ಶ್ರೀಮಂಗಲ, ಸೆ. ೨೫: ಕ್ಗ್ಗಟ್ಟ್ನಾಡ್ ಕೊಡವ ಹಿತರಕ್ಷಣಾ ಬಳಗ ಪೊನ್ನಂಪೇಟೆ ಆಶ್ರಯದಲ್ಲಿ ಅಕ್ಟೋಬರ್ ೫ ರಂದು ಕೊಡವ ಜನಾಂಗದ ಮಹಿಳೆಯರು ಮತ್ತು ಪುರುಷರುಗಳಿಗೆ .೨೨ ಕೋವಿಯಿಂದ ಶೂಟಿಂಗ್ (ತೆಂಗಿನಕಾಯಿಗೆ ಗುಂಡು ಹೊಡೆಯುವ) ಸ್ಪರ್ಧೆಯನ್ನು ಏರ್ಪಡಿಸಲಾಗಿದೆ ಎಂದು ಸಂಘಟನೆಯ ಪ್ರಮುಖರು ಪೂರ್ವಭಾವಿ ಸಭೆಯಲ್ಲಿ ತಿಳಿಸಿದ್ದಾರೆ.
ಪೊನ್ನಂಪೇಟೆಯಲ್ಲಿ ನಡೆದ ಸಭೆಯಲ್ಲಿ ಈ ವಿಚಾರವನ್ನು ತಿಳಿಸಿದ ಪ್ರಮುಖರು ಕೊಡವ ಜನಾಂಗದಲ್ಲಿ ಶೂಟಿಂಗ್ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿ, ಉತ್ತೇಜಿಸಲು ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮ ವನ್ನು ಪೊನ್ನಂಪೇಟೆ ಸಮೀಪ ಚಿಕ್ಕಮುಂಡೂರು ಗ್ರಾಮದಲ್ಲಿರುವ ಅಪ್ಪಚ್ಚಕವಿ ವಿದ್ಯಾಸಂಸ್ಥೆಯ ಮೈದಾನದಲ್ಲಿ ಏರ್ಪಡಿಸಲಾಗಿದೆ ಎಂದು ಅವರು ತಿಳಿಸಿದರು. ಸಾಮಾನ್ಯ ವಿಭಾಗದಲ್ಲಿ ಮೊದಲ ಬಹುಮಾನ ರೂ. ೨೦ ಸಾವಿರ ದ್ವಿತೀಯ ಬಹುಮಾನ ರೂ. ೧೫ ಸಾವಿರ ಮತ್ತು ತೃತೀಯ ಬಹುಮಾನ ವಾಗಿ ರೂ. ೧೦ ಸಾವಿರ ಹಾಗೂ ಪಾರಿತೋಷಕ ನೀಡಲಾಗುವುದು. ಈ ಸ್ಪರ್ಧೆಯಲ್ಲಿ ಮಹಿಳೆಯರು ಸಹ ಭಾಗವಹಿಸಬಹುದು. ಇದರೊಂದಿಗೆ ಮಹಿಳೆಯರಿಗೆ ಪ್ರತ್ಯೇಕ ವಿಭಾಗ ಸಹ ಇದ್ದು ಇದಕ್ಕೆ ಪ್ರಥಮ ಬಹುಮಾನವಾಗಿ ರೂ. ೩ ಸಾವಿರ ಹಾಗೂ ದ್ವಿತೀಯ ಬಹುಮಾನ ರೂ. ೨ ಸಾವಿರದೊಂದಿಗೆ ಪಾರಿತೋಷಕ ನೀಡಲಾಗುತ್ತದೆ ಎಂದು ಅವರು ವಿವರಿಸಿದರು.
ಹೆಚ್ಚಿನ ವಿವರಗಳಿಗಾಗಿ ಕೌಶಿಕ್ ದೇವಯ್ಯ - ೯೭೪೦೫೦ ೮೦೭೬ ಹಾಗೂ ಕಿಶನ್ ಉತ್ತಪ್ಪ- ೯೮೮೦ ೨೦೭೬೪೦ ಅವರನ್ನು ಸಂಪರ್ಕಿಸ ಬಹುದು ಎಂದು ತಿಳಿಸಿದರು. ಕೊಡವ ಹಿತರಕ್ಷಣಾ ಬಳಗದ ಅಧ್ಯಕ್ಷ ಚಿರಿಯಪಂಡ ರಾಜಾ ನಂಜಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಮಂಡೇಪAಡ ಸುಜಾ ಕುಶಾಲಪ್ಪ, ಪೊನ್ನಂಪೇಟೆ ಕೊಡವ ಸಮಾಜ ಅಧ್ಯಕ್ಷ ಕಾಳಿಮಾಡ ಮೋಟಯ್ಯ, ಜಬ್ಬೂಮಿ ಸಂಘಟನೆಯ ಸಂಚಾಲಕ ಚೊಟ್ಟೆಕ್ಮಾಡ ರಾಜೀವ್ ಬೋಪಯ್ಯ ಅವರು ಭಾಗವಹಿಸ ಲಿದ್ದಾರೆ.
ಈ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ಸಂಘಟನೆಯ ಅಧ್ಯಕ್ಷ ಚಿರಿಯಪಂಡ ರಾಜಾನಂಜಪ್ಪ, ಉಪಾಧ್ಯಕ್ಷ ಚೆಕ್ಕೆರ ರಮೇಶ್, ಕಾರ್ಯದರ್ಶಿ ಗಾಂಡAಗಡ ಕೌಶಿಕ್ ದೇವಯ್ಯ, ಖಜಾಂಚಿ ಕೋಟೆರ ಕಿಶನ್ ಉತ್ತಪ್ಪ, ಸದಸ್ಯರುಗಳಾದ ಅಡ್ಡಂಡ ಸುನಿಲ್ ಸೋಮಯ್ಯ, ಅಜ್ಜಿಕುಟ್ಟಿರ ಶುಭ, ಅಡ್ಡಂಡ ಡಾಲಿ ಜನಾರ್ಧನ ಅವರು ಹಾಜರಿದ್ದರು.