ಕುಶಾಲನಗರ, ಸೆ.೨೬: ಪೌರಕಾರ್ಮಿಕರ ದಿನಾಚರಣೆ ಅಂಗವಾಗಿ ಕುಶಾಲನಗರದಲ್ಲಿ ಸರಳ ಕಾರ್ಯಕ್ರಮ ನಡೆಯಿತು. ಕುಶಾಲನಗರ ಎಪಿಸಿಎಂಎಸ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮಕ್ಕೆ ಪಟ್ಟಣ ಪಂಚಾಯಿತಿ ಅಧ್ಯಕ್ಷ ಜಯವರ್ಧನ್ ಚಾಲನೆ ನೀಡಿದರು.

ಈ ಸಂದರ್ಭ ಮಾತನಾಡಿದ ಜಯವರ್ಧನ್, ಊರಿನ ಸ್ವಚ್ಛತೆಗೆ ಆದ್ಯತೆ ನೀಡಿ ಕರ್ತವ್ಯ ಮಾಡುತ್ತಿರುವ ಪೌರಕಾರ್ಮಿಕರಿಗೆ ಸರ್ಕಾರದ ಸವಲತ್ತುಗಳನ್ನು ಸಮಯಕ್ಕೆ ಸರಿಯಾಗಿ ನೀಡಲಾಗುತ್ತಿದೆ. ಕುಶಾಲನಗರ ಪಟ್ಟಣ ಪಂಚಾಯಿತಿಯ ಪೌರಕಾರ್ಮಿಕರಿಗೆ ಅರ್ಹ ಸರಕಾರಿ ವ್ಯವಸ್ಥೆಯನ್ನು ಕಲ್ಪಿಸುವುದರೊಂದಿಗೆ ಆದÀ್ಯತೆ ಮೇರೆಗೆ ಖಾಯಂ ನೇಮಕಾತಿ ವ್ಯವಸ್ಥೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

ಪೌರಕಾರ್ಮಿಕರಿಗೆ ದ್ವಿಚಕ್ರ ವಾಹನ ಸೌಲಭ್ಯ, ಸಂಕಷ್ಟ ಭತ್ಯೆ ಸೇರಿದಂತೆ ಮನೆ ನಿರ್ಮಾಣ, ಸೌಲಭ್ಯಗಳನ್ನು ಒದಗಿಸಿಕೊಡಲಾಗುತ್ತಿದೆ ಎಂದರು. ಪಂಚಾಯಿತಿ ಉಪಾಧ್ಯಕ್ಷರು, ಸದಸ್ಯರುಗಳು ಮಾತನಾಡಿ, ಪೌರಕಾರ್ಮಿಕರ ಸಂಪೂರ್ಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವಲ್ಲಿ ಕುಶಾಲನಗರ ಪಂಚಾಯಿತಿ ಕ್ರಮ ಕೈಗೊಳ್ಳುತ್ತಿದೆ ಎಂದರು. ಊರಿನ ಶುಚಿತ್ವದ ಬಗ್ಗೆ ನಾಗರಿಕರು ಪೌರಕಾರ್ಮಿಕರೊಂದಿಗೆ ಕೈ ಜೋಡಿಸಬೇಕಿದೆ ಎಂದು ಪೌರಕಾರ್ಮಿಕರ ಸಂಘದ ಅಧ್ಯಕ್ಷ ಎಸ್.ಆರ್. ಗಣೇಶ್ ಹೇಳಿದರು. ದಿನಗೂಲಿ ಕಾರ್ಮಿಕರನ್ನು ಶೀಘ್ರ ಖಾಯಂಗೊಳಿಸುವAತೆ ಅವರು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ದಿನಾಚರಣೆ ಅಂಗವಾಗಿ ನಡೆದ ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದ ಪೌರಕಾರ್ಮಿಕರು, ಸಿಬ್ಬಂದಿಗಳಿಗೆ ಬಹುಮಾನ ವಿತರಿಸಲಾಯಿತು. ಇದೇ ಸಂದರ್ಭ ಪಟ್ಟಣ ಪಂಚಾಯಿತಿ ಅಧ್ಯಕ್ಷ ಜಯವರ್ಧನ್ ಅವರನ್ನು ಪೌರಕಾರ್ಮಿಕರ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಪಂಚಾಯಿತಿ ವತಿಯಿಂದ ಎಲ್ಲಾ ಪೌರಕಾರ್ಮಿ ಕರನ್ನು ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಉಪಾಧ್ಯಕ್ಷೆ ಸುರಯ್ಯ ಭಾನು, ಪೌರಕಾರ್ಮಿಕರ ಸಂಘದ ಅಧ್ಯಕ್ಷ ಎಸ್.ಆರ್. ಗಣೇಶ್, ಗೌರವಾಧ್ಯಕ್ಷ ಮೋಹನ್‌ಕುಮಾರ್, ಕಾರ್ಯದರ್ಶಿ ನಂಜುAಡ ಮತ್ತು ಪಟ್ಟಣ ಪಂಚಾಯಿತಿ ಸದಸ್ಯರು ಇದ್ದರು. ಪಂಚಾಯಿತಿ ಆರೋಗ್ಯಾಧಿಕಾರಿ ಉದಯಕುಮಾರ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.