ಸೋಮವಾರಪೇಟೆ, ಸೆ. ೨೭: ಇಲ್ಲಿನ ನಗರ ಒಕ್ಕಲಿಗರ ಸಂಘದ ವಾರ್ಷಿಕ ಮಹಾಸಭೆಯು ಅಧ್ಯಕ್ಷ ಎಂ.ಎA. ಪ್ರಕಾಶ್‌ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಒಕ್ಕಲಿಗರ ಸಮುದಾಯ ಭವನದಲ್ಲಿ ನಡೆಯಿತು.
ನಗರ ವ್ಯಾಪ್ತಿಯಲ್ಲಿರುವ ಒಕ್ಕಲಿಗ ಸಮುದಾಯ ಬಾಂಧವರನ್ನು ಇನ್ನಷ್ಟು ಸಂಘಟಿಸುವ ನಿಟ್ಟಿನಲ್ಲಿ ಕಾರ್ಯ ಕ್ರಮಗಳನ್ನು ಹಮ್ಮಿ ಕೊಳ್ಳುವಂತೆ ತೀರ್ಮಾನಿಸಲಾಯಿತು. ಇದೇ ಸಂದರ್ಭ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ಸಂಘದ ಸದಸ್ಯರ ಮಕ್ಕಳಿಗೆ ಪ್ರೋತ್ಸಾಹ ಧನ ನೀಡಲಾಯಿತು. ಕಾರ್ಯಕ್ರಮದಲ್ಲಿ ರಾಜ್ಯ ಒಕ್ಕಲಿಗರ ಸಂಘದ ಜಿಲ್ಲಾ ನಿರ್ದೇಶಕ ಮತ್ತು ರಾಜ್ಯ ಕಾರ್ಯಾಧ್ಯಕ್ಷರೂ ಆಗಿರುವ ಹರಪಳ್ಳಿ ರವೀಂದ್ರ ಮತ್ತು ಒಕ್ಕಲಿಗರ ಯುವ ವೇದಿಕೆ ಅಧ್ಯಕ್ಷ ಚಕ್ರವರ್ತಿ ಸುರೇಶ್ ಅವರನ್ನು ಸನ್ಮಾನಿಸಲಾಯಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಹರಪಳ್ಳಿ ರವೀಂದ್ರ, ಒಕ್ಕಲಿಗ ಸಮುದಾಯದವರು ರಾಜಕೀಯ, ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಮುಂದೆ ಬರಬೇಕು. ಸಮುದಾಯದ ಏಳಿಗೆಗೆ ಶ್ರಮಿಸಬೇಕು ಎಂದರು. ರಾಜ್ಯ ಸಂಘದಿAದ ಲಭಿಸುವ ಎಲ್ಲಾ ರೀತಿಯ ಸೌಕರ್ಯ ಗಳನ್ನು ಕೊಡಗಿಗೆ ಬಳಸಿಕೊಳ್ಳಲು ಪ್ರಯತ್ನಿಸ ಲಾಗುವುದು ಎಂದ ಅವರು, ಸಮುದಾಯದ ಯಾವೊಬ್ಬ ಮಗುವೂ ಕೂಡ ಶಿಕ್ಷಣದಿಂದ ವಂಚಿತ ಗೊಳ್ಳದಂತೆ ನೋಡಿಕೊಳ್ಳ ಬೇಕೆಂದು ಕರೆ ನೀಡಿದರು. ಸಭೆಯಲ್ಲಿ ಪದಾಧಿಕಾರಿಗಳಾದ ಬನ್ನಳ್ಳಿ ಗೋಪಾಲ್, ವಿ.ಸಿ. ಲೋಕೇಶ್, ಶರತ್‌ಚಂದ್ರ, ಜಾನಕಿ ವೆಂಕಟೇಶ್, ಎಂ.ಬಿ. ಉಮೇಶ್, ವೀರರಾಜು, ಯೋಗೇಂದ್ರ, ಹಾಲಪ್ಪ, ರಾಜು ಸೇರಿದಂತೆ ಇತರರು ಉಪಸ್ಥಿತರಿದ್ದರು.