ಕೂಡಿಗೆ, ಸೆ. ೨೭: ತೊರೆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕ ಅಳುವಾರದ ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರದಲ್ಲಿ ವಿದ್ಯಾರ್ಥಿ ಗಳಿಗೆ ಕ್ರೀಡಾ ಚಟುವಟಿಕೆಗಳಿಗೆ ಅನುಕೂಲ ವಾಗುವಂತೆ ರೂ. ೫ ಲಕ್ಷ ವೆಚ್ಚದಲ್ಲಿ ಮೈದಾನ ನಿರ್ಮಾಣಕ್ಕೆ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಭೂಮಿ ಪೂಜೆಯನ್ನು ನೆರವೇರಿಸಿದರು.

ನಂತರ ಮಾತನಾಡಿದ ಅವರು, ಈಗಾಗಲೇ ಚಿಕ್ಕ ಅಳುವಾರದ ಸ್ನಾತಕೋತ್ತರ ಕೇಂದ್ರವು ಕೊಡಗು ಜಿಲ್ಲೆಯ ಜ್ಞಾನ ಕಾವೇರಿ ವಿಶ್ವವಿದ್ಯಾಲಯ ಅಗಿದೆ. ಮುಂದಿನ ದಿನಗಳಲ್ಲಿ ಕುಲಸಚಿವರನ್ನು ಸರಕಾರದ ಮೂಲಕ ನೇಮಕ ಮಾಡಲಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ತೊರೆನೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೂಪ, ಉಪಾಧ್ಯಕ್ಷ ನಂತರ ಮಾತನಾಡಿದ ಅವರು, ಈಗಾಗಲೇ ಚಿಕ್ಕ ಅಳುವಾರದ ಸ್ನಾತಕೋತ್ತರ ಕೇಂದ್ರವು ಕೊಡಗು ಜಿಲ್ಲೆಯ ಜ್ಞಾನ ಕಾವೇರಿ ವಿಶ್ವವಿದ್ಯಾಲಯ ಅಗಿದೆ. ಮುಂದಿನ ದಿನಗಳಲ್ಲಿ ಕುಲಸಚಿವರನ್ನು ಸರಕಾರದ ಮೂಲಕ ನೇಮಕ ಮಾಡಲಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ತೊರೆನೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೂಪ, ಉಪಾಧ್ಯಕ್ಷ ಬೇಬಿಯಣ್ಣ, ಸ್ನಾತಕೋತ್ತರ ಕೇಂದ್ರದ ನಿರ್ದೇಶಕ ಪ್ರೊ. ಚಂದ್ರಶೇಖರಯ್ಯ, ಸದಸ್ಯರಾದ ಕೆ.ಬಿ. ದೇವರಾಜ್, ಟಿ.ಸಿ. ಶಿವಕುಮಾರ್, ಸಾವಿತ್ರಿ, ತೀರ್ಥಾನಂದ, ಮಹದೇವ ಶೋಭ, ಯಶೋಧ, ನೀರಾವರಿ ಇಲಾಖೆಯ ಇಂಜಿನಿಯರ್ ಸತ್ಯ ಸೇರಿದಂತೆ ಸ್ನಾತಕೋತ್ತರ ಕೇಂದ್ರದ ಪ್ರಾಧ್ಯಾಪಕ ವೃಂದ ಸೇರಿದಂತೆ ವಿವಿಧ ಘಟಕದ ಪದಾಧಿಕಾರಿಗಳು ಹಾಜರಿದ್ದರು.