ಮಡಿಕೇರಿ, ಸೆ. ೨೭: ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ, ನಗರಸಭೆ, ಗ್ರೀನ್ ಸಿಟಿ ಫೋರಂ ಸಂಯುಕ್ತ ಆಶ್ರಯದಲ್ಲಿ ಪ್ರವಾಸೋದ್ಯಮ ಹಾಗೂ ಪರಿಸರ ಜಾಗೃತಿಗಾಗಿ ವಾಕಥಾನ್ ಹಮ್ಮಿಕೊಳ್ಳಲಾಗಿತ್ತು.

ನಗರದ ಗದ್ದುಗೆ ಬಳಿ ಬೆಳಿಗ್ಗೆ ೭ ಗಂಟೆಗೆ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಜಾಗೃತಿ ಫಲಕದಲ್ಲಿ ಸಹಿ ಮಾಡುವ ಮೂಲಕ ಚಾಲನೆ ನೀಡಿದರು. ಮುಖ್ಯ ರಸ್ತೆ ಮೂಲಕ ಸಾಗಿದ ನಡಿಗೆ ಗಾಂಧಿ ಮೈದಾನದಲ್ಲಿ ಸಮಾಪ್ತಿಗೊಂಡಿತು. ನಂತರ ಗಾಂಧಿ ಮೈದಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ನಗರ ಸಭಾ ಅಧ್ಯಕ್ಷೆ ಅನಿತಾ ಪೂವಯ್ಯ, ಸದಸ್ಯೆ ಸಬಿತಾ, ನಗರ ಸಭಾ ಆಯುಕ್ತ ವಿಜಯ, ಪರಿಸರ ಅಭಿಯಂತರೆ ಸೌಮ್ಯ, ಗ್ರೀನ್ ಸಿಟಿ ಫೋರಂನ ಸತ್ಯ, ಮೊಂತಿ ಗಣೇಶ್, ಆರೋಹಣ ತಂಡದ ಕೆ.ಕೆ. ಮಹೇಶ್ ಕುಮಾರ್ ಹಾಗೂ ಸದಸ್ಯರುಗಳು, ಸಾರ್ವಜನಿಕರು ಪಾಲ್ಗೊಂಡಿದ್ದರು.