ಸೋಮವಾರಪೇಟೆ / ಕುಶಾಲನಗರ / ಸುಂಟಿಕೊಪ್ಪ, ಸೆ. ೨೭: ದೇಶದಲ್ಲಿ ಪಿ.ಎಫ್.ಐ ಹಾಗೂ ಎಸ್.ಡಿ.ಪಿ.ಐ. ಸಂಘಟನೆಗಳು ಭಯೋತ್ಪಾದಕ ಚಟುವಟಿಕೆಗಳಿಗೆ ಸಹಕಾರ ನೀಡುತ್ತಿವೆ ಎಂಬ ಆರೋಪದ ಹಿನ್ನೆಲೆ ಇತ್ತೀಚೆಗೆ ರಾಷ್ಟಿçÃಯ ಗುಪ್ತಚರ ಇಲಾಖೆ (ಎನ್.ಐ.ಎ.) ದೇಶ ಹಾಗೂ ರಾಜ್ಯದ ವಿವಿಧೆಡೆ ಸಂಘಟನೆಗಳ ಮುಖಂಡರನ್ನು ಬಂಧಿಸಿ

ತನಿಖೆಗೆ ಒಳಪಡಿಸಿತ್ತು.

ಈ ವಿಷಯಾಧಾರಿತವಾಗಿ ಜಿಲ್ಲೆಯಲ್ಲಿಯೂ ಪ್ರತಿಭಟನೆ ನಡೆಸಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಸಾಧ್ಯತೆ ಇದೆ ಎಂಬ ಗುಪ್ತಚರ ಇಲಾಖೆಯ ವರದಿಯ ಹಿನ್ನೆಲೆಯಲ್ಲಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ರಾಜ್ಯ ಸಂಘಟನಾ ಕಾರ್ಯದರ್ಶಿ, ಜಿಲ್ಲೆಯ ಕೊಡ್ಲಿಪೇಟೆ ನಿವಾಸಿ ಅಫ್ಸರ್ (೪೨), ಸೋಮವಾರಪೇಟೆ ತಾಲೂಕು ತಣ್ಣೀರುಹಳ್ಳ ನಿವಾಸಿ ಪಿ.ಎಫ್.ಐ. ಮುಖಂಡ ಹ್ಯಾರಿಸ್ (೩೭) ಎಂಬವರನ್ನು ಮುಂಜಾಗ್ರತವಾಗಿ ಪೊಲೀಸರು ಬಂಧಿಸಿದ್ದಾರೆ.

ಅಫ್ಸರ್ ಅವರನ್ನು ಶನಿವಾರಸಂತೆ ಪೊಲೀಸರು ಹಾಸನದಲ್ಲಿ ವಶಕ್ಕೆ ಪಡೆದಿದ್ದಾರೆ. ಹ್ಯಾರಿಸ್ ಅವರನ್ನು ಕುಶಾಲನಗರ ಗ್ರಾಮಾಂತರ ಪೊಲೀಸರು ಸುಂಟಿಕೊಪ್ಪದಲ್ಲಿ ವಶಕ್ಕೆ ತೆಗೆದುಕೊಂಡಿದ್ದಾರೆ. ಕಳೆದ ವಾರವಷ್ಟೇ ದೇಶಾದ್ಯಂತ ಪಿಎಫ್‌ಐ ಸಂಘಟನೆಯ ಕಚೇರಿ ಮೇಲೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿ, ದಾಖಲೆಗಳೊಂದಿಗೆ ಸಂಘಟನೆಯ ಕಾರ್ಯಕರ್ತರು ಹಾಗೂ ಮುಖಂಡರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದು, ಇದರ ಮುಂದುವರೆದ ಭಾಗವಾಗಿ ಜಿಲ್ಲೆಯಲ್ಲೂ ಎಸ್‌ಡಿಪಿಐ ಹಾಗೂ ಪಿಎಫ್‌ಐ ಸಂಘಟನೆಯ ಕಾರ್ಯಕರ್ತರನ್ನು ಸ್ಥಳೀಯ ಪೊಲೀಸರು ವಶಕ್ಕೆ ಪಡೆಯುತ್ತಿದ್ದಾರೆ.

ಎನ್‌ಐಎ ಅಧಿಕಾರಿಗಳ ತನಿಖೆ ಸಂದರ್ಭ ಹಲವಷ್ಟು ಮಾಹಿತಿಗಳು ಹೊರಬಿದ್ದಿದ್ದು, ಈ ಬಗ್ಗೆ ಅಧಿಕಾರಿಗಳು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿಗೆ ವರದಿ ರವಾನಿಸಿದ್ದಾರೆ ಎನ್ನಲಾಗಿದೆ. ಆ ಮಾಹಿತಿಯ ಹಿನ್ನೆಲೆ ರಾಜ್ಯದ ವಿವಿಧೆಡೆ ಎಸ್‌ಡಿಪಿಐ ಹಾಗೂ ಪಿಎಫ್‌ಐ ಸಂಘಟನೆಗಳ ಕಾರ್ಯಕರ್ತರನ್ನು ಮುಂಜಾಗ್ರತಾ ಕ್ರಮವಾಗಿ ಪೊಲೀಸರು ವಶಕ್ಕೆ ಪಡೆಯುತ್ತಿದ್ದಾರೆ.

