಿ ಪತ್ರವನ್ನು ಕೊಡಗು ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್ ಅಧ್ಯಕ್ಷ ಕೋಡಂದೇರ ಪಿ. ಗಣಪತಿ ಅವರು ರಾಮೇಶ್ವರ ಕೂಡುಮಂಗಳೂರು ಸಹಕಾರ ಸಂಘದ ಅಧ್ಯಕ್ಷ ಕೆ.ಕೆ. ಹೇಮಂತ್ ಕುಮಾರ್ ಅವರಿಗೆ ಹಸ್ತಾಂತರಿಸಿದರು.