ಮಡಿಕೇರಿ, ಸೆ. ೨೫: ಕೊಡಗು ಗೌಡ ನಿವೃತ್ತ ನೌಕರರ ಸಂಘದ ವತಿಯಿಂದ ಸಂಘದ ಸದಸ್ಯರು ಹಾಗೂ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
೨೦೨೧-೨೨ನೇ ಸಾಲಿನಲ್ಲಿ ಶಿಕ್ಷಣ, ಕ್ರೀಡೆ ಮತ್ತಿತರ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನವನ್ನು ಆದ್ಯತೆ ಮೇರೆಗೆ ಮಾಡಲಾಗುವುದು ಎಂದು ಸಂಘದ ಕಾರ್ಯದರ್ಶಿ ಬಾರಿಕೆ ಎನ್.ಅಯ್ಯಪ್ಪ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಹರು ತಮ್ಮ ಸಾಧನೆಯ ಪ್ರತಿಯನ್ನು ಕಾರ್ಯದರ್ಶಿ, ಕೊಡಗು ಗೌಡ ನಿವೃತ್ತ ನೌಕರರ ಸಂಘ, ಕೊಡಗು ಗೌಡ ಸಮಾಜ (ರಿ) ಗುಡ್ಡೆಮನೆ ಅಪ್ಪಯ್ಯ ಗೌಡ ರಸ್ತೆ, ಮಡಿಕೇರಿ ಇಲ್ಲಿಗೆ ತಮ್ಮ ಪೂರ್ಣ ವಿಳಾಸ ಮತ್ತು ಮೊಬೈಲ್ ಸಂಖ್ಯೆಯೊAದಿಗೆ ಅ.೧೫ ರೊಳಗೆ ಕಳುಹಿಸಬೇಕು. ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಹೆಚ್ಚಿನ ಮಾಹಿತಿಗೆ ೯೩೭೯೨೧೩೮೧೮, ೯೪೪೯೪೭೬೧೭೧, ೯೪೪೯೦೮೬೫೮೯ ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.