ಮಡಿಕೇರಿ, ಸೆ. ೨೬ : ಕೊಡಗು ಜಿಲ್ಲೆಯಲ್ಲಿ ಒಟ್ಟು ೫೨೫ ಹಳ್ಳಿಗಳಲ್ಲಿ ೨,೯೦,೯೭೨ ಸರ್ವೆ ನಂಬರ್ಗಳಿದ್ದು, ಈ ಸರ್ವೆ ನಂಬರ್ಗಳ ಪೈಕಿ ೨,೬೦,೬೧೦ ತಾಕುಗಳಲ್ಲಿ ಬೆಳೆ ಸಮೀಕ್ಷೆ ಕೈಗೊಳ್ಳಬೇಕಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಶಬನಾ ಎಂ.ಷೇಕ್ ಅವರು ತಿಳಿಸಿದರು.
ಸರ್ಕಾರದ ಆದೇಶದಂತೆ ಈ ಬಾರಿಯ ರೈತರ ಬೆಳೆ ಸಮೀಕ್ಷೆ ಕಾರ್ಯದಲ್ಲಿ ರೈತರು ಸ್ವತಃ ತಮ್ಮ ಜಮೀನಿನಲ್ಲಿ ತಾವು ಬೆಳೆದ ಬೆಳೆಯ ವಿವರವನ್ನು ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ.
ಜಿಲ್ಲೆಯ ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರ ದಾಖಲಿಸಲು “ಈಚಿಡಿmeಡಿ ಅಡಿoಠಿ Suಡಿveಥಿ ಂಠಿಠಿ-೨೦೨೨-೨೩” ಎಂಬ ಹೆಸರಿನ ಮೊಬೈಲ್ ಆಪ್ ಅನ್ನು ಗೂಗಲ್ ಪ್ಲೇ-ಸ್ಟೋರ್ನಿಂದ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. ಮೊಬೈಲ್ ಆಪ್ ಬಳಕೆ ಮಾಡುವ ರೀತಿಯನ್ನು ರೈತರಿಗೆ ತಿಳಿಸಲು ಪ್ರತಿ ಗ್ರಾಮದಲ್ಲಿ ನುರಿತ ಖಾಸಗಿ ನಿವಾಸಿಗಳನ್ನು ನೇಮಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು ೪೯೦ ಖಾಸಗಿ ನಿವಾಸಿಗಳನ್ನು ನೇಮಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ರೈತರು ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್ ಅನ್ನು ಬಳಸಲು ಹೊಸ ರೈತರ ಬೆಳೆ ಸಮೀಕ್ಷೆ ಅಪ್ಲಿಕೇಷನ್ ಫ್ರೂಟ್ಸ್ ತಂತ್ರಾAಶದ ಎಫ್ಐಡಿ ಸಂಖ್ಯೆಗೆ ಜೋಡಣೆಯಾಗಿರುವುದರಿಂದ ಅಪ್ಲ್ಲಿಕೇಷನ್ ಬಳಸಲು ರೈತರು ಫ್ರೂಟ್ಸ್ ತಂತ್ರಾAಶದ ಎಫ್ಐಡಿ ಸಂಖ್ಯೆ ಹೊಂದಿರುವುದು ಕಡ್ಡಾಯವಾಗಿದೆ.
