ಪಿಎಫ್ಐ, ಎಸ್.ಡಿ.ಪಿ.ಐ. ಪ್ರಮುಖರುಗಳ ಬಂಧನ
ಬೆAಗಳೂರು, ಸೆ. ೨೭: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಹಾಗೂ ಎಸ್.ಡಿ.ಪಿ.ಐ. ವಿರುದ್ಧದ ಕಾರ್ಯಾಚರಣೆ ಮುಂದುವರೆಸಿರುವ ಕರ್ನಾಟಕ ಪೊಲೀಸರು ಇಂದು ಮುಂಜಾನೆ ತಮ್ಮ ೨ ಹಂತದ ದಾಳಿಗಳನ್ನು ನಡೆಸಿದ್ದು, ಈ ವೇಳೆ ರಾಜ್ಯಾದ್ಯಂತ ಸುಮಾರು ೧೧೦ ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ರಾಜ್ಯದ ೧೦ ಜಿಲ್ಲೆಗಳಲ್ಲಿ ಪಿಎಫ್ಐ ಹಾಗೂ ಎಸ್.ಡಿ.ಪಿ.ಐ. ಕಚೇರಿಗಳು ಮತ್ತು ಕಾರ್ಯಕರ್ತರ ಮನೆ ಮೇಲೆ ದಾಳಿ ನಡೆಸಿರುವ ರಾಷ್ಟಿçÃಯ ತನಿಖಾ ಸಂಸ್ಥೆ (ಎನ್ಐಎ) ಅಧಿಕಾರಿಗಳು ಹಲವರನ್ನು ವಶಕ್ಕೆ ಪಡೆದು, ಕೆಲವರನ್ನು ಬಂಧಿಸಿದ್ದಾರೆ. ಕರ್ನಾಟಕ ಪೊಲೀಸರು ಸೋಮವಾರ ಮಧ್ಯರಾತ್ರಿ ರಾಜ್ಯಾದ್ಯಂತ ೭೦ ಜನರನ್ನು ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಕಳೆದ ವಾರ ಕಾನೂನು ಮತ್ತು ಸುವ್ಯವಸ್ಥೆಗೆ ಕಾರಣವಾದ ೧೫ ಪಿಎಫ್ಐ ಸದಸ್ಯರ ಬಂಧನದ ವಿರುದ್ಧ ಪ್ರತಿಭಟಿಸಿದ ಸಮಾಜವಿರೋಧಿ ನಡವಳಿಕೆಯ ಹಿಂದಿನ ಇತಿಹಾಸ ಹೊಂದಿರುವವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ರಾಜ್ಯ ಪೊಲೀಸರು ಕಳೆದ ವಾರ ಬೆಂಗಳೂರು ಮತ್ತು ಮಂಗಳೂರು ನಗರಗಳು, ದಕ್ಷಿಣ ಕನ್ನಡ ಜಿಲ್ಲೆ, ಶಿವಮೊಗ್ಗ, ಕೊಪ್ಪಳ, ದಾವಣಗೆರೆ, ಕೊಡಗು, ಉಡುಪಿ, ಮೈಸೂರು ಮತ್ತು ಕಲಬುರಗಿಯಲ್ಲಿ ಪಿಎಫ್ಐ ಸದಸ್ಯರ ೧೮ ಸ್ಥಳಗಳ ಮೇಲೆ ದಾಳಿ ನಡೆಸಿ ೧೫ ಪಿಎಫ್ಐ ಕಾರ್ಯಕರ್ತರನ್ನು ಬಂಧಿಸಿದ್ದರು. ರಾಷ್ಟಿçÃಯ ತನಿಖಾ ಸಂಸ್ಥೆ (ಎನ್ಐಎ) ಮತ್ತು ಜಾರಿ ನಿರ್ದೇಶನಾಲಯ (ಇಡಿ) ಕಳೆದ ವಾರ ಎನ್ಐಎ ದಾಖಲಿಸಿದ ಐದು ಪ್ರಕರಣಗಳಲ್ಲಿ ಪಿಎಫ್ಐ ವಿರುದ್ಧ ದೇಶವ್ಯಾಪಿ ದಾಳಿಯಲ್ಲಿ ಕರ್ನಾಟಕದಿಂದ ಏಳು ಮಂದಿಯನ್ನು ಬಂಧಿಸಿತ್ತು. ಪೊಲೀಸ್ ಪ್ರಾಥಮಿಕ ವರದಿಗಳ ಪ್ರಕಾರ ರಾಜ್ಯದ ೧೨ ಜಿಲ್ಲೆಗಳಲ್ಲಿ ದಾಳಿ ಮಾಡಲಾಗಿದೆ.
