ಸುಂಟಿಕೊಪ್ಪ, ಸೆ. ೨೬ : ಗ್ರಾ.ಪಂ.ನ ಸಾಮಾಜಿಕ ಪರಿಶೋಧನಾ ವಿಶೇಷ ಗ್ರಾಮ ಸಭೆಯು ಇಲ್ಲಿನ ಡಾ: ಬಿ. ಆರ್.ಅಂಬೇಡ್ಕರ್ ಭವನದಲ್ಲಿ ನಡೆಯಿತು. ಪಂ, ಅಧ್ಯಕ್ಷೆ ಶಿವಮ್ಮ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ೨೦೨೧-೨೨ನೇ ೧೫ನೇ ಹಣಕಾಸು ಯೋಜನೆಯ ಕಾಮಗಾರಿಗೆ ಪಾವತಿ ಮಾಡಿದ ವಿವರ ಹಾಗೂ ಮಹಾತ್ಮ ಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ನಿರ್ವಹಿಸಿದ ಕಾಮಗಾರಿಗಳ ವಿವರವನ್ನು ಸಾರ್ವಜನಿಕರಿಗೆ ತಿಳಿಸಲಾಯಿತು.

ನಂತರ ನಡೆದ ಸಭೆಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಮಾಡಬಹುದಾದ ಕಾಮಗಾರಿಗಳ ಬಗ್ಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವೇಣುಗೋಪಾಲ್ ಸಭೆಯಲ್ಲಿದ್ದ ಸಾರ್ವಜನಿಕರಿಗೆ ಮಾಹಿತಿ ನೀಡಿದರು. ಸಭೆಯಲ್ಲಿ ತಾಲೂಕು ಪಂಚಾಯಿತಿ ಸಹಾಯಕ ಅಭಿಯಂತರ ಫಾಯಸ್ ನಡೆದ ಕಾಮಗಾರಿಗಳ ವಿವರನ್ನು ತಿಳಿಸಿದರು. ಕಾರ್ಯಕ್ರಮದಲ್ಲಿ ನೋಡಲ್ ಅಧಿಕಾರಿಯಾಗಿ ಸಾಮಾಜಿಕ ಲೆಕ್ಕ ಪತ್ರ ಪರಿಶೋಧನಾ ಇಲಾಖೆೆಯ ತಾಂತ್ರಿಕ ಸಂಯೋಜಕಿ ಮಮತಾ ಹಾಗೂ ವಿಕ್ರಮ್ ಕಾರ್ಯನಿರ್ವಹಿಸಿದರು. ಸಭೆಯಲ್ಲಿ ಪಂಚಾಯಿತಿ ಉಪಾಧ್ಯಕ್ಷ ಪ್ರಸಾದ್ ಕುಟ್ಟಪ್ಪ ಹಾಗೂ ಪಂಚಾಯಿತಿ ಸರ್ವ ಸದಸ್ಯರು ಪಂಚಾಯಿತಿ ಸಿಬ್ಬಂದಿ ವರ್ಗ ಹಾಜರಿದ್ದರು ಪಂಚಾಯಿತಿ ಸಿಬ್ಬಂದಿ ಸ್ವಾಗತಿಸಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವೇಣುಗೋಪಾಲ್ ವಂದಿಸಿದರು.