ಜಿಲ್ಲೆಗೆ ಒತ್ತಿಕೊಂಡಿರುವ ಮಂಗಳೂರು, ಮೈಸೂರುಗಳಲ್ಲೂ ಈ ಸಂಘಟನೆಯ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದರ ಬೆನ್ನಲ್ಲೇ ಎಸ್‌ಡಿಪಿಐ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ, ಅಫ್ಸರ್ ಕೊಡ್ಲಿಪೇಟೆಯನ್ನು ಶನಿವಾರಸಂತೆ ಪೊಲೀಸ್ ಇನ್ಸ್ಪೆಕ್ಟರ್ ಪರಶಿವಮೂರ್ತಿ ನೇತೃತ್ವದ ತಂಡ ಹಾಸನದಲ್ಲಿ ವಶಕ್ಕೆ ಪಡೆದಿದೆ.

ಕಲ್ಲಾರೆಯ ನಿವಾಸಿಯಾಗಿರುವ ಅಫ್ಸರ್ ಕೊಡ್ಲಿಪೇಟೆ, ಸದ್ಯ ಹಾಸನದ ಚಿಪ್ಪಿನಕಟ್ಟೆ ಮಟನ್ ಮಾರ್ಕೆಟ್ ಏರಿಯಾದಲ್ಲಿ ಇರುವ ಬಗ್ಗೆ ಮಾಹಿತಿ ಪಡೆದ ಪೊಲೀಸರ ತಂಡ ನಿನ್ನೆ ರಾತ್ರಿ ಹಾಸನಕ್ಕೆ ತೆರಳಿದ್ದು, ಇಂದು ಪೂರ್ವಾಹ್ನ ೧೧.೩೦ರ ಸುಮಾರಿಗೆ ವಶಕ್ಕೆ ಪಡೆದು, ಶನಿವಾರಸಂತೆ ಠಾಣೆಗೆ ಕರೆತಂದಿದ್ದಾರೆ.

ಎನ್‌ಐಎ ದಾಳಿ ಖಂಡಿಸಿ ಪಿಎಫ್‌ಐ ಮತ್ತು ಎಸ್‌ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆ, ಮುಖಂಡರು ಪ್ರಚೋದನಕಾರಿ ಭಾಷಣ ಮಾಡಿ ಕಾನೂನು ಸುವ್ಯವಸ್ಥೆಗೆ ಭಂಗ ತರುವ ಸಾಧ್ಯತೆಯ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಬಂಧಿಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಅಫ್ಸರ್ ಕೊಡ್ಲಿಪೇಟೆ ಈ ಹಿಂದೆ ನಡೆದ ಹಲವಷ್ಟು ಪ್ರತಿಭಟನೆಗಳಲ್ಲಿ ಭಾಗವಹಿಸಿ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಪ್ರಸ್ತುತ ಎನ್‌ಐಎ ಧಾಳಿಯ ಬಗ್ಗೆ ಪ್ರತಿಭಟನೆಗಳು ನಡೆಯುತ್ತಿರುವ ಹಿನ್ನೆಲೆ ಭಾರತೀಯ ದಂಡ ಸಂಹಿತೆ ೧೦೭ ಅಡಿಯಲ್ಲಿ ನೋಟೀಸ್ ನೀಡಿ, ೧೫೧ ಸಿಆರ್‌ಪಿಸಿ ಅಡಿಯಲ್ಲಿ ಬಂಧಿಸಲಾಗಿದೆ.

ಬAಧಿತ ಅಫ್ಸರ್‌ನನ್ನು ಸೋಮವಾರಪೇಟೆ ತಾಲೂಕು ದಂಡಾಧಿಕಾರಿಗಳ ನ್ಯಾಯಾಲಯದ ಎದುರು ಹಾಜರುಪಡಿಸಲಾಗಿದೆ. ಶನಿವಾರಸಂತೆ ಪೊಲೀಸ್ ಇನ್ಸ್ಪೆಕ್ಟರ್ ಪರಶಿವಮೂರ್ತಿ, ಸಿಬ್ಬಂದಿಗಳಾದ ಬೋಪಣ್ಣ, ಲೋಕೇಶ್, ಸುರೇಶ್, ಮುರುಳಿ ಅವರುಗಳು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ಪಡೆದಿರುವ ಅಫ್ಸರ್ ಕೊಡ್ಲಿಪೇಟೆಯನ್ನು ತಾಲೂಕು ದಂಡಾಧಿಕಾರಿಗಳ ನ್ಯಾಯಾಲಯಕ್ಕೆ ಹಾಜರುಪಡಿಸಿದ ಹಿನ್ನೆಲೆ ದಂಡಾಧಿಕಾರಿಗಳಾದ ನರಗುಂದ್ ಅವರು ತಾ. ೦೧.೧೦.೨೦೨೨ರವರೆಗೆ (ಮುಂದಿನ ೫ ದಿನಗಳ ಕಾಲ) ನ್ಯಾಯಾಂಗ ಬಂಧನಕ್ಕೆ ಒಳಪಡಿಸಿ ಆದೇಶ ನೀಡಿದ್ದಾರೆ.

