ಕೂಡಿಗೆ, ಸೆ.೨೬: ತೊರೆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಖ್ಯ ರಸ್ತೆಗೆ ಹೊಂದಿಕೊAಡAತೆ ಇರುವ ಗ್ರಾಮ ಪಂಚಾಯಿತಿ ಕಟ್ಟಡದಲ್ಲಿ ಶಾಸಕರ ನಿಧಿಯಿಂದ ಶುದ್ಧ ನೀರಿನ ಘಟಕವನ್ನು ಆರಂಭಿಸಲಾಯಿತು.
ಇದರ ಉದ್ಘಾಟನೆಯನ್ನು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ನೆರವೇರಿಸಿದರು.
ಈ ಸಂದರ್ಭ ತೊರೆನೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೂಪ ಮಹೇಶ್, ಉಪಾಧ್ಯಕ್ಷ ಎಂ.ಟಿ. ಬೇಬಿ, ಸದಸ್ಯರಾದ ಕೆ.ಬಿ. ದೇವರಾಜ್, ಟಿ.ಸಿ. ಶಿವಕುಮಾರ್, ನಿಂಗಾಜಮ್ಮ, ಸಾವಿತ್ರಿ, ತೀರ್ಥಾನಂದ, ಮಹಾದೇವ, ಶೋಭ, ಯಶೋಧ, ದೇವಾಲಯ ಸಮಿತಿಯ ಅಧ್ಯಕ್ಷ ಚಂದ್ರಪ್ಪ, ಅಭಿವೃದ್ಧಿ ಅಧಿಕಾರಿ ವೀಣಾ ಸೇರಿದಂತೆ ಗ್ರಾಮಸ್ಥರು ಇದ್ದರು.