ಮುಳ್ಳೂರು, ಸೆ. ೨೬: ಇತ್ತೀಚೆಗೆ ಬೆಳಗಾವಿ ಬೈಲ ಹೊಂಗಲದಲ್ಲಿ ‘ಶ್ರೀ ಜ್ಞಾನೇಶ್ವರ ಆದರ್ಶ ಶಿಕ್ಷಕಿ’ ರಾಜ್ಯ ಪ್ರಶಸ್ತಿಗೆ ಭಾಜನರಾಗಿ ಪ್ರಶಸ್ತಿ ಸ್ವೀಕರಿಸಿದ ಶನಿವಾರಸಂತೆ ಸುಪ್ರಜ ಗುರುಕುಲ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲೆ ಹಾಗೂ ಶನಿವಾರಸಂತೆ ಹೋಬಳಿ ಜಾನಪದ ಪರಿಷತ್ ಘಟಕದ ಅಧ್ಯಕ್ಷೆ ಡಿ. ಸುಜಲಾದೇವಿ ಅವರು ಪ್ರಶಸ್ತಿಯ ಜೊತೆಯಲ್ಲಿ ನೀಡಿದ್ದ ರೂ. ೧೫ ಸಾವಿರ ನಗದು ಹಣವನ್ನು ದುಂಡಳ್ಳಿ ಗ್ರಾ.ಪಂ. ವ್ಯಾಪ್ತಿಯಲ್ಲಿರುವ ಹಿಂದೂ ರುದ್ರಭೂಮಿ ಅಭಿವೃದ್ಧಿ ಕಾರ್ಯಕ್ಕೆ ನೀಡಿದರು. ಸುಜಲಾದೇವಿ ಅವರು ಹಿಂದೂ ರುದ್ರಭೂಮಿ ಅಭಿವೃದ್ಧಿ ಸಮಿತಿ ಗೌರವಾಧ್ಯಕ್ಷ ಕೆ.ಪಿ. ಶಿವಪ್ಪ ಅವರಿಗೆ ನಗದು ಹಣವನ್ನು ಹಸ್ತಾಂತರಿಸಿದರು