ಸುಂಟಿಕೊಪ್ಪದಲ್ಲಿ ಹ್ಯಾರಿಸ್ ಬಂಧನ

ಸೋಮವಾರಪೇಟೆ ತಣ್ಣೀರುಹಳ್ಳ ನಿವಾಸಿ ಹ್ಯಾರಿಸ್ ಅನ್ನು ಸುಂಟಿಕೊಪ್ಪದಲ್ಲಿ ಪೊಲೀಸರು ಬಂಧಿಸಿದರು.

(ಮೊದಲ ಪುಟದಿಂದ) ಪ್ರವೀಣ್ ಪೂಜಾರಿ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿದ್ದು ನಂತರ ಪ್ರಕರಣದಲ್ಲಿ ಖುಲಾಸೆಗೊಂಡು, ಎಂಟಕ್ಕೂ ಅಧಿಕ ಶಾಂತಿ ಭಂಗ ಮತ್ತಿತರ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎಂದು ಕುಶಾಲನಗರ ತಾಲೂಕು ದಂಡಾಧಿಕಾರಿ ಟಿ.ಎಂ ಪ್ರಕಾಶ್ ತಿಳಿಸಿದ್ದಾರೆ.

ರಾಜ್ಯ ಪೊಲೀಸ್ ಕಾನೂನು ವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ನಿರ್ದೇಶನದಂತೆ ರಾಜ್ಯದ ಎಲ್ಲೆಡೆ ಪಿಎಫ್‌ಐ ಮುಖಂಡರು, ಸಕ್ರಿಯ ಕಾರ್ಯಕರ್ತರ ಬಂಧನ ಆಗುತ್ತಿದ್ದು, ಕಳೆದ ಕೆಲವು ಸಮಯಗಳಿಂದ ನೆರೆಯ ಪುತ್ತೂರು ವ್ಯಾಪ್ತಿಯಲ್ಲಿ ನೆಲೆಸಿದ್ದು, ಇತ್ತೀಚೆಗಷ್ಟೇ ಸುಂಟಿಕೊಪ್ಪದ ಮುಖ್ಯ ರಸ್ತೆ ಬಳಿ ಬಾಡಿಗೆ ಮನೆ ಒಂದರಲ್ಲಿ ತನ್ನ ಪತ್ನಿಯೊಂದಿಗೆ ನೆಲೆಸಿದ್ದ ಎನ್ನುವ ಮಾಹಿತಿ ತಿಳಿದು ಬಂದಿದೆ. ಹಿರಿಯ ಪೊಲೀಸ್ ಅಧಿಕಾರಿಗಳ ಸೂಚನೆಯಂತೆ, ಮಂಗಳವಾರ ಮುಂಜಾನೆ ದಿಢೀರ್ ದಾಳಿ ನಡೆಸಿದ ಸಭಾಂಗಣದಲ್ಲಿ ಆಯಾಯ ದಿನಗಳಂದು ಬೆಳಿಗ್ಗೆ ೧೧ ಗಂಟೆಯಿAದ ಮಧ್ಯಾಹ್ನ ೧ ಗಂಟೆಯವರೆಗೆ ಕರ್ನಾಟಕ ಲೋಕಾಯುಕ್ತ ಕಾಯಿದೆ ಅಡಿ ದೂರು ಅರ್ಜಿ ಸ್ವೀಕರಿಸಲಿದ್ದಾರೆ. ಭರ್ತಿ ಮಾಡಿದ ಮತ್ತು ನೋಟರಿಯಿಂದ ಅಫಿಡೆವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದು.

ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದು. ಹಾಗೂ ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಲಂಚದ ಹಣಕ್ಕೆ ಬೇಡಿಕೆ ಇಡುವ ಅಧಿಕಾರಿ ಹಾಗೂ ಸಿಬ್ಬಂದಿಗಳ ವಿರುದ್ಧ ಮಾಹಿತಿ ನೀಡಬಹುದು. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಠಾಣೆ, ಗೌಳಿಬೀದಿ, ಮಡಿಕೇರಿ-೦೮೨೭೨-೨೯೫೨೯೭ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.