ಮಡಿಕೇರಿ, ಸೆ.೨೬ : ಮಾಯಮುಡಿ ಕೋಲುಬಾಣೆಯ ಕಾವೇರಿ ಅಸೋಸಿಯೇಷನ್ ವತಿಯಿಂದ ಕೈಲ್ ಪೊಳ್ದ್ ಹಬ್ಬದ ಪ್ರಯುಕ್ತ ಕ್ರೀಡಾಕೂಟ ಮತ್ತು ಸನ್ಮಾನ ಕಾರ್ಯಕ್ರಮ ನಡೆಯಿತು.
ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ವಿಧಾನ ಪರಿಷತ್ ಮಾಜಿ ಸದಸ್ಯ ಸಿ.ಎಸ್.ಅರುಣ್ ಮಾಚಯ್ಯ ಕ್ರೀಡೆಯಿಂದ ಮಾನಸಿಕ ಮತ್ತು ದೈಹಿಕ ಆರೋಗ್ಯ ಹೆಚ್ಚಾಗಲಿದೆ. ಆರೋಗ್ಯ ವೃದ್ಧಿ ಹಾಗೂ ಶಿಸ್ತಿನ ಜೀವನಕ್ಕೆ ಕ್ರೀಡೆ ಸಹಕಾರಿ ಎಂದು ಹೇಳಿದರು.
ತೆಂಗಿನ ಕಾಯಿಗೆ ಗುಂಡುಹೊಡೆಯುವ ಪುರುಷರ ವಿಭಾಗದ ಸ್ಪರ್ಧೆಯಲ್ಲಿ ನಾಮೇರ ಕೆ.ರವಿ ದೇವಯ್ಯ ಪ್ರಥಮ, ಆಪಟ್ಟೀರ ಆರ್. ಆದರ್ಶ್ ಅಯ್ಯಪ್ಪ ದ್ವಿತೀಯ ಹಾಗೂ ಆಪಟ್ಟೀರ ಎಸ್. ಟಾಟು ಮೊಣ್ಣಪ್ಪ ತೃತೀಯ ಸ್ಥಾನ ಪಡೆದು ಕೊಂಡರು.
ಮಹಿಳೆಯರ ವಿಭಾಗದಲ್ಲಿ ಎಸ್.ಎಂ. ಚಂದ್ರಿಕ ಮಂಜುನಾಥ್ ಪ್ರಥಮ, ಎಸ್. ಎಂ. ಪ್ರೇಕ್ಷ ದ್ವಿತೀಯ ಹಾಗೂ ಕಾಳಪಂಡ ಬಿ. ಲತಾ ಬಿದ್ದಪ್ಪ ತೃತೀಯ ಬಹುಮಾನ ಪಡೆದರು. ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಪ್ರತಿನಿಧಿಸಿ ಭಾರತ ತಂಡವನ್ನು ಮುನ್ನಡೆೆಸಿದ ಅರುಣ್ ಮಾಚಯ್ಯ ಅವರನ್ನು ಸಂಸ್ಥೆ ವತಿಯಿಂದ ಸನ್ಮಾನಿಸಿ ಗೌರವಿಸ ಲಾಯಿತು.
ಅಸೋಸಿಯೇಷನ್ ಅಧ್ಯಕ್ಷ ಕಾಳಪಂಡ ಟಿಪ್ಪು ಬಿದ್ದಪ್ಪ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮ ದಲ್ಲಿ ಕಾರ್ಯದರ್ಶಿ ಎಸ್.ಎನ್. ಸುಕೇಶ್, ಉಪಾಧ್ಯಕ್ಷ ನಾಮೇರ ರವಿ ದೇವಯ್ಯ, ಚೆಪ್ಪುಡೀರ ಕಿಟ್ಟು ಅಯ್ಯಪ್ಪ, ಕ್ರೀಡಾ ಕಾರ್ಯದರ್ಶಿ ಆಪಟ್ಟೀರ ಎಸ್.ಟಾಟು ಮೊಣ್ಣಪ್ಪ, ನಿರ್ದೇಶಕ ಆಪಟ್ಟೀರ ಎ. ಬೋಪಣ್ಣ, ಎಸ್.ವಿ. ಮಂಜುನಾಥ್, ಜೆ.ಎಸ್. ಲೋಕೇಶ್, ಬಿ.ಎನ್. ಪ್ರತ್ಯು, ಖಜಾಂಚಿ ಕಾಳಪಂಡ ಸಿ. ನರೇಂದ್ರ ಹಾಗೂ ಸದಸ್ಯರು ಉಪಸ್ಥಿತರಿದ್ದರು.