ಸಿದ್ದಾಪುರ, ಸೆ. ೨೬: ಹುಲಿಯ ಹಾಗೂ ಕಾಡಾನೆಗಳ ಹಾವಳಿಯಿಂದ ತತ್ತರಿಸಿರುವ ಮಾಲ್ದಾರೆ ಸಮೀಪದ ತಟ್ಟಳ್ಳಿ ಗ್ರಾಮದಲ್ಲಿ ಇದೀಗ ಚಿರತೆಯ ಹೆಜ್ಜೆ ಪತ್ತೆಯಾಗಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ. ಮಾಲ್ದಾರೆಯ ತಟ್ಟಳ್ಳಿಯ ಶಾಲೆಯ ಸಮೀಪ ಚಿರತೆಗಳು ನಡೆದುಕೊಂಡು ಹೋಗಿ ಕಾಫಿ ತೋಟದ ಒಳಗೆ ನುಸುಳಿರುವ ಹೆಜ್ಜೆ ಗುರುತುಗಳು ಕಾಣಿಸಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ಅರಣ್ಯ ಇಲಾಖೆಗೆ ದೂರು ನೀಡಿದ ಮೇರೆಗೆ ಅರಣ್ಯ ಇಲಾಖೆಯ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಭಾಗದಲ್ಲಿ ವನ್ಯ ಜೀವಿಗಳ ಹಾವಳಿ ತೀವ್ರವಾಗಿದ್ದು, ಇವುಗಳ ಹಾವಳಿಯನ್ನು ತಡೆಗಟ್ಟಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.