ಮೈಸೂರು ದಸರಾಕ್ಕೆ ಚಾಲನೆ ನೀಡಿದ ರಾಷ್ಟçಪತಿ
ಮೈಸೂರು, ಸೆ. ೨೬: ಮೈಸೂರು ದಸರಾ ಹಬ್ಬಕ್ಕೆ ಚಾಲನೆ ನೀಡಿದ ರಾಷ್ಟçಪತಿ ದ್ರೌಪದಿ ಮುರ್ಮು ಕನ್ನಡದಲ್ಲಿ ಭಾಷಣ ಆರಂಭಿಸಿ ದಸರಾ ಸಂಭ್ರಮಕ್ಕೆ ಕಳೆ ತಂದರು. ಇಂದು ವಿಶ್ವವಿಖ್ಯಾತ ಮೈಸೂರು ದಸರಾ ೨೦೨೨ಗೆ ಅದ್ಧೂರಿ ಚಾಲನೆ ಸಿಕ್ಕಿದೆ. ಇದೇ ಮೊದಲ ಬಾರಿಗೆ ದಸರಾ ಉದ್ಘಾಟನೆಯಲ್ಲಿ ಭಾಗಿಯಾದ ಭಾರತದ ಪ್ರಥಮ ಪ್ರಜೆ ರಾಷ್ಟçಪತಿ ದ್ರೌಪದಿ ಮುರ್ಮು ಅವರು ಕನ್ನಡದಲ್ಲಿ ಮಾತನಾಡುವ ಮೂಲಕ ರಾಜ್ಯದ ಜನರ ಮನಸ್ಸು ಗೆದ್ದಿದ್ದಾರೆ. ದೇವಿ ಚಾಮುಂಡೇಶ್ವರಿಗೆ ನನ್ನ ಮನಃಪೂರ್ವಕ ನಮಸ್ಕಾರಗಳು, ಎಲ್ಲ ಸಹೋದರ ಸಹೋದರಿಯರಿಗೆ ನನ್ನ ಹೃದಯಪೂರ್ವಕ ನಮಸ್ಕಾರಗಳು ಎಂದು ರಾಷ್ಟçಪತಿ ಕನ್ನಡದಲ್ಲಿ ಎರಡು ವಾಕ್ಯ ಹೇಳಿದ ನಂತರ ಸಂಸ್ಕೃತದ ಚಾಮುಂಡೇಶ್ವರಿ ಶ್ಲೋಕ ಪಠಿಸಿದರು. ನೆರೆದಿದ್ದ ಜನರು ಚಪ್ಪಾಳೆ ತಟ್ಟಿ ಹರ್ಷ ವ್ಯಕ್ತಪಡಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಸಚಿವರುಗಳು, ಸಂಸದರು ಭಾಗವಹಿಸಿದ್ದರು.
ವಿಧಾನಸೌಧ ಚಲೋಗೆ ತಡೆ : ನೂರಾರು ರೈತರು ಪೊಲೀಸ್ ವಶಕ್ಕೆ
ಬೆಂಗಳೂರು, ಸೆ. ೨೬: ನ್ಯಾಯಯುತ ಕಬ್ಬಿನ ದರ ನಿಗದಿ ಮಾಡುವಂತೆ ಹಾಗೂ ವಿದ್ಯುತ್ ಖಾಸಗೀಕರಣ ವಿರೋಧಿಸಿ ಬೆಂಗಳೂರಿನಲ್ಲಿ ಇಂದು ವಿಧಾನಸೌಧ ಚಲೋ ನಡೆಸಲು ಮುಂದಾದ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ನೂರಾರು ಸದಸ್ಯರನ್ನು ಪೊಲೀಸರು ತಡೆದು ವಶಕ್ಕೆ ಪಡೆದರು. ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ರಾಷ್ಟçಪತಿ ರೈತ ಮುಖಂಡರ ಬೆಂಬಲದೊAದಿಗೆ ವಿಧಾನಸೌಧ ಚಲೋ ನಡೆಸಲು ಯತ್ನಿಸಿದ ರೈತರನ್ನು ಮಾರ್ಗ ಮಧ್ಯೆ ಪೊಲೀಸರು ತಡೆದರು. ಉತ್ತರಪ್ರದೇಶ ಸರ್ಕಾರದ ಮಾನದಂಡದAತೆ ಕನಿಷ್ಟ ಕಬ್ಬಿನ ದರ ನಿಗದಿಯಾಗಬೇಕು, ಕೇಂದ್ರ ಸರ್ಕಾರ ಸಕ್ಕರೆ ಉದ್ದಿಮೆದಾರರ ತಾಳಕ್ಕೆ ತಕ್ಕಂತೆ ಕುಣಿದು ರೈತರಿಗೆ ಅನ್ಯಾಯ ಮಾಡುವುದನ್ನು ನಿಲ್ಲಿಸಬೇಕೆಂದು ಪ್ರತಿಭಟನಾ ನಿರತ ರೈತರು ಒತ್ತಾಯಿಸಿದರು.