ಮೊದಲಿಗೆ ಗೂಗಲ್ ಪ್ಲೇ-ಸ್ಟೋರ್ನಲ್ಲಿ ‘ಏhಚಿಡಿiಜಿ ಈಚಿಡಿmeಡಿ ಅಡಿoಠಿ-೨೦೨೨-೨೩’ ಎಂದು ಹುಡುಕಿ ಡೌನ್ಲೋಡ್ ಮಾಡಿಕೊಳ್ಳಬೇಕು. ಇಕೆವೈಸಿ ಮೂಲಕ ಆಧಾರ್ ದೃಢೀಕರಿಸಿ ಎಂದು ಕ್ಲಿಕ್ಕಿಸಿ ಆಧಾರ್ ಕಾರ್ಡ್ ಸಂಖ್ಯೆಯನ್ನು ನಮೂದಿಸಿ ಜನರೇಟ್ ಒಟಿಪಿ ಎಂದು ಕ್ಲಿಕ್ಕಿಸಿ ನಂತರ ಬರುವ ೬ ಅಂಕಿಯ ಒಟಿಪಿ ನಮೂದಿಸಿ, ನಂತರ ಮೊಬೈಲ್ ನಂಬರ್ ಅನ್ನು ನಮೂದಿಸಿ ೪ ಅಂಕಿಯ ಒಟಿಪಿ ಪಡೆದುಕೊಂಡು ಅಪ್ಲಿಕೇಷನ್ ಸಕ್ರಿಯಗೊಳಿಸಲು ಒಟಿಪಿ ನಮೂದಿಸಬೇಕು.
ರೈತರ ಆಧಾರ್ ಸಂಖ್ಯೆ ಮತ್ತು ಎಫ್ಐಡಿ ಸಂಖ್ಯೆಗೆ ಜೋಡಣೆಯಾದ ಎಲ್ಲಾ ಜಮೀನುಗಳ ಮಾಹಿತಿಗಳು ಡೌನ್ಲೋಡ್ ಆಗುತ್ತವೆ. ಮುಂದಿನ ಹಂತದಲ್ಲಿ ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರವನ್ನು ದಾಖಲಿಸಬೇಕು. ಈ ಹಂತದಲ್ಲಿ ರೈತರು ತಮ್ಮ ಜಮೀನಿನಲ್ಲಿ ಪಾಳು ಬಿಟ್ಟಿರುವ ಪ್ರದೇಶ, ಕೃಷಿಯೇತರ ಬಳಕೆಗೆ(ಕೊಟ್ಟಿಗೆ, ಕೃಷಿ ಹೊಂಡ, ಮನೆ ಇತರೆ) ಬಳಕೆಯಾದ ಪ್ರದೇಶದ ವಿವರವನ್ನು ಸಹ ದಾಖಲಿಸಬೇಕಿದೆ ಎಂದರು.
ರೈತರು ತಾವು ಬೆಳೆದ ಪ್ರತಿ ಬೆಳೆಯ ವಿಸ್ತೀರ್ಣದ ಜೊತೆಗೆ ಪ್ರತಿ ಬೆಳೆಯ ೨ ಛಾಯಾ ಚಿತ್ರಗಳನ್ನು ತೆಗೆದು ಅಪ್ಲೋಡ್ ಮಾಡಬೇಕು. ಹೀಗೆ ಅಪ್ಲೋಡ್ ಮಾಡಲಾದ ಮಾಹಿತಿಯನ್ನು ಪ್ರತಿ ಗ್ರಾಮಕ್ಕೆ ನೇಮಿಸಲಾದ ಸರ್ಕಾರಿ ಅಧಿಕಾರಿಗಳು (ಮೇಲ್ವಿಚಾರಕರು) ಪರಿಶೀಲಿಸಿ ಅನುಮೋದಿಸುತ್ತಾರೆ.
ರೈತರು ಎಫ್ಐಡಿ ಸಂಖ್ಯೆ ಹೊಂದಿಲ್ಲದಿದ್ದಲ್ಲಿ ರೈತ ಸಂಪರ್ಕ ಕೇಂದ್ರ, ಗ್ರಾಮ ಒನ್ ಕೇಂದ್ರ, ತೋಟಗಾರಿಕೆ ಇಲಾಖೆ ಅಥವಾ ಕಂದಾಯ ಇಲಾಖೆಯನ್ನು ಸಂಪರ್ಕಿಸಿ ಎಫ್ಐಡಿ ಸಂಖ್ಯೆ ಮಾಡಿಸಿಕೊಳ್ಳಬಹುದು. ಎಫ್ಐಡಿ ಸಂಖ್ಯೆಗೆ ಯಾವುದಾದರೂ ಜಮೀನು ಸೇರ್ಪಡೆ ಆಗದೇ ಇದ್ದಲ್ಲಿ ಸೇರಿಸಿಕೊಳ್ಳಲು ಇದೇ ಮೊಬೈಲ್ ಆ್ಯಪ್ನಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದರು.