ಶಿವಮೂರ್ತಿ ಶರಣರ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ
ಚಿತ್ರದುರ್ಗ, ಸೆ. ೨೭: ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ ೧೦ ರವರೆಗೆ ವಿಸ್ತರಿಸಿ ಕೋರ್ಟ್ ಆದೇಶಿಸಿದೆ. ಎರಡನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಬಿ.ಕೆ. ಕೋಮಲಾ ಅವರು ಆರೋಪಿ ಸಂಖ್ಯೆ ೨, ಹಾಸ್ಟೆಲ್ ವಾರ್ಡನ್ ರಶ್ಮಿ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಸಹ ಅಕ್ಟೋಬರ್ ೧೦ ರವರೆಗೆ ವಿಸ್ತರಿಸಿದ್ದಾರೆ. ಆರೋಪಿಯ ನ್ಯಾಯಾಂಗ ಬಂಧನ ಅವಧಿ ಇಂದು ಅಂತ್ಯಗೊAಡ ಹಿನ್ನೆಲೆ ಶ್ರೀಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ಕೋರ್ಟ್ ಅಕ್ಟೋಬರ್ ೧೦ ರವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ. ನಂತರ ಶ್ರೀಗಳನ್ನು ಜಿಲ್ಲಾ ಕೇಂದ್ರ ಕಾರಾಗೃಹಕ್ಕೆ ಕರೆದೊಯ್ಯಲಾಯಿತು.
ಗೂಗಲ್ ನೀತಿ ಮುಖ್ಯಸ್ಥೆ ಅರ್ಚನಾ ರಾಜೀನಾಮೆ
ನವದೆಹಲಿ, ಸೆ. ೨೭: ಐದು ತಿಂಗಳ ಹಿಂದಷ್ಟೇ ಸರ್ಕಾರಿ ಸೇವೆ ತೊರೆದು ಟೆಕ್ ದೈತ್ಯ ಸಂಸ್ಥೆಗೆ ಸೇರಿದ್ದ ಗೂಗಲ್ ಇಂಡಿಯಾದ ಸರ್ಕಾರಿ ವ್ಯವಹಾರಗಳು ಮತ್ತು ಸಾರ್ವಜನಿಕ ನೀತಿ ಮುಖ್ಯಸ್ಥೆ ಅರ್ಚನಾ ಗುಲಾಟಿ ಅವರು ಮಂಗಳವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅರ್ಥಶಾಸ್ತç ಪದವೀಧರೆಯಾಗಿರುವ ಮತ್ತು ಐಐಟಿ-ದೆಹಲಿಯಿಂದ ಪಿಎಚ್ಡಿ ಪಡೆದಿರುವ ಗುಲಾಟಿ ಅವರು ಗೂಗಲ್ ಇಂಡಿಯಾಗೆ ಸೇರುವ ಮೊದಲು ನೀತಿ ಆಯೋಗದ ಜಂಟಿ ಕಾರ್ಯದರ್ಶಿ (ಡಿಜಿಟಲ್ ಕಮ್ಯುನಿಕೇಷನ್ಸ್) ಆಗಿದ್ದರು. ಗುಲಾಟಿ ಅವರು ಗೂಗಲ್ ಇಂಡಿಯಾಗೆ ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಗುಲಾಟಿ ಮತ್ತು ಗೂಗಲ್ ಅನ್ನು ಸಂಪರ್ಕಿಸಿದಾಗ ಈ ವಿಷಯದ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. ಆದರೆ ಅವರು ಏಕೆ ರಾಜೀನಾಮೆ ನೀಡಿದರು ಎಂಬುದು ಇನ್ನೂ ತಿಳಿದು ಬಂದಿಲ್ಲ.