ಮೈಸೂರು ಅರಮನೆಯಲ್ಲಿ ದಸರಾ ಸಂಭ್ರಮ
ಮೈಸೂರು, ಸೆ. ೨೬: ಸರ್ಕಾರ ವತಿಯಿಂದ ನಾಡಹಬ್ಬ ದಸರಾಕ್ಕೆ ರಾಷ್ಟçಪತಿ ದ್ರೌಪದಿ ಮುರ್ಮು ಅವರು ಚಾಲನೆ ನೀಡಿ ಹೋದ ಬಳಿಕ ಇತ್ತ ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್ ನೆರವೇರಿದೆ. ವಜ್ರಖಚಿತ ಸಿಂಹಾಸನದಲ್ಲಿ ಕುಳಿತÀ ಮೈಸೂರು ದೊರೆ ಯದುವೀರ್ ಒಡೆಯರ್ ೭ನೇ ಬಾರಿ ಖಾಸಗಿ ದರ್ಬಾರ್ ನೆರವೇರಿಸಿದರು. ಮೈಸೂರು ಅರಮನೆಯಲ್ಲಿ ಕೂಡ ಎರಡು ವರ್ಷಗಳ ಬಳಿಕ ಖಾಸಗಿ ದರ್ಬಾರ್ ಅದ್ದೂರಿಯಾಗಿ ನಡೆದಿದೆ. ಸಿಂಹಾಸನಕ್ಕೆ ಪೂಜೆ ಸಲ್ಲಿಸಿದ ನಂತರ ವೇದ ಘೋಷಗಳೊಂದಿಗೆ ಪೂಜೆ ಸಲ್ಲಿಸಿ ಖಾಸಗಿ ದರ್ಬಾರ್‌ನ್ನು ರಾಜರು ನೆರವೇರಿಸಿದರು. ಮೈಸೂರಿನ ರಾಜ ಪರಂಪರೆಯAತೆ ಖಾಸಗಿ ದರ್ಬಾರ್ ನೆರವೇರಿತು. ಚಾಮುಂಡಿತೊಟ್ಟಿಯಿAದ ವಾಣಿವಿಲಾಸ ದೇವರ ಮನೆಗೆ ಕಂಕಣವನ್ನು ತಂದು ತ್ರಿಷಿಕಾ ಕುಮಾರಿ ಒಡೆಯರ್ ಅವರಿಗೆ ಕಂಕಣಧಾರಣೆ ಮಾಡಲಾಯಿತು. ೯.೩೦ಕ್ಕೆ ಪಟ್ಟದ ಆನೆ, ಪಟ್ಟದ ಕುದುರೆ, ಪಟ್ಟದ ಹಸು ಸವಾರಿ ತೊಟ್ಟಿಗೆ ಆಗಮಿಸಿದೆ. ೯.೫೦ರಿಂದ ೧೦.೩೫ರೊಳಗೆ ಕಳಸ ಪೂಜೆ ಹಾಗೂ ಸಿಂಹಾರೋಹಣ ನೆರವೇರಿತು.
ಅಗ್ನಿಅವಘಡದಿಂದ ಕಾರ್ಖಾನೆ ಆಹುತಿ
ದೊಡ್ಡಬಳ್ಳಾಪುರ, ಸೆ. ೨೬: ಕೆಮಿಕಲ್ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ಇಡೀ ಕಾರ್ಖಾನೆ ಬೆಂಕಿಗಾಹುತಿಯಾದ ಘಟನೆ ಸೋಮವಾರ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಕೈಗಾರಿಕಾ ಪ್ರದೇಶದಲ್ಲಿ ಸೋಮವಾರ ಬೆಳಗ್ಗೆ ಈ ಘಟನೆ ನಡೆದಿದ್ದು, ಕೆಮಿಕಲ್ ಬ್ಲಾಸ್ಟ್ನಿಂದ ಕೆಮಿಕಲ್ ಕಾರ್ಖಾನೆಯೊಂದು ಹೊತ್ತಿ ಉರಿದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ದುರಂತ ಸಂಭವಿಸಿದ ವೇಳೆ ಕಾರ್ಖಾನೆಯಲ್ಲಿ ಸುಮಾರು ೩೦ ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಕೆಮಿಕಲ್ ಬ್ಲಾಸ್ಟ್ ಆಗುವ ಸಾಧ್ಯತೆಯನ್ನರಿತ ಕಾರ್ಮಿಕರು ಬ್ಲಾಸ್ಟ್ ಆಗುವುದಕ್ಕೂ ಮುನ್ನವೇ ಹೊರನಡೆದಿದ್ದಾರೆ. ಇದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಐಸಿಸ್ ಜೊತೆ ನಂಟು ಹೊಂದಿದ ವ್ಯಕ್ತಿ ಬಂಧನ
