ನವದೆಹಲಿ, ಸೆ. ೨೮: ದೇಶವಿರೋಧಿ ಚಟುವಟಿಕೆ ಆರೋಪದ ಹಿನ್ನೆಲೆಯಲ್ಲಿ ದೇಶದಾದ್ಯಂತ ಐದು ವರ್ಷಗಳ ಕಾಲ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸಂಘಟನೆಯನ್ನು ನಿಷೇಧ ಮಾಡಿ ಕೇಂದ್ರ ಸರ್ಕಾರ ಇಂದು ಆದೇಶ ಹೊರಡಿಸಿದೆ.
ಕೇಂದ್ರ ಗೃಹ ಇಲಾಖೆ ಈ ಕುರಿತಂತೆ ಆದೇಶ ಹೊರಡಿಸಿದ್ದು, ಎನ್ಐಎ ದಾಳಿಯ ಬೆನ್ನಲ್ಲೇ ಈ ಮಹತ್ವದ ನಿರ್ಧಾರ ಕೈಗೊಂಡಿದೆ.
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮತ್ತು ಅದರ ಸಹವರ್ತಿಗಳು ಅಥವಾ ಅಂಗಸAಸ್ಥೆಗಳನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ದೇಶದಾದ್ಯಂತ ಐದು ವರ್ಷಗಳ ಕಾಲ ನಿಷೇಧಿಸಲಾಗಿದ್ದು, ಇದು ಕಾನೂನು ಬಾಹಿರ ಸಂಘಟನೆ ಎಂದು ಘೋಷಣೆ ಮಾಡಿದೆ.
ಪಿಎಫ್ಐ ನಿಷೇಧ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ತನ್ನ ಅಧಿಸೂಚನೆಯಲ್ಲಿ ನೀಡಿರುವ ವಿವರಣೆಯಲ್ಲಿ ಕರ್ನಾಟಕ ಸರ್ಕಾರದ ಶಿಫಾರಸು, ಗುಜರಾತ್ ಮತ್ತಿತರ ಅನೇಕ ರಾಜ್ಯಗಳ ಶಿಫಾರಸ್ಸನ್ನು ಉಲ್ಲೇಖಿಸಲಾಗಿದೆ. ಜೊತೆಗೆ ಪ್ರವೀಣ್ ನೆಟ್ಟಾರು ಕೊಲೆಯನ್ನು ಉಲ್ಲೇಖಿಸಲಾಗಿದೆ.
ಪಿಎಫ್ಐ ಜೊತೆಗಿದ್ದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (ಸಿಎಫ್ಐ) ನ್ಯಾಷನಲ್ ವುಮೆನ್ಸ್ ಫ್ರಂಟ್ (ಎನ್ಡಬ್ಲುö್ಯಎಫ್) ಜೂನಿಯರ್ ಫ್ರಂಟ್(ಜೆಎಫ್),ರಿಹ್ಯಾಬ್ ಇಂಡಿಯಾ ಫೌಂಡೇಶನ್ (ಆರ್ಐಎಫ್), ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ (ಎಐಐಸಿ) ನ್ಯಾಷನಲ್ ಕಾನ್ಫೆಡರೇಶನ್ ಆಫ್ ಹೂಮನ್ ರೈಟ್ಸ್ ಆರ್ಗನೈಸೇಶನ್ (ಎನ್ಸಿಹೆಚ್ಆರ್ಒ), ಎಂಪವರ್ ಇಂಡಿಯಾ ಫೌಂಡೇಶನ್ (ಇಐಎಫ್). ಸಂಘಟನೆಗಳನ್ನು ಕೂಡ ನಿಷೇಧ ಮಾಡಲಾಗಿದೆ.
ನಿಷೇಧದ ಬೆನ್ನಲ್ಲೇ ಸಂಘಟನೆ ಹಾಗೂ ಅದರ ಅಂಗಸAಸ್ಥೆಗಳ ವೆಬ್ಸೈಟ್, ಸಾಮಾಜಿಕ ಮಾಧ್ಯಮ ಖಾತೆಗಳನ್ನ
(ಮೊದಲ ಪುಟದಿಂದ) ನಿರ್ಬಂಧಿಸುವAತೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಆದೇಶದ ಭಾಗವಾಗಿ, ಅಧಿಕೃತ ವೆಬ್ಸೈಟ್ಗಳು, ಟ್ವಿಟರ್, ಫೇಸ್ಬುಕ್, ಇನ್ಸ್ಟಾಗ್ರಾಮ್ ಖಾತೆಗಳು, ಯೂಟ್ಯೂಬ್ ಚಾನೆಲ್ಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ. ಈ ಸಂಘಟನೆಗಳ ನಿಧಿ ಸಂಗ್ರಹಾತಿಗೆ ತಡೆಯೊಡ್ಡಲಾಗಿದೆ. ಈ ಸಂಘಟನೆಯು ಯಾವುದೇ ರೀತಿಯ ಪತ್ರಿಕಾ ಹೇಳಿಕೆಗಳನ್ನು ನೀಡದಂತೆ ನಿರ್ಬಂಧಿಸಲಾಗಿದೆ
ಕರ್ನಾಟಕ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸುವಂತೆ ಪೊಲೀಸ್ ಇಲಾಖೆಯ ಮುಖ್ಯಸ್ಥರಾದ ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಪೊಲೀಸರಿಗೆ ಸೂಚಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಸ್ಥಳೀಯವಾಗಿ ಶಾಂತಿ ಸಭೆಗಳನ್ನು ನಡೆಸಲು ಸೂಚಿಸಲಾಗಿದೆ. ಶಾಂತಿ ಕದಡಲು ಯತ್ನಿಸುವವರನ್ನು ವಶಕ್ಕೆ ಪಡೆಯುವಂತೆ ಸೂಚಿಸಲಾಗಿದೆ. ಮುಂದಿನ ದಿನಗಳಲ್ಲಿ ಜಿಲ್ಲಾಮಟ್ಟದಲ್ಲಿ ಆಯಾ ಜಿಲ್ಲಾಧಿಕಾರಿಗಳು ಪ್ರತ್ಯೇಕ ಆದೇಶ ಹೊರಡಿಸಿ, ನಿಷೇಧದ ಬಗ್ಗೆ ಸ್ಪಷ್ಟ ಸೂಚನೆ ನೀಡಲಿದ್ದಾರೆ ಎಂದು ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಹೇಳಿದರು.
