ನಾಪೋಕ್ಲು, ಸೆ. ೨೬: ಪ್ರತಿಯೊಬ್ಬರು ತಮ್ಮ ಪರಿಸರದಲ್ಲಿ ಗಿಡಗಳನ್ನು ನೆಡುವುದರ ಮೂಲಕ ಉತ್ತಮ ಪರಿಸರ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ನರಿಯಂದಡ ಕೇಂದ್ರ ಪ್ರೌಢಶಾಲೆಯ ಲಯನ್ಸ್ ಕ್ಲಬ್ ಅಧ್ಯಕ್ಷ ಕೆ.ಎಂ. ಮುತ್ತಪ್ಪ ಹೇಳಿದರು.

ನಾಪೋಕ್ಲು ಲಯನ್ಸ್ ಸಂಸ್ಥೆ ವತಿಯಿಂದ ಪ್ರೌಢಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ವನಮೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಲಯನ್ಸ್ ವಲಯ ಅಧ್ಯಕ್ಷ ಮುಕ್ಕಾಟಿರ ವಿನಯ್ ಕೊಡುಗೆಯಾಗಿ ನೀಡಿದ ೨೫ ವಿವಿಧ ರೀತಿಯ ಹಣ್ಣಿನ ಗಿಡಗಳನ್ನು ಶಾಲಾ ಪರಿಸರದಲ್ಲಿ ಲಯನ್ಸ್ ವಲಯ ಅಧ್ಯಕ್ಷ ಮುಕ್ಕಾಟಿರ ವಿನಯ್ ಮತ್ತು ನರಿಯಂದಡ ಕೇಂದ್ರ ಪ್ರೌಢಶಾಲೆಯ ಅಧ್ಯಕ್ಷ ಚೇನಂಡ ಗಿರೀಶ್ ಒಡಗೂಡಿ ನೆಡಲಾಯಿತು. ಈ ಸಂದರ್ಭ ಲಯನ್ಸ್ ಕ್ಲಬ್ ಉಪಾಧ್ಯಕ್ಷ ಎ.ಪಿ. ವಸಂತ್ ಮುತ್ತಪ್ಪ, ಖಜಾಂಚಿ ಎಂ.ಬಿ. ಕುಟ್ಟಪ್ಪ, ಸದಸ್ಯ ಕೆ.ಸಿ. ತಿಮ್ಮಯ್ಯ, ಸೇವಾ ಕಾರ್ಯಗಳ ಪ್ರಾಯೋಜಕ ಬನ್ಸಿ ಭೀಮಯ್ಯ, ಶಾಲಾ ಆಡಳಿತ ಮಂಡಳಿ ಸದಸ್ಯರು ಹಾಗೂ ಶಿಕ್ಷಕ ವೃಂದ, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.