ಕೊಪ್ಪಳ, ಸೆ. ೨೬: ನಿಷೇಧಿತ ಉಗ್ರ ಸಂಘಟನೆ ಐಸಿಸ್ ಜೊತೆ ನಂಟು ಹೊಂದಿದ ಆರೋಪದ ಮೇರೆಗೆ ಗಂಗಾವತಿಯಲ್ಲಿ ವ್ಯಕ್ತಿಯೋರ್ವನನ್ನು ಶಿವಮೊಗ್ಗ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮೈಬೂಬ್ ನಗರದ ನಿವಾಸಿ, ಬಾಳೆಹಣ್ಣಿನ ವ್ಯಾಪಾರಿ ಶಬ್ಬೀರ್ ಎಂಬಾತನನ್ನು ಶಿವಮೊಗ್ಗ ಪೊಲೀಸರು ಭಾನುವಾರ ತಡರಾತ್ರಿ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಶಬ್ಬೀರ್, ನಿಷೇಧಿತ ಐಸಿಸ್ ಸಂಘಟನೆ ಜೊತೆ ನಂಟು ಹೊಂದಿದ ಆರೋಪದಲ್ಲಿ ಶಿವಮೊಗ್ಗದಲ್ಲಿ ಬಂಧನಕ್ಕೆ ಒಳಗಾಗಿರುವ ಯುವಕರ ಜೊತೆ ನಂಟು ಹೊಂದಿದ್ದ ಎನ್ನಲಾಗಿದೆ. ಪೊಲೀಸರು ಶಬ್ಬೀರನನ್ನು ವಶಕ್ಕೆ ಪಡೆದು ರಾತ್ರಿಯೇ ಶಿವಮೊಗ್ಗಕ್ಕೆ ಕರೆದುಕೊಂಡು ಹೋಗಿದ್ದಾರೆ ಎಂದು ಪೊಲೀಸ್ ಮೂಲಗಳು ಖಚಿತಪಡಿಸಿವೆ. ತುಂಗಾನದಿ ದಡದಲ್ಲಿ ಬಾಂಬ್ ಸ್ಫೋಟ ಪ್ರಯೋಗ ನಡೆಸಿದ್ದ ಯುವಕರ ಮೊಬೈಲ್‌ನಲ್ಲಿ ಶಬ್ಬೀರ್ ಜೊತೆ ಮಾತನಾಡಿದ ಕರೆ ದಾಖಲೆಗಳು ಪತ್ತೆಯಾಗಿವೆ. ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಎಎಪಿ ಶಾಸಕ ಅಮಾನತುಲ್ಲಾ ಖಾನ್‌ಗೆ ನ್ಯಾಯಾಂಗ ಬಂಧನ
ನವದೆಹಲಿ, ಸೆ. ೨೬: ದೆಹಲಿ ವಕ್ಫ್ಬೋರ್ಡ್ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬAಧಿಸಿದAತೆ ಬಂಧನಕ್ಕೊಳಗಾಗಿರುವ ಆಮ್ ಆದ್ಮಿ ಪಕ್ಷದ ಶಾಸಕ ಅಮಾನತುಲ್ಲಾ ಖಾನ್ ಅವರನ್ನು ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯವು ೧೪ ದಿನಗಳ ನ್ಯಾಯಾಂಗ ಬಂಧನ ಆದೇಶಿಸಿದೆ. ಈ ಮಧ್ಯೆ ಶಾಸಕ ಅಮಾನತುಲ್ಲಾ ಖಾನ್ ಅವರ ವಕೀಲರ ತಂಡ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ತಾ. ೨೮ ರಂದು (ಇಂದು) ವಿಚಾರಣೆ ನಡೆಯಲಿದೆ. ದೆಹಲಿ ವಕ್ಫ್ ಬೋರ್ಡ್ ನೇಮಕಾತಿಯಲ್ಲಿನ ಅಕ್ರಮಗಳಿಗೆ ಸಂಬAಧಿಸಿದAತೆ ಖಾನ್ ಅವರನ್ನು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಸೆಪ್ಟೆಂಬರ್ ೧೬ ರಂದು ಅವರ ಮತ್ತು ಅವರ ಸಹಾಯಕರ ಮನೆಗಳ ಮೇಲೆ ದಾಳಿ ನಡೆಸಿ ಬಂಧಿಸಲಾಗಿತ್ತು. ಬಂಧನಕ್ಕೊಳಗಾದ ಒಂದು ದಿನದ ನಂತರ, ಅಮಾನತುಲ್ಲಾ ಖಾನ್ ಅವರನ್ನು ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿತ್ತು. ೨೦೨೦ರಲ್ಲಿ ಭ್ರಷ್ಟಾಚಾರ ತಡೆ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬAಧಿಸಿದAತೆ ಓಖ್ಲಾ ಶಾಸಕ ಅಮಾನತುಲ್ಲಾ ಖಾನ್ ರನ್ನು ವಿಚಾರಣೆಗೆ ಕರೆಯಲಾಗಿತ್ತು. ವಿಚಾರಣೆ ಬೆನ್ನಲ್ಲೇ ಖಾನ್ ಅವರ ನಿವಾಸ ಹಾಗೂ ಕಚೇರಿಗಳ ಮೇಲೆ ಎಸಿಬಿ ದಾಳಿ ನಡೆಸಿದ್ದು, ದಾಳಿ ವೇಳೆ ೧೨ ಲಕ್ಷ ರೂ. ನಗದು ಮತ್ತು ಪರವಾನಗಿ ಇಲ್ಲದ ಗನ್, ಕೆಲವು ಕಾಟ್ರಿಡ್ಜ್ಗಳನ್ನು ಜಪ್ತಿ ಮಾಡಲಾಗಿತ್ತು.