ಹೀಗೆ ಸಂಗ್ರಹಿಸಲಾದ ರೈತರ ಬೆಳೆ ಸಮೀಕ್ಷೆ ಮಾಹಿತಿಯನ್ನು ಸರ್ಕಾರದ ಯೋಜನೆಗಳಿಗೆ ಬಳಸಲಾಗುತ್ತದೆ. ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಗುರುತಿಸಲು, ಬೆಳೆ ವಿಮಾ ಯೋಜನೆಯಡಿ ಬೆಳೆ ವಿವರ ಪರಿಶೀಲಿಸಲು, ಸಾಂಖ್ಯಿಕ ಇಲಾಖೆ, ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳ ಬೆಳೆ ವಿಸ್ತೀರ್ಣ ವರದಿ ಕಾರ್ಯದಲ್ಲಿ, ಬೆಳೆ ಕಟಾವು ಪ್ರಯೋಗಗಳನ್ನು ಕೈಗೊಳ್ಳಲು, ಬೆಳೆ ಮಾನದಂಡಗಳಿಗೆ ಅನುಗುಣವಾಗಿ ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳ ಫಲಾನುಭವಿ ಆಧಾರಿತ ಯೋಜನೆಗಳ ಅನುಷ್ಠಾನಕ್ಕೆ, ಪಹಣಿಯಲ್ಲಿ ಬೆಳೆ ವಿವರ ದಾಖಲಿಸಲು, ಬ್ಯಾಂಕ್ ಮತ್ತು ವ್ಯವಸಾಯ ಸೇವಾ ಸಹಕಾರಿ ಸಂಘಗಳ ಮುಖಾಂತರ ಬೆಳೆ ಸಾಲ ನೀಡುವ ಸಂದರ್ಭದಲ್ಲಿ ಬೆಳೆ ಪರಿಶೀಲನೆ ಮಾಡಲು ಈ ಅಂಶಗಳನ್ನು ಗಮನದಲ್ಲಿರಿಸಿಕೊಂಡು ಜಿಲ್ಲೆಯ ರೈತರು ಬೆಳೆ ಸಮೀಕ್ಷೆ ಅವಕಾಶದ ಸದುಪಯೋಗ ಪಡೆದುಕೊಂಡು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರವನ್ನು ತಾವೇ ಸರ್ಕಾರಕ್ಕೆ ನಿಗದಿತ ಸಮಯದೊಳಗೆ ವರದಿ ಮಾಡಲು ಕೋರಿದೆ.
ಹೆಚ್ಚಿನ ಮಾಹಿತಿಗೆ ಕೇಂದ್ರ ಕಚೇರಿಯ ಸಹಾಯವಾಣಿ ಸಂಖ್ಯೆ ೭೮೪೮೯೧೪೯೧೫, ತಮ್ಮ ಗ್ರಾಮದ ಖಾಸಗಿ ನಿವಾಸಿಯನ್ನು ಅಥವಾ ಸಮೀಪದ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ತಮ್ಮ ಗ್ರಾಮದ ಗ್ರಾಮ ಲೆಕ್ಕಿಗರನ್ನು ಅಥವಾ ನಾಡ ಕಚೇರಿ ಮತ್ತು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಸಂಪರ್ಕಿಸಬಹುದು ಶಬನಾ ಎಂ. ಷೇಕ್ ತಿಳಿಸಿದ್ದಾರೆ.