ಮಡಿಕೇರಿ, ಸೆ. ೨೫: ತ್ವರಿತವಾಗಿ ಆರೋಗ್ಯ ಸೇವೆ ಒದಗಿಸುವ ಸಲುವಾಗಿ ಇರುವ ೧೦೮ ಆ್ಯಂಬ್ಯುಲೆನ್ಸ್ ಸೇವೆಯಲ್ಲಿ ತಾಂತ್ರಿಕ ಸಮಸ್ಯೆ ಏರ್ಪಟ್ಟಿದ್ದು, ಈ ಹಿನ್ನೆಲೆ ಪರ್ಯಾಯ ಸಂಖ್ಯೆಯನ್ನು ತಾತ್ಕಾಲಿಕವಾಗಿ ಆರೋಗ್ಯ ಇಲಾಖೆ ನೀಡಿದ್ದು, ಅದರನ್ನು ಬಳಸಿಕೊಳ್ಳುವಂತೆ ಮನವಿ ಮಾಡಿದೆ.
ಈ ಬಗ್ಗೆ ‘ಶಕ್ತಿ'ಗೆ ಪ್ರತಿಕ್ರಿಯಿಸಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೆಂಕಟೇಶ್, ರಾಜ್ಯವ್ಯಾಪಿ ಆ್ಯಂಬ್ಯುಲೆನ್ಸ್ ಸೇವೆಯ ಟೋಲ್ ಫ್ರೀ ಸಂಖ್ಯೆಯಾದ ೧೦೮ನಲ್ಲಿ ತಾಂತ್ರಿಕ ಸಮಸ್ಯೆ ಉಂಟಾಗಿ ಸೇವೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದು, ಸದ್ಯಕ್ಕೆ ೯೫೧೩೬೪೦೦೦೭ ಈ ಸಂಖ್ಯೆಗೆ ಸಂಪರ್ಕಿಸಿ ಸೇವೆ ಪಡೆಯಬಹುದಾಗಿದೆ ಎಂದು ತಿಳಿಸಿದ್ದಾರೆ.
ಸಕಾಲದಲ್ಲಿ ಆ್ಯಂಬ್ಯುಲೆನ್ಸ್ ಸೇವೆ ದೊರೆಯಲಿದ್ದು, ಯಾರು ಆತಂಕಗೊಳ್ಳುವ ಅವಶ್ಯಕತೆ ಇಲ್ಲ. ಜಿಲ್ಲೆಯಲ್ಲಿ ೮ ಆ್ಯಂಬ್ಯುಲೆನ್ಸ್ಗಳ ಸೇವೆ ಅಬಾಧಿತವಾಗಿ ಮುಂದುವರೆಯಲಿದೆ ಎಂದು ಹೇಳಿದ್ದಾರೆ.