ಮಡಿಕೇರಿ, ಸೆ. ೨೮: ಸೋಮವಾರಪೇಟೆ ತಾಲೂಕಿನ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇದ್ದ ೧೬ ಅಂಗನವಾಡಿ ಕೇಂದ್ರದ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ತಾತ್ಕಾಲಿಕವಾಗಿ ಗುರುತಿಸಿ ಆಯ್ಕೆ ಮಾಡಲಾದ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ.

ಪಟ್ಟಿಯಲ್ಲಿರುವ ಅಂಗನವಾಡಿ ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆಗಳೇನಾದರೂ ಇದ್ದಲ್ಲಿ ಅಕ್ಟೋಬರ್ ೩ ರ ಸಂಜೆ ೫.೩೦ ರೊಳಗೆ ಶಿಶು ಅಭಿವೃದ್ಧಿ ಯೋಜನಾ ಕಚೇರಿ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸ್ತಿçÃಶಕ್ತಿ ಭವನ ಕಟ್ಟಡ, ತಾಲೂಕು ಪಂಚಾಯಿತಿ ಕಚೇರಿ ಆವರಣ, ಸೋಮವಾರಪೇಟೆ, ಇವರಿಗೆ ಕಚೇರಿ ವೇಳೆಯಲ್ಲಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ದೂ. ೦೮೨೭೬-೨೮೨೨೮೧ ನ್ನು ಸಂಪರ್ಕಿಸಬಹುದು ಎಂದು ಸೋಮವಾರಪೇಟೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಳಿಸಿದ್ದಾರೆ.