ಕುಶಾಲನಗರ, ಸೆ. ೨೫: ಅಳುವಾರ ಸ್ನಾತಕೋತ್ತರ ಕೇಂದ್ರ ಜ್ಞಾನ ಕಾವೇರಿ ವಿಶ್ವ ವಿದ್ಯಾಲಯವಾಗುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ೨ ಕೋಟಿ ರೂ. ಗಳ ಅನುದಾನ ಬಿಡುಗಡೆ ಮಾಡಿದೆ ಎಂದು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ತಿಳಿಸಿದ್ದಾರೆ. ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಯೋಗಾಲಯ, ಮಾಹಿತಿ ಕೇಂದ್ರ ಮತ್ತು ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಪಟ್ಟಣ ಹಾಗೂ ಗ್ರಾಮೀಣ ಭಾಗದ ಆಸಕ್ತ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯುವ ಅವಕಾಶ ಲಭ್ಯವಾಗಿದ್ದು, ಇದರ ಸದುಪಯೋಗ ಪಡೆಯಬೇಕೆಂದರು. ಕಳೆದ ೨೫ ವರ್ಷಗಳ ಹಿಂದೆ ತಾನು ಕಂಡ ಕನಸು ಸಂಪೂರ್ಣ ನನಸಾಗಿದ್ದು, ಸೋಮವಾರಪೇಟೆ, ಕುಶಾಲನಗರ, ಮಡಿಕೇರಿ, ಸುಂಟಿಕೊಪ್ಪ ಭಾಗಗಳಲ್ಲಿ ಎಲ್ಲಾ ಹಂತದ ಶಿಕ್ಷಣ ಕೇಂದ್ರಗಳು ನಿರ್ಮಾಣಗೊಂಡಿವೆ.
ಕುಶಾಲನಗರ ಸುತ್ತಮುತ್ತ ವ್ಯಾಪ್ತಿಯಲ್ಲಿ ಪಿಯುಸಿ, ಪದÀವಿ, ಇಂಜಿನಿಯರಿAಗ್, ಸ್ನಾತಕೋತ್ತರ ಕೇಂದ್ರಗಳು ಸ್ಥಾಪನೆಗೊಂಡಿದ್ದು, ಮಡಿಕೇರಿಯಲ್ಲಿ ಮೆಡಿಕಲ್ ಕಾಲೇಜು ಹೊಂದಿದೆ. ಈ ಮೂಲಕ ಕೊಡಗು ಜಿಲ್ಲೆ ಶಿಕ್ಷಣ ಕಾಶಿ ಎನ್ನುವ ಹೆಗ್ಗಳಿಕೆ ಪಡೆದಿದೆ ಎಂದರು.
ಸದ್ಯದಲ್ಲಿಯೇ ಕುಶಾಲನಗರದಲ್ಲಿ ಮಿನಿ ವಿಮಾನ ನಿಲ್ದಾಣ ಮತ್ತು ರೈಲ್ವೆ ಸಂಪರ್ಕ ಯೋಜನೆಗಳು ಕಾರ್ಯಗತಗೊಳ್ಳಲಿವೆ ಎಂದರು.
ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷರಾದ ವಿ.ಎನ್. ವಸಂತ್ ಕುಮಾರ್, ಕಾಲೇಜಿನ ಅಭಿವೃದ್ಧಿ ಬಗ್ಗೆ ಮಾಹಿತಿ ಒದಗಿಸಿದರು.
ಕಾಲೇಜು ಪ್ರಾಂಶುಪಾಲರಾದ ಸತೀಶ್ ಬಾಬು ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನ್ನಿಕಾ ಸಹಕಾರ ಸಂಘದ ಅಧ್ಯಕ್ಷರಾದ ರವಿ ಕುಮಾರ್, ರಾಜ್ಯ ಪ್ರಶಸ್ತಿ ವಿಜೇತರಾದ ಡಾ. ಸದಾಶಿವ ಪಲ್ಯದ್, ಜಿಲ್ಲಾ ಪ್ರಶಸ್ತಿ ವಿಜೇತರಾದ ಉ.ರಾ ನಾಗೇಶ್, ಉಪನ್ಯಾಸಕರಾದ ಗುರುಸ್ವಾಮಿ ಅವರುಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಕುಶಾಲನಗರ ಪಟ್ಟಣ ಪಂಚಾಯಿತಿ ಅಧ್ಯಕ್ಷ ಜಯವರ್ಧನ್, ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷರಾದ ಫಿಲಿಪ್ ವಾಸ್, ಕನ್ನಿಕಾ ಸಹಕಾರ ಬ್ಯಾಂಕ್ ನಿರ್ದೇಶಕರುಗಳು, ಕುಡ ಸದಸ್ಯರಾದ ವೈಶಾಕ್, ವಿ.ಡಿ. ಪುಂಡರಿಕಾಕ್ಷ, ಬಿ.ಆರ್ ನಾಗೇಂದ್ರ ಪ್ರಸಾದ್ ಮತ್ತಿತರರು ಇದ್ದರು.