ಸೋಮವಾರಪೇಟೆ, ಸೆ. ೨೮: ತಾಲೂಕಿನ ಗಣಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಡುಂಡೆ ಗ್ರಾಮದ ಶ್ರೀ ಬಸವೇಶ್ವರ ದೇವಾಲಯ ಅಭಿವೃದ್ಧಿಗೆ ಮುಜರಾಯಿ ಇಲಾಖೆಯಡಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಅವರು ರೂ. ೪ಲಕ್ಷ ಅನುದಾನ ಒದಗಿಸಿದ್ದಾರೆ.

ಬಸವೇಶ್ವರ ದೇವಾಲಯ ಅಭಿವೃದ್ಧಿಗೆ ಸಂಬAಧಿಸಿದAತೆ ಕಾರ್ಯಾದೇಶ ಪತ್ರ ವಿತರಿಸಿ ಮಾತನಾಡಿದ ಶಾಸಕರು, ರಾಜ್ಯ ಸರ್ಕಾರ ಗ್ರಾಮೀಣ ಭಾಗದ ದೇವಾಲಯಗಳ ನಿರ್ಮಾಣ ಹಾಗೂ ನವೀಕರಣಕ್ಕೆ ಅನುದಾನ ಒದಗಿಸುತ್ತಿದೆ. ದೇವಾಲಯ ನಿರ್ಮಾಣದಿಂದ ಗ್ರಾಮದಲ್ಲಿ ಸಾಮರಸ್ಯ ಮೂಡುತ್ತದೆ ಎಂದು ಅಭಿಪ್ರಾಯಿಸಿದರು.

ಇದೇ ಸಂದರ್ಭ ದೇವಾಲಯ ಸಮಿತಿ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಶಾಸಕರನ್ನು ಅಭಿನಂದಿಸಿದರು. ದೇವಾಲಯ ಸಮಿತಿ ಅಧ್ಯಕ್ಷ ಹೂವಯ್ಯ, ಕಾರ್ಯದರ್ಶಿ ಡಿ.ವಿ. ಹರೀಶ್, ಪ್ರಮುಖರಾದ ಬಿ.ಆರ್. ಈರಪ್ಪ, ಪಿ.ಬಿ. ಸೋಮಣ್ಣ, ಕೆ.ಕೆ. ಗಗನ್, ಕೆ.ಎಂ. ತಿಮ್ಮಯ್ಯ, ವಿಮಲಾಕ್ಷಿ, ಹೆಚ್.ಸಿ. ರಾಮಕೃಷ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.