ಮಡಿಕೇರಿ ಸೆ.೨೬ : ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನೆಯ ೧೯ನೇ ವಾರ್ಷಿಕೋತ್ಸವವು ಶ್ರದ್ಧಾ ಭಕ್ತಿಯಿಂದ ನೆರವೇರಿತು.

ತಾ.೨೪ ರಿಂದ ಗುರು ಗಣಪತಿ ಪೂಜೆ, ಪುಣ್ಯಾಹ, ಸಂಕಲ್ಪ, ದುರ್ಗಾ ಸಪ್ತಶತಿ ಪಾರಾಯಣ, ಮಹಾಪೂಜೆ, ದೀಪಾರಾಧನೆ ಹಾಗೂ ತೀರ್ಥಪ್ರಸಾದ ವಿನಿಯೋಗ ನಡೆಯಿತು.

ತಾ.೨೫ ರಂದು ಚಂಡಿಕಾ ಹೋಮ, ಪೂರ್ಣಾಹುತಿ ಹಾಗೂ ಮಹಾ ಮಂಗಳಾರತಿಯೊAದಿಗೆ ತೀರ್ಥಪ್ರಸಾದ ವಿನಿಯೋಗ ನೆರವೇರಿತು. ಸಂಜೆ ಗುರು ಗಣಪತಿ ಹೋಮ, ಪುಣ್ಯಾಹ, ಸಂಕಲ್ಪ, ಕಳಶಸ್ಥಾಪನೆ, ದೀಪಾರಾಧನೆ, ಅಷ್ಠಾವಧಾನ ಸೇವೆ ನಂತರ ತೀರ್ಥ ಪ್ರಸಾದ ವಿನಿಯೋಗ ನಡೆಯಿತು.

ಇಂದು ಗುರುಗಣಪತಿ ಪೂಜೆ, ಪುಣ್ಯಾಹ, ಗಣಪತಿ ಹೋಮ, ಕಲಾಹೋಮ, ತತ್ವಹೋಮ, ತತ್ವಶಾಂತಿ ಹೋಮ, ದುರ್ಗಾ ಹೋಮ, ತತ್ವಕಲಶಾಭಿಷೇಕ, ಮಹಾಪೂಜೆ, ತೀರ್ಥಪ್ರಸಾದ ವಿನಿಯೋಗ ಮಾಡಲಾಯಿತು.

ಮಧ್ಯಾಹ್ನ ೧೨.೩೦ ಗಂಟೆಗೆ ಅನ್ನದಾನ ಏರ್ಪಡಿಸಲಾಗಿತ್ತು. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವಿಯ ಪ್ರಸಾದ ಸ್ವೀಕರಿಸಿದರು. ಅರ್ಚಕ ಶ್ರೀಕೃಷ್ಣ ಉಪಾಧ್ಯಾಯ ನೇತೃತ್ವದಲ್ಲಿ ಪೂಜೆ, ಹೋಮ, ಹವನಾದಿ ಕಾರ್ಯಗಳು ನೆರವೇರಿದವು.