ಆತ್ಮನಿರ್ಭರ ಭಾರತಕ್ಕೆ ಸಂಕಲ್ಪ ಮಾಡೋಣ - ರಾಷ್ಟçಪತಿ
ಹುಬ್ಬಳ್ಳಿ, ಸೆ. ೨೬: ಸ್ವಾತಂತ್ರö್ಯದ ಅಮೃತ ಮಹೋತ್ಸವದ ಈ ಸಂದರ್ಭದಲ್ಲಿ ಆತ್ಮನಿರ್ಭರ ಭಾರತಕ್ಕೆ ನಾವೆಲ್ಲ ಸಂಕಲ್ಪ ಮಾಡೋಣ, ಒಡಿಶಾದ ಸಾಮಾನ್ಯ ಕುಟುಂಬದಿAದ ಬಂದಿರುವ ಮಹಿಳೆಯನ್ನು ಗೌರವಿಸುವ ಮೂಲಕ ಹುಬ್ಬಳ್ಳಿ ಧಾರವಾಡದ ಜನತೆ ದೇಶದ ಸಮಸ್ತ ಮಹಿಳೆಯರನ್ನು ಗೌರವಿಸಿದ್ದಾರೆ ಎಂದು ರಾಷ್ಟçಪತಿ ದ್ರೌಪದಿ ಮುರ್ಮು ಅವರು ಹೇಳಿದ್ದಾರೆ. ಇಂದು ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆಯು ಇಲ್ಲಿನ ಕರ್ನಾಟಕ ಜಿಮ್‌ಖಾನಾ ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಷ್ಟçಪತಿಗಳು ಪೌರಸನ್ಮಾನ ಸ್ವೀಕರಿಸಿ ಮಾತನಾಡಿದರು. ಹುಬ್ಬಳ್ಳಿ ಧಾರವಾಡ ಅವಳಿನಗರಗಳು ಕರ್ನಾಟಕ ಮಾತ್ರವಲ್ಲ, ಸಮಗ್ರ ಭಾರತದ ಸಾಂಸ್ಕೃತಿಕ, ಐತಿಹಾಸಿಕ ನಗರಗಳಾಗಿವೆ. ಉತ್ತರ ಕರ್ನಾಟಕದ ಈ ನಗರಗಳಲ್ಲಿ ಕನ್ನಡ, ಮರಾಠಿ ಭಾಷೆಗಳ ಅದ್ಭುತ ಸಂಗಮವಿದೆ. ಆಧ್ಯಾತ್ಮ, ಸಾಂಸ್ಕೃತಿಕ, ಶೈಕ್ಷಣಿಕ ಮಾತ್ರವಲ್ಲ, ಆಧುನಿಕವಾಗಿಯೂ ಈ ನಗರಗಳು ಅಭಿವೃದ್ಧಿ ಪಥದಲ್ಲಿ ಸಾಗುತ್ತಿವೆ. ಉತ್ತರ ಕರ್ನಾಟಕವು ಸಾಂಸ್ಕೃತಿಕ, ಅಧ್ಯಾತ್ಮಿಕತೆ ಹಾಗೂ ಶೈಕ್ಷಣಿಕ ಸಾಧನೆ ಹಾಗೂ ಆಧುನಿಕ ಸೌಲಭ್ಯಗಳಿಂದ ದೇಶದಲ್ಲಿ ಹೆಸರುವಾಸಿಯಾಗಿದೆ. ಪ್ರಾಚೀನ ಸಾಧನೆಯ ಜೊತೆಗೆ ಅಧುನಿಕತೆಯ ಅಭಿವೃದ್ದಿಗೆ ತೆರೆದುಕೊಂಡಿದೆ ಎಂದರು.