ಮಡಿಕೇರಿ, ಸೆ. ೨೬: ವಿಶ್ವ ಪ್ರವಾಸೋದ್ಯಮ ದಿನದ ಪ್ರಯುಕ್ತಗ್ರೀನ್ ಸಿಟಿ ಫೋರಂ ವತಿಯಿಂದ ಕೊಡಗು ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಸಹಕಾರದಲ್ಲಿ ತಾ. ೨೭ ರಂದು (ಇಂದು) ಮಡಿಕೇರಿಯಲ್ಲಿ ವಾಕಥಾನ್ ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ ೬.೩೦ಕ್ಕೆ ನಗರದ ಗದ್ದಿಗೆ ಬಳಿಯಿಂದ ಆರಂಭವಾಗಿ ರಾಜಾಸೀಟ್ ಬಳಿ ಕೊನೆಗೊಳ್ಳಲಿದೆ. ಶಾಲಾ ಕಾಲೇಜು ವಿದ್ಯಾರ್ಥಿಗಳು, ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಜಿಲ್ಲಾಡಳಿತದ ಅಧಿಕಾರಿಗಳು, ಸಿಬ್ಬಂದಿ ವೃಂದ, ಪ್ರವಾಸೋದ್ಯಮಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ರಾಜಾ ಸೀಟ್ ಆವರಣದಲ್ಲಿ ಶ್ರಮದಾನ ಹಮ್ಮಿಕೊಳ್ಳಲಾಗಿದೆ. ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ, ಉಪ ವಿಭಾಗಾಧಿಕಾರಿ ಯತೀಶ್ ಉಲ್ಲಾಳ್ ಭಾಗವಹಿಸಲಿದ್ದಾರೆ ಎಂದು ಗ್ರೀನ್ ಸಿಟಿ ಫೋರಂ ಅಧ್ಯಕ್ಷ ಚೈಯ್ಯಂಡ ಸತ್ಯಗಣಪತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.