ಭಾರತ್ ಜೋಡೋ ಸಂಬAಧದ ಪಿಐಎಲ್ ವಜಾ
ಕೊಚ್ಚಿ, ಸೆ. ೨೭: ಕಾಂಗ್ರೆಸ್ ಪಕ್ಷವು ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆಯಿಂದಾಗಿ ಟ್ರಾಫಿಕ್ ಜಾಮ್ ಉಂಟಾಗದAತೆ ನೋಡಿಕೊಳ್ಳಲು ರಾಜ್ಯ ಸರ್ಕಾರ ಮತ್ತು ಪೊಲೀಸರಿಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಕೇರಳ ಹೈಕೋರ್ಟ್ ವಜಾಗೊಳಿಸಿದೆ. ಪಾದಯಾತ್ರೆ ಶಾಂತಿಯುತವಾಗಿ ನಡೆಯುತ್ತಿದ್ದು, ಕಾನೂನು ಬಾಹಿರ ಚಟುವಟಿಕೆ ಕಂಡು ಬಂದಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಕೇರಳ ಸರ್ಕಾರ ಹೇಳಿದ ನಂತರ ಮುಖ್ಯ ನ್ಯಾಯಮೂರ್ತಿ ಎಸ್. ಮಣಿಕುಮಾರ್ ಮತ್ತು ನ್ಯಾಯಮೂರ್ತಿ ಶಾಜಿ ಪಿ. ಚಾಲಿ ಅವರಿದ್ದ ಪೀಠವು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ತಿರಸ್ಕರಿಸಿತು. ರಾಜ್ಯದ ಹೇಳಿಕೆಗಳನ್ನು ಪರಿಗಣಿಸಿರುವ ನ್ಯಾಯಾಲಯ, ಪಾದಯಾತ್ರೆ ನಡೆಸುತ್ತಿರುವುದು ಟ್ರಾಫಿಕ್ ಜಾಮ್ಗೆ ಕಾರಣವಾಗುತ್ತಿದೆ ಎಂಬ ತನ್ನ ಆರೋಪವನ್ನು ಸಾಬೀತುಪಡಿಸಲು ಅರ್ಜಿದಾರ ವಕೀಲರಿಗೆ ಸಾಧ್ಯವಾಗಿಲ್ಲ ಎಂದು ಹೇಳಿದೆ. ಯಾತ್ರೆಯನ್ನು ಶಾಂತಿಯುತವಾಗಿ ನಡೆಸುವಂತೆ ಪೊಲೀಸರು ಯಾತ್ರೆಯ ಸಂಘಟಕರಿಗೆ ಸೂಚಿಸಿದ್ದಾರೆ ಎಂದು ರಾಜ್ಯವು ಪೀಠಕ್ಕೆ ತಿಳಿಸಿದೆ. ವಕೀಲ ವಿಜಯನ್ ಕೆ ಅವರ ಮನವಿಯಲ್ಲಿ, ಕಾಂಗ್ರೆಸ್ ನಾಯಕ ಮತ್ತು ವಯನಾಡ್ ಸಂಸದ ರಾಹುಲ್ ಗಾಂಧಿ ನೇತೃತ್ವದ ಯಾತ್ರೆಯು ರಸ್ತೆಯ ಅರ್ಧದಷ್ಟು ಭಾಗವನ್ನು ಮಾತ್ರ ತೆಗೆದುಕೊಳ್ಳಬೇಕು ಮತ್ತು ಉಳಿದ ಭಾಗವನ್ನು ವಾಹನಗಳ ಮುಕ್ತ ಸಂಚಾರಕ್ಕೆ ಬಿಡಬೇಕು ಎಂಬುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಹೇಳಿದ್ದರು.
