ಸೋಮವಾರಪೇಟೆ, ಸೆ. ೨೭: ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಸೋಮವಾರಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ ಸಂದರ್ಭ ‘ಪೇ ಸಿ.ಎಂ.’ ಪೋಸ್ಟರ್ ಪ್ರದರ್ಶಿಸಿದ ಹಿನ್ನೆಲೆ ಪೊಲೀಸರು ಬಂಧಿಸಿ, ನಂತರ ಬಿಡುಗಡೆಗೊಳಿಸಿದರು.
ಇಲ್ಲಿನ ಕಕ್ಕೆಹೊಳೆ ಜಂಕ್ಷನ್ನಿAದ ಪ್ರತಿಭಟನಾ ಮೆರವಣಿಗೆ ಹೊರಟ ಕಾಂಗ್ರೆಸ್ ಕಾರ್ಯಕರ್ತರು, ರಾಜ್ಯ ಬಿ.ಜೆ.ಪಿ. ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ರಾಜ್ಯ ಸರ್ಕಾರ ೪೦% ಕಮಿಷನ್ ಸರ್ಕಾರವಾಗಿದೆ ಎಂದು ಆರೋಪಿಸಿದರು.
ಇಲ್ಲಿನ ಖಾಸಗಿ ಬಸ್ ನಿಲ್ದಾಣಕ್ಕೆ ಆಗಮಿಸಿದ ಕಾರ್ಯಕರ್ತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಮುಖ್ಯಮಂತ್ರಿಗಳು ಹಾಗೂ ಮಡಿಕೇರಿ ಕ್ಷೇತ್ರದ ಶಾಸಕರ ವಿರುದ್ಧ ಧಿಕ್ಕಾರ ಕೂಗಿದರು. ಪ್ರತಿಭಟನೆಯ ನಡುವೆ ಕೆಲ ಕಾರ್ಯಕರ್ತರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಭಾವಚಿತ್ರ ಒಳಗೊಂಡ ಪೇ ಸಿ.ಎಂ. ಪೋಸ್ಟರ್ಗಳನ್ನು ಪ್ರದರ್ಶಿಸಲು ಮುಂದಾಗುತ್ತಿದ್ದAತೆ ಪೊಲೀಸರು ಮಧ್ಯೆ ಪ್ರವೇಶಿಸಿದರು.
ಪ್ರತಿಭಟನಾಕಾರರು ‘ಪೇ ಸಿ.ಎಂ.’ ಪೋಸ್ಟರ್ಗಳನ್ನು ಖಾಸಗಿ ಬಸ್ ನಿಲ್ದಾಣದ ಪುಟ್ಟಪ್ಪ ವೃತ್ತದಲ್ಲಿ ಅಂಟಿಸಲು ಯತ್ನಿಸಿದ ಸಂದರ್ಭ ತಡೆಯೊಡ್ಡಿದ ಪೊಲೀಸ್ ಸಿಬ್ಬಂದಿಗಳು, ಪೋಸ್ಟರ್ಗಳನ್ನು ಕಿತ್ತು ಕಾರ್ಯಕರ್ತರನ್ನು ವಶಕ್ಕೆ ಪಡೆದರು.
ನಂತರ ಡಿ.ಎ.ಆರ್. ವಾಹನದಲ್ಲಿ ಸಮೀಪದ ಸಾಕ್ಷಿ ಸಭಾಂಗಣಕ್ಕೆ ಕರೆದೊಯ್ದು, ನಂತರ ಬಿಡುಗಡೆಗೊಳಿಸಿದರು. ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ. ಸತೀಶ್, ಮಾಜಿ ಅಧ್ಯಕ್ಷ ಕೆ.ಎಂ. ಲೋಕೇಶ್, ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ಹಾನಗಲ್ಲು, ಅಲ್ಪಸಂಖ್ಯಾತ ಘಟಕದ ಕೆ.ಎ. ಯಾಕೂಬ್, ಎಸ್ಸಿ ಎಸ್ಟಿ ಘಟಕದ ರಾಜ್ಯ ಸಂಯೋಜಕ ಬಿ.ಇ. ಜಯೇಂದ್ರ, ಪ್ರಮುಖರಾದ ವಿ.ಎ. ಲಾರೆನ್ಸ್, ಕಾಂಗ್ರೆಸ್ ನಗರಾಧ್ಯಕ್ಷ ಹೆಚ್.ಎ. ನಾಗರಾಜು, ದಾಮೋದರ್, ದಿನೇಶ್, ಸುರೇಶ್ ಸೇರಿದಂತೆ ಇತರರು ಭಾಗವಹಿಸಿದ್ದರು.
ಪೊಲೀಸ್ ಇನ್ಸ್ಪೆಕ್ಟರ್ ರಾಮಚಂದ್ರ ನಾಯಕ್, ಠಾಣಾಧಿಕಾರಿ ರಮೇಶ್ಕುಮಾರ್ ನೇತೃತ್ವದಲ್ಲಿ ಸ್ಥಳೀಯ ಪೊಲೀಸ್ ಸಿಬ್ಬಂದಿಗಳು, ಡಿ.ಎ.ಆರ್. ತುಕಡಿಯ ಪೊಲೀಸರು ಬಂದೋಬಸ್ತ್ ಕಲ್ಪಿಸಿದ್ದರು.