ಮಡಿಕೇರಿ, ಸೆ. ೨೭: ಅರುಣ ಪದವಿಪೂರ್ವ ಕಾಲೇಜು ಚೇರಂಬಾಣೆಯ ಸಂಯುಕ್ತ ಆಶ್ರಯದಲ್ಲಿ ನಡೆದ ಮಡಿಕೇರಿ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಸಿದ್ದಾಪುರ ಪ್ರೌಢಶಾಲೆ ಬಾಲಕಿಯರು ಕಬಡ್ಡಿ ಪಂದ್ಯಾಟದಲ್ಲಿ ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ. ೯ನೇ ತರಗತಿ ದೀಪ್ತಿ ವೈಯಕ್ತಿಕ ಚಾಂಪಿಯನ್ ಶಿಪ್, ೧೦೦ ಮೀಟರ್‌ನಲ್ಲಿ ಪ್ರಥಮ, ದೂರ ಜಿಗಿತದಲ್ಲಿ ಪ್ರಥಮ ಹಾಗೂ ಎತ್ತರ ಜಿಗಿತದಲ್ಲಿ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾಳೆ. ಶಾಲಾ ಆಡಳಿತ ಮಂಡಳಿಯವರು, ಶಾಲಾ ಮುಖ್ಯ ಶಿಕ್ಷಕ ಬಾಬು ನಾಯಕ್, ಶಿಕ್ಷಕ ವೃಂದದವರು ಮಾರ್ಗದರ್ಶನ ನೀಡಿದ್ದರು.