ಮಡಿಕೇರಿ, ಸೆ. ೨೫: ಪ್ರಸಕ್ತ ಸಾಲಿನಲ್ಲಿ ಮಡಿಕೇರಿ ತಾಲೂಕಿನ ವಿವಿಧ ಕಾಲೇಜುಗಳಲ್ಲಿ ಮೆಟ್ರಿಕ್ ನಂತರದ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಪಡೆಯಲು ಇಲಾಖೆಯ ಅಧಿಕೃತ ವೆಬ್‌ಸೈಟ್ ವಿಳಾಸ hಣಣಠಿs://ssಠಿ.ಠಿosಣmಚಿಣಡಿiಛಿ.ಞಚಿಡಿಟಿಚಿಣಚಿಞಚಿ.gov.iಟಿ ರಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯೊಂದಿಗೆ ವಿದ್ಯಾರ್ಥಿಯ ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ (ಆದಾಯ ಮಿತಿ ರೂ. ೨.೫೦ ಲಕ್ಷ, ವಿದ್ಯಾರ್ಥಿಯ ಬ್ಯಾಂಕ್ ಪುಸ್ತಕದ ಜೆರಾಕ್ಸ್ ಪ್ರತಿ, ಆಧಾರ್ ಕಾರ್ಡ್ (ಬ್ಯಾಂಕ್ ಖಾತೆ ಆಧಾರ್ ಸಂಖ್ಯೆಯನ್ನು ಎನ್‌ಪಿಸಿಐ ಮೂಲಕ ಲಿಂಕ್ ಮಾಡಿಸಿರತಕ್ಕದ್ದು), ಚಾಲ್ತಿಯಲ್ಲಿರುವ ಆಧಾರ್ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ, ವಿದ್ಯಾರ್ಥಿಯ ಹಿಂದಿನ ವರ್ಷದ ಅಂಕಪಟ್ಟಿ ಪ್ರತಿ, ವಿದ್ಯಾರ್ಥಿಯ ಇತ್ತೀಚಿನ ಭಾವಚಿತ್ರ, ಅಧ್ಯಯನ/ ಬೋನಾಪೈಡ್ ಪ್ರಮಾಣ ಪತ್ರ, ಪ್ರಸಕ್ತ ಕೋರ್ಸಿನ ಶುಲ್ಕ ರಶೀದಿ ಪ್ರತಿ, ತಂದೆ, ತಾಯಿ/ ಪೋಷಕರ ಆಧಾರ್ ಕಾರ್ಡ್ ಪ್ರತಿಯನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ hಣಣಠಿs://ssಠಿ.ಠಿosಣmಚಿಣಡಿiಛಿ.ಞಚಿಡಿಟಿಚಿಣಚಿಞಚಿ.gov.iಟಿ ಹಾಗೂ ಸಹಾಯಕ ನಿರ್ದೇಶಕರು(ಗ್ರೇಡ್-೧) ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿರವರ ಕಚೇರಿ ದೂ. ೯೪೮೦೮೪೩೧೫೫ ಅಥವಾ ನೇರ ಭೇಟಿ ಮಾಡಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.