ಮಡಿಕೇರಿ, ಸೆ.೨೬: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪ್ರವಾಸೋದ್ಯಮ ಇಲಾಖೆ, ಪ್ರವಾಸೋದ್ಯಮ ಪಾಲುದಾರರು ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ-೨೦೨೨ ‘ಪ್ರವಾಸೋದ್ಯಮದ ಪುನರಾವಲೋಕನ’ ಸಂದೇಶದೊAದಿಗೆ ತಾ. ೨೭ ರಂದು (ಇಂದು) ಬೆಳಗ್ಗೆ ೧೦.೩೦ ಗಂಟೆಗೆ ಹೊಟೇಲ್ ಲೀ ಕೂರ್ಗ್ನಲ್ಲಿ ನಡೆಯಲಿದೆ.

ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ನಾಗೇಶ್, ಶಾಸಕ ಎಂ.ಪಿ.ಅಪ್ಪಚ್ಚು ರಂಜನ್, ಶಾಸಕರು ಹಾಗೂ ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷ ಕೆ.ಜಿ.ಬೋಪಯ್ಯ, ಶಾಸಕ ಎಂ.ಪಿ.ಸುಜಾ ಕುಶಾಲಪ್ಪ, ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ನಾಪಂಡ ರವಿಕಾಳಪ್ಪ, ನಗರಸಭೆ ಅಧ್ಯಕ್ಷೆÀ ಅನಿತಾ ಪೂವಯ್ಯ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ.ಅಯ್ಯಪ್ಪ, ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಡಾ.ಯತೀಶ್ ಉಳ್ಳಾಲ್ ಇತರರು ಪಾಲ್ಗೊಳ್ಳಲಿದ್ದಾರೆ.