ಸುಂಟಿಕೊಪ್ಪ, ಸೆ. ೨೬: ಇಲ್ಲಿಗೆ ಸಮೀಪದ ನಾಕೂರು ಶಿರಂಗಾಲ ಗ್ರಾಮದಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ, ಕೊಡಗು ಜಿಲ್ಲಾ ಪಂಚಾಯಿತಿ ಗ್ರಾಮ ಪಂಚಾಯಿತಿ ವತಿಯಿಂದ ಕಾನ್ ಬೈಲ್ ಶಾಲಾ ಆವರಣದಲ್ಲಿ ಸ್ವಚ್ಛ ಭಾರತ ಮಿಷಿನ್ ಸ್ವಚ್ಛೋತ್ಸವ ನಿತ್ಯೋತ್ಸವ ತ್ಯಾಜ ನಿರ್ವಹಣೆ ಹಾಗೂ ಶ್ರಮದಾನ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗೂಳಪ್ಪ ಕೂತಿನಾರ್ ಪಂಚಾಯಿತಿ ಅಧ್ಯಕ್ಷ ಬಿ.ಜಿ.ರಮೇಶ್, ಸದಸ್ಯರಾದ ಎಂ.ಸಿ.ಜಗನಾಥ್, ಪಂಚಾಯಿತಿ ಸಿಬ್ಬಂದಿ ಗ್ರಾಮದ ಯುವಕರು ಪಾಲ್ಗೊಂಡರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗೂಳಪ್ಪ ಕೂತಿನಾರ್ ಪ್ರತಿಜ್ಞಾ ವಿಧಿ ಭೋದಿಸಿದರು. ನಂತರ ಕಾನ್‌ಬೈಲ್ ಶಾಲಾ ಆವರಣದಲ್ಲಿ ಗಿಡಗಂಟಿ ಕಡಿಯುವ ಮೂಲಕ ಶ್ರಮದಾನ ಮಾಡಲಾಯಿತು.