ಮಡಿಕೇರಿ, ಸೆ. ೨೮: ಪೊನ್ನಂಪೇಟೆ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಖಾಲಿಯಿದ್ದ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರುಗಳ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿತ್ತು. ಅದರಂತೆ ಸ್ವೀಕರಿಸಲಾದ ಅರ್ಜಿಗಳನ್ನು ತಾ. ೨೩ ರಂದು ಅಧ್ಯಕ್ಷರು ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಆಯ್ಕೆ ಸಮಿತಿ ಹಾಗೂ ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ಗುರುತಿಸಲಾದ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಸಂಭವನೀಯ ಪಟ್ಟಿಯನ್ನು ಶಿಶು ಅಭಿವೃದ್ಧಿ ಯೋಜನಾ ಕಚೇರಿ, ಪೊನ್ನಂಪೇಟೆ ತಾಲೂಕು ಕಚೇರಿಯಲ್ಲಿ ಪ್ರಕಟಿಸಲಾಗಿದೆ. ಈ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಅಕ್ಟೋಬರ್ ೧ ರ ಸಂಜೆ ೫.೩೦ ರೊಳಗೆ ಸೂಕ್ತ ದಾಖಲಾತಿಯೊಂದಿಗೆ ಮನವಿಯನ್ನು ಖುದ್ದಾಗಿ ಶಿಶು ಅಭಿವೃದ್ಧಿ ಯೋಜನಾ ಕಚೇರಿ, ಪೊನ್ನಂಪೇಟೆಗೆ ಸಲ್ಲಿಸುವುದು. ಆ ನಂತರ ಬಂದ ಆಕ್ಷೇಪಣೆಗೆಳನ್ನು ಪರಿಗಣಿಸಲಾಗುವುದಿಲ್ಲ ಎಂದು ಪೊನ್ನಂಪೇಟೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಳಿಸಿದ್ದಾರೆ.