ಮಡಿಕೇರಿ, ಸೆ. ೨೭: ಐತಿಹಾಸಿಕ ನಾಡಹಬ್ಬ ಮಡಿಕೇರಿ ದಸರಾ ಉತ್ಸವದ ನವರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಗಾಂಧಿ ಮೈದಾನದ ಕಲಾ ಸಂಭ್ರಮ ವೇದಿಕೆಯಲ್ಲಿ ಶಾಸಕ ಅಪ್ಪಚ್ಚು ರಂಜನ್ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು ಪ್ರಾಕೃತಿಕ ವಿಕೋಪ ಹಾಗೂ ಕೊರೊನಾ ಹಿನ್ನೆಲೆಯಲ್ಲಿ ಕಳೆದ ಮೂರು ವರ್ಷಗಳಿಂದ ದಸರಾವನ್ನು ಸರಳವಾಗಿ ಆಚರಿಸಲಾಗಿತ್ತು. ಈ ಬಾರಿಯಿಂದ ವಿಜೃಂಭಣೆಯಿAದ ಆಚರಿಸಲಾಗುತ್ತಿದೆ. ದಸರಾ ಹಾಗೂ ಮತ್ತಿತರ ಕಾರ್ಯಕ್ರಮಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಗಾಂಧಿ ಮೈದಾನದಲ್ಲಿ ಶಾಶ್ವತ ಗ್ಯಾಲರಿ ನಿರ್ಮಿಸಲಾಗಿದೆ. ಗ್ರೇಟರ್ ರಾಜಾಸೀಟ್ ಯೋಜನೆ ಕೈಗೊಳ್ಳಲಾಗಿದೆ. ಗಾಂಧಿ ಭವನ, ಕ್ರಿಟಿಕಲ್ ಕೇರ್ ಸೆಂಟರ್ ಯೋಜನೆಗಳ ಕೆಲಸಗಳನ್ನು ಕೂಡ ಆದಷ್ಟು ಶೀಘ್ರವಾಗಿ ಆರಂಭಿಸ ಲಾಗುವುದು ಎಂದು ಹೇಳಿದರು. ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಮಾತನಾಡಿ ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಮನೋಲ್ಲಾಸ ದೊರೆಯುತ್ತದೆ ಎಂದು ನುಡಿದರು. ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಮಾತನಾಡಿ ನಾಡಿಗೆ ಒಳಿತಾಗಲಿ ಎಂದು ಆಶಿಸಿದರು. ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ, ದಸರಾ ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಹರೀಶ್ ಅಣ್ವೇಕರ್ ಇವರುಗಳು ಮಾತನಾಡಿದರು. ದಸರಾ ಸಮಿತಿ ಅಧ್ಯಕ್ಷೆ ಅನಿತಾ ಪೂವಯ್ಯ ಪ್ರಾಸ್ತಾವಿಕ ನುಡಿಯಾಡಿದರು. ವೇದಿಕೆಯಲ್ಲಿ ದಸರಾ ಸಮಿತಿ ಉಪಾಧ್ಯಕ್ಷೆ ಸವಿತಾ ರಾಕೇಶ್, ಕಾರ್ಯಧ್ಯಕ್ಷ ಕೆ.ಎಸ್. ರಮೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ, ನಗರಸಭಾ ಆಯುಕ್ತ ವಿಜಯ, ನಗರಸಭಾ ಸದಸ್ಯರುಗಳು, ದಸರಾ ಸಮಿತಿ ಪದಾಧಿಕಾರಿಗಳು, ದಸರಾ ಉಪ ಸಮಿತಿ ಅಧ್ಯಕ್ಷರುಗಳು ಉಪಸ್ಥಿತರಿದ್ದರು. ಇದೇ ಸಂದರ್ಭ ಯುವ ದಸರಾ ಪ್ರೋಮೋವನ್ನು ಶಾಸಕ ಅಪ್ಪಚ್ಚು ರಂಜನ್ ಅನಾವರಣಗೊಳಿಸಿದರು. ಪ್ರತಿಭಾ ಮಧುಕರ್ ಪ್ರಾರ್ಥಿಸಿ, ದಸರಾ ಸಾಂಸ್ಕೃತಿಕ ಸಮಿತಿ ಮಾಜಿ ಅಧ್ಯಕ್ಷ ಎಚ್.ಟಿ. ಅನಿಲ್ ನಿರೂಪಿಸಿದರು. ದಸರಾ ಸಮಿತಿ ಪ್ರಧಾನ ಕಾರ್ಯದರ್ಶಿ ರಾಜೇಶ್ ಯಲ್ಲಪ್ಪ ಸ್ವಾಗತಿಸಿ, ಖಜಾಂಚಿ ಶ್ವೇತಾ ವಂದಿಸಿದರು.