ಮಡಿಕೇರಿ, ಸೆ. ೨೮: ನಗರದ ಫೀ.ಮಾ. ಕಾರ್ಯಪ್ಪ ವೃತ್ತದಿಂದ ಸುದರ್ಶನ ಅತಿಥಿ ಗೃಹಕ್ಕೆ ತೆರಳುವ ರಸ್ತೆಯ ಬಸ್ ತಂಗುದಾಣದ ಬಳಿ ಯಾಸಿನ್ ಪಾಷ ಎಂಬಾತ ಒಂದು ಜೀವಂತ ನಕ್ಷತ್ರ ಆಮೆಯನ್ನು ವಶದಲ್ಲಿಟ್ಟುಕೊಂಡು ಮಾರಾಟ ಮಾಡಲು ಪ್ರಯತ್ನಿಸುತ್ತಿರುವಾಗ ಪತ್ತೆ ಮಾಡಿದ ಸಿಐಡಿ ಪೊಲೀಸ್ ಅರಣ್ಯ ಘಟಕ ಆರೋಪಿಯನ್ನು ವಶಕ್ಕೆ ಪಡೆದುಕೊಂಡು ಬಂಧಿಸಿದೆ.
ಸಿಐಡಿ ಪೊಲೀಸ್ ಅರಣ್ಯ ಘಟಕದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಕೆ.ವಿ. ಶರತ್‌ಚಂದ್ರ ಅವರ ನಿರ್ದೇಶನ, ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯ ಘಟಕದ ಪೊಲೀಸ್ ಅಧೀಕ್ಷಕ ಕೆ.ಬಿ. ವಿಶ್ವನಾಥ್ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಮಡಿಕೇರಿ ಅರಣ್ಯ ಸಂಚಾರಿ ದಳದ ಪಿಎಸ್‌ಐ ಸಿ.ಯು. ಸವಿ, ಹೆಡ್ ಕಾನ್ಸ್ಟೇಬಲ್ ಗಳಾದ ಶೇಖರ್, ರಾಜೇಶ್, ರಾಘವೇಂದ್ರ, ಯೋಗೇಶ್, ಮೋಹನ ಮತ್ತು ಕಾನ್ಸ್ಟೇಬಲ್‌ಗಳಾದ ಸ್ವಾಮಿ, ಮಂಜುನಾಥ ಪಾಲ್ಗೊಂಡಿದ್ದರು.