ತ್ರಿಪಥ ಹೆದ್ದಾರಿ ಯೋಜನೆ ಕೈಬಿಡಲು ಪತ್ರ
ಬೆಂಗಳೂರು, ಸೆ. ೨೭: ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ಬೆಂಗಳೂರಿನಲ್ಲಿ ಪ್ರವಾಹ ಪರಿಸ್ಥಿತಿಯಿಂದ ಉಂಟಾದ ಅನಾಹುತದ ನಂತರ ಗ್ರೀನ್ ಪೀಸ್ ಇಂಡಿಯಾ ಸಂಸ್ಥೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದೆ. ತ್ರಿಪಥ ಹೆದ್ದಾರಿ ನಿರ್ಮಾಣ ಯೋಜನೆ ಅವೈಜ್ಞಾನಿಕವಾಗಿರುವುದರಿಂದ ಈ ಯೋಜನೆ ರದ್ದುಗೊಳಿಸಬೇಕೆಂದು ಗ್ರೀನ್ ಪೀಸ್ ಇಂಡಿಯಾ ಸಿಎಂ ಬೊಮ್ಮಾಯಿ ಅವರಿಗೆ ಪತ್ರ ಬರೆದಿದೆ. ನಗರಕ್ಕೆ ಹಾಗೂ ಬೆಂಗಳೂರಿನ ನಾಗರಿಕರಿಗೆ ಅನಾನುಕೂಲವಾಗುವಂತ ಹೆಚ್ಚಿನ ಮೇಲ್ಸೇತುವೆ ಹಾಗೂ ಎಲಿವೇಟೆಡ್ ಕಾರಿಡಾರ್ ಗಳನ್ನು ನಿರ್ಮಿಸಬಾರದು ಎಂದು ಹೇಳಿದೆ. ಖಾಸಗಿ ವಾಹನಗಳ ಹೆಚ್ಚು ಬಳಕೆಯನ್ನು ನಿರ್ಬಂಧಿಸಿ ಸಾರ್ವಜನಿಕ ಸಾರಿಗೆ ಬಳಸಲು ಜನರಿಗೆ ಹೆಚ್ಚಿನ ಅವಕಾಶ ಮಾಡಿಕೊಡಬೇಕೆಂದು ಗ್ರೀನ್ ಪೀಸ್ ಇಂಡಿಯಾ ಅಭಿಯಾನದ ಮ್ಯಾನೇಜರ್ ಅವಿನಾಶ್ ಕುಮಾರ್ ಚಂಚಲ್ ಸಲಹೆ ನೀಡಿದ್ದಾರೆ.
ಪಂಚಾಯಿತಿ ಚುನಾವಣೆ ಪೂರ್ಣಗೊಳಿಸಲು ಹೊಸ ಗಡುವು ನೀಡಿದ ಹೈಕೋರ್ಟ್
ಬೆಂಗಳೂರು, ಸೆ. ೨೭: ತಾಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ಪೂರ್ಣಗೊಳಿಸಲು ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಹೊಸ ಗಡುವು ನೀಡಿದೆ. ತಾಲೂಕು ಮತ್ತು ಜಿಲ್ಲಾ ಪಂಚಾಯತ್ಗಳ ವಿಂಗಡಣೆ ಕಾರ್ಯವನ್ನು ಪೂರ್ಣಗೊಳಿಸಿ, ಹೆಚ್ಚುವರಿ ೧೨ ವಾರಗಳಲ್ಲಿ ಎಸ್ಸಿ, ಎಸ್ಟಿ, ಒಬಿಸಿ ಮತ್ತು ಇತರ ವರ್ಗಗಳಿಗೆ ಮೀಸಲಾತಿ ಕಲ್ಪಿಸಿ, ಚುನಾವಣೆ ನಡೆಸಲು ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಈ ಹಿಂದಿನ ಮೇ ೨೪, ೨೦೨೨ ರ ಆದೇಶವನ್ನು ಮಾರ್ಪಡಿಸುವಂತೆ ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ವಿಲೇವಾರಿ ಮಾಡುವಾಗ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ಮತ್ತು ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರ ವಿಭಾಗೀಯ ಪೀಠವು ಈ ಆದೇಶ ನೀಡಿದೆ. ರಾಜ್ಯ ಚುನಾವಣಾ ಆಯೋಗವು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ಕಾಯಿದೆ, ೨೦೨೧ ರ ನಿಬಂಧನೆಗಳು ಅಸಂವಿಧಾನಿಕ ಎಂಬ ಘೋಷಣೆಯ ಕುರಿತಂತೆ ಪರಿಹಾರ ಕೋರಿ ರಿಟ್ ಅರ್ಜಿಯನ್ನು ಸಲ್ಲಿಸಿದೆ. ಅರ್ಜಿದಾರರು ಮಾರ್ಚ್ ೩೦, ೨೦೨೧ ರ ಡಿಲಿಮಿಟೇಶನ್ ಅಧಿಸೂಚನೆ ಮತ್ತು ಜುಲೈ ೧, ೨೦೨೧ ದಿನಾಂಕದ ಮೀಸಲಾತಿ ಅಧಿಸೂಚನೆಗೆ ಅನುಗುಣವಾಗಿ ಎಲ್ಲಾ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿಗಳಿಗೆ ಚುನಾವಣೆಯ ಪ್ರಕ್ರಿಯೆಯನ್ನು ಪ್ರಾರಂಭಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನವನ್ನು ಕೋರಿದ್ದರು.