ನಿಷೇಧದ ವಿರುದ್ಧ ಯಾರಾದರೂ ಪ್ರತಿಭಟನೆ, ಘರ್ಷಣೆ ಮಾಡಿದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಪೊಲೀಸರು ಜಾಗೃತರಾಗಿದ್ದು, ಕಠಿಣ ಕ್ರಮ ಕೈಗೊಳ್ಳಲಿದ್ದಾರೆ ಎಂದು ಪ್ರವೀಣ್ ಸೂದ್ ಎಚ್ಚರಿಕೆ ನೀಡಿದ್ದಾರೆ.
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ೨೦೦೬ ರಲ್ಲಿ ಕೇರಳದಲ್ಲಿ ಸ್ಥಾಪನೆಯಾಯಿತು. ಸಮಾಜಮುಖಿ ಕಾರ್ಯಗಳನ್ನು ಮಾಡುವ ಉದ್ದೇಶದಿಂದ ಇದು ಪ್ರಾರಂಭವಾಯಿತು ಎಂದು ಹೇಳಲಾಗಿತ್ತು. ಆದರೆ, ಬಳಿಕ ಅನೇಕ ಕ್ರಿಮಿನಲ್ ಪ್ರಕರಣಗಳಲ್ಲಿ ದೇಶವಿರೋಧಿ ಕೃತ್ಯಗಳಿಗೆ ಪ್ರಚೋದಿಸುವ ಕೆಲಸವನ್ನು ಪಿಎಫ್ಐ ಮಾಡುತ್ತಿದೆ ಎಂಬ ಅರೋಪಗಳು ಬಹಳ ಕೇಳಿಬರಲಾರಂಭಿಸಿದವು. ಸರಕಾರ ಬಹಳ ಕ್ಷಿಪ್ರವಾಗಿ ಕಾರ್ಯೋನ್ಮುಖವಾಗಿ ನಿಷೇಧಕ್ಕೆ ಅಗತ್ಯವಾಗಿರುವ ಸಾಕ್ಷಾö್ಯಧಾರಗಳನ್ನು ಕಲೆಹಾಕಲು ಸೆಪ್ಟೆಂಬರ್ ೨೨ ಮತ್ತು ೨೭ರಂದು ಎರಡು ದಿನ ತನಿಖಾ ಸಂಸ್ಥೆಗಳಿAದ ದಾಳಿ ಮಾಡಿಸಿದೆ ಎನ್ನಲಾಗಿದೆ. ಮೊದಲ ಸುತ್ತಿನ ದಾಳಿಯಲ್ಲಿ ಪಿಎಫ್ಐಗೆ ಸೇರಿದ ೧೦೬ ಮಂದಿಯನ್ನು ಬಂಧಿಸಲಾಗಿತ್ತು. ಎರಡನೇ ಸುತ್ತಿನ ದಾಳಿಯಲ್ಲಿ, ೨೪೭ ಜನರನ್ನು ಬಂಧಿಸಲಾಗಿತ್ತು. ಪಿಎಫ್ಐಗೆ ವಿದೇಶಗಳಿಂದ ನಿಧಿ ಬರುತ್ತಿರುವ ಬಗ್ಗೆ ‘ಇಡಿ’ ಬಳಿ ಖಚಿತ ಮಾಹಿತಿ ಇದೆ. ಹಾಗೆಯೇ ಈ ಸಂಘಟನೆಯನ್ನು ನಿಷೇಧಿಸುವಂತೆ ಹಲವು ರಾಜ್ಯಗಳು ಒತ್ತಾಯಿಸಿದ್ದವು. ಇದರ ಮಧ್ಯೆ ಇತ್ತೀಚಿಗೆ ನಡೆದ ಕೇಂದ್ರೀಯ ತನಿಖಾ ತಂಡಗಳ ದಾಳಿ ನಂತರದÀಲ್ಲಿ ಅವು ನೀಡಿರುವ ವರದಿಯನ್ನು ಆಧಾರವಾಗಿ ಇಟ್ಟುಕೊಂಡು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಾಯಕತ್ವದಲ್ಲಿ ಕಾನೂನು ವಿರುದ್ಧ ಕೃತ್ಯಗಳಿಗೆ ಎಡೆಯಿಲ್ಲ ಎಂಬ ನಿರ್ಣಯ ಸ್ಪಷ